ಅಧಿಕಾರಿಗಳಿಗೆ ಶಾಸಕರಿಂದ ತರಾಟೆ

KannadaprabhaNewsNetwork |  
Published : Jun 08, 2026, 04:00 AM IST
ಅಥಣಿ | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಅಥಣಿ ಪಟ್ಟಣದ ಹೃದಯ ಭಾಗದ ಐತಿಹಾಸಿಕ ಜೋಡಿ ಕೆರೆಗಳ ಅಭಿವೃದ್ಧಿ ಮತ್ತು ಭಾಗೀರಥಿ ನಾಲಾ ಕಾಮಗಾರಿಗಳು ಆಮೆಗತಿಯಲ್ಲಿ ಸಾಗಿದ್ದು, ಶನಿವಾರ ಶಾಸಕ ಲಕ್ಷ್ಮಣ ಸವದಿ ಆಕಸ್ಮಿಕ ಭೇಟಿ ನೀಡಿ ಜೋಡಿಕೆರೆ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದರು.

ಕನ್ನಡಪ್ರಭ ವಾರ್ತೆ ಅಥಣಿ

ಪಟ್ಟಣದ ಹೃದಯ ಭಾಗದ ಐತಿಹಾಸಿಕ ಜೋಡಿ ಕೆರೆಗಳ ಅಭಿವೃದ್ಧಿ ಮತ್ತು ಭಾಗೀರಥಿ ನಾಲಾ ಕಾಮಗಾರಿಗಳು ಆಮೆಗತಿಯಲ್ಲಿ ಸಾಗಿದ್ದು, ಶನಿವಾರ ಶಾಸಕ ಲಕ್ಷ್ಮಣ ಸವದಿ ಆಕಸ್ಮಿಕ ಭೇಟಿ ನೀಡಿ ಜೋಡಿಕೆರೆ ಅಭಿವೃದ್ಧಿ ಕಾಮಗಾರಿಯನ್ನು ವೀಕ್ಷಿಸಿದರು.

ಈ ವೇಳೆ ಶಾಸಕ ಲಕ್ಷ್ಮಣ ಸವದಿ ಕಾಮಗಾರಿಯನ್ನು ವಿಳಂಬ ಮಾಡುತ್ತಿರುವ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರನಿಗೆ ತರಾಟೆಗೆ ತೆಗೆದುಕೊಂಡು ಆಡಳಿತ ಸದಸ್ಯರಿಗೂ ಚುರುಕು ಮುಟ್ಟಿಸಿದರು. ಪಟ್ಟಣದ ಸೌಂದರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಈ ಜೋಡಿ ಕೆರೆಗಳನ್ನು ಸುಂದರವಾಗಿ ಅಭಿವೃದ್ಧಿ ಪಡಿಸಲು ಮತ್ತು ನಾಲಾ ಅಭಿವೃದ್ಧಿಪಡಿಸಲು ₹ 25 ಕೋಟಿ ಅನುದಾನವನ್ನು ಪುರಸಭೆಗೆ ಒದಗಿಸಲಾಗಿದೆ. ಈ ಅನುದಾನವನ್ನ ಸದ್ಬಳಕೆ ಮಾಡಿಕೊಂಡು ಪಟ್ಟಣದ ಅಭಿವೃದ್ಧಿಗೆ ಶ್ರಮಿಸಬೇಕಾದ ಆಡಳಿತ ಮಂಡಳಿಯ ಸದಸ್ಯರು ಮತ್ತು ಅಧಿಕಾರಿಗಳು ನಿರ್ಲಕ್ಷ ವಹಿಸುತ್ತಿದ್ದೀರಿ, ಶೀಘ್ರದಲ್ಲಿಯೇ ಮಳೆಗಾಲ ಆರಂಭವಾಗಲಿದೆ. ಮೊದಲ ಹಂತದ ಕಾಮಗಾರಿಯನ್ನು ಉತ್ತಮ ಗುಣಮಟ್ಟದೊಂದಿಗೆ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಗುತ್ತಿಗೆದಾರನಿಗೆ ಎಚ್ಚರಿಕೆ ನೀಡಿದರು.

ಈ ವೇಳೆ ಪುರಸಭೆಯ ಮುಖ್ಯಾಧಿಕಾರಿ ಅಶೋಕ ಗುಡಿಮನಿ, ಪುರಸಭೆಯ ಸ್ಥಾಯಿ ಸಮಿತಿಯ ಅಧ್ಯಕ್ಷ ದತ್ತಾ ವಾಸ್ಟರ್, ಪುರಸಭೆ ಸದಸ್ಯರಾದ ಮಲ್ಲಿಕಾರ್ಜುನ ಬುಟಾಳಿ, ಸಂತೋಷ ಸಾವಡಕರ, ರಾಜಶೇಖರ ಗುಡ್ಡೂಡಗಿ, ಕಲ್ಲೇಶ ಮಡ್ಡಿ, ರಾಜು ಬುಲಬುಲೆ, ಬೀರಪ್ಪ ಯಕ್ಕಂಚಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಖಾಸಗಿ ಶಾಲೆ ಬಸ್‌
ಜಮಖಂಡಿ ವಿವಿಧೆಡೆ ಸರಿದ ಮಳೆ, ತಂಪಾದ ಇಳೆ