ಅಸ್ಪೃಶ್ಯ ಸಮುದಾಯಕ್ಕೆ ಸಿಗಬೇಕಾದ ಮೀಸಲಾತಿ ಹೋರಾಟಕ್ಕೆ ಶಾಸಕರು ಕೈಜೋಡಿಸಲಿ: ಸಿ.ಎಂ.ಕೃಷ್ಣ

KannadaprabhaNewsNetwork |  
Published : Nov 25, 2026, 02:00 AM IST
22ಕೆಎಂಎನ್ ಡಿ11 | Kannada Prabha

ಸಾರಾಂಶ

ಮೀಸಲಾತಿ ಹೆಸರಿನಲ್ಲಿ ಜಾತಿಗಳನ್ನು ಇಬ್ಭಾಗ ಮಾಡಿದ ಕಾಂಗ್ರೆಸ್ ಪಕ್ಷ ರಾಜಕೀಯವಾಗಿ ಬಳಸಿಕೊಳ್ಳಲು ಮೈಸೂರಿನಲ್ಲಿ ಸಂವಿಧಾನ ದಿನಾಚರಣೆಯನ್ನು ಹಮ್ಮಿಕೊಂಡಿದೆ. ಸಂವಿಧಾನದಡಿ ಪರಿಶಿಷ್ಟ ಜಾತಿಯಿಂದ ಬಂಜಾರ, ಲಂಬಾಣಿ, ಭೋವಿ, ಕೊರಮ, ಮತ್ತು ಕೊರಚ ಜಾತಿಯನ್ನು ತೆಗೆದು ಹಾಕಲು ಮೀಸಲು ಕ್ಷೇತ್ರದಲ್ಲಿ ಶಾಸಕರು ಹಾಗೂ ಸಚಿವರಾಗಿರುವ ಪಿ.ಎಂ.ನರೇಂದ್ರಸ್ವಾಮಿ ತಮ್ಮ ನಿಲುವು ಹಾಗೂ ಉದ್ದೇಶವನ್ನು ಸಾರ್ವಜನಿಕವಾಗಿ ಸ್ವಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಪರಿಶಿಷ್ಟ ಜಾತಿಯಿಂದ ಸ್ಪರ್ಶ ಓಬಿಸಿ ಜಾತಿಗಳಾದ ಬಂಜಾರ, ಲಂಬಾಣಿ, ಭೋವಿ, ಕೊರಮ ಮತ್ತು ಕೊರಚ ಜಾತಿಗಳನ್ನು ತೆಗೆದು ಹಾಕುವ ಮೂಲಕ ಅಸ್ಪೃಶ್ಯ ಸಮುದಾಯಕ್ಕೆ ಸಿಗಬೇಕಾದ ಮೀಸಲಾತಿಯನ್ನು ಕಲ್ಪಿಸಲು ಮೀಸಲು ಕ್ಷೇತ್ರದಿಂದ ಆಯ್ಕೆಯಾಗಿರುವ ಶಾಸಕರು ಹೋರಾಟಕ್ಕೆ ಕೈಜೋಡಿಸಬೇಕು ಎಂದು ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ಯುವ ಘಟಕದ ರಾಜ್ಯಾಧ್ಯಕ್ಷ ಸಿ.ಎಂ.ಕೃಷ್ಣ ಒತ್ತಾಯಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ ಪಟ್ಟಿಯಲ್ಲಿ ಅಸ್ಪೃಶ್ಯತೆ ಆಚರಣೆಗೆ ಒಳಪಂಗಡದ ಸಮುದಾಯಗಳನ್ನು ಕಾನೂನು ಬಾಹಿರವಾಗಿ ಸೇರ್ಪಡೆಗೊಳಿಸಿರುವುದು ಖಂಡನೀಯ. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ಎಸ್.ಸಿ ಸಮುದಾಯಕ್ಕೆ ಸೇರಬೇಕಾದ ಮೀಸಲಾತಿಯನ್ನು ತಪ್ಪಿಸಲು ಹುನ್ನಾರ ನಡೆಸುತ್ತಿವೆ ಎಂದು ಆರೋಪಿಸಿದರು.

ಸ್ಪರ್ಶ ಜಾತಿಗಳನ್ನು ತೆಗದುಹಾಕುವಂತೆ ಮಹೇಂದ್ರಕುಮಾರ್ ಮಿತ್ರ, ಸಿ.ಎಂ.ಕೃಷ್ಣ, ದೇವಮಿತ್ರ, ಮಾರುತಿರಾವ್ ಅವರು ಸರ್ವೊಚ್ಚ ನ್ಯಾಯಾಲಯದಲ್ಲಿ ಪಿಐಎಲ್ ಸಲ್ಲಿಸಿದ ಹಿನ್ನೆಲೆ ಪರಿಶಿಷ್ಟ ಜಾತಿಯಿಂದ ಸ್ಪರ್ಶ ಜಾತಿಗಳನ್ನು ತೆಗದುಹಾಕಲು ಸೂಕ್ತ ಪ್ರಸ್ತಾವನೆ ಸಲ್ಲಿಸುವಂತೆ ಎಸ್ಟಿ, ಎಸ್ಸಿ ರಾಜ್ಯದ ಮುಖ್ಯಕಾರ್ಯದರ್ಶಿಗೆ ಆದೇಶ ನೀಡಿದರೂ ಕೂಡ ಸರ್ಕಾರ ಪ್ರಸ್ತಾವಣೆ ಸಲ್ಲಿಸದೇ ಹಿಂದೇಟು ಹಾಕುತ್ತಿವೆ ಎಂದು ಕಿಡಿಕಾರಿದರು.

ಮೀಸಲಾತಿ ಹೆಸರಿನಲ್ಲಿ ಜಾತಿಗಳನ್ನು ಇಬ್ಭಾಗ ಮಾಡಿದ ಕಾಂಗ್ರೆಸ್ ಪಕ್ಷ ರಾಜಕೀಯವಾಗಿ ಬಳಸಿಕೊಳ್ಳಲು ಮೈಸೂರಿನಲ್ಲಿ ಸಂವಿಧಾನ ದಿನಾಚರಣೆಯನ್ನು ಹಮ್ಮಿಕೊಂಡಿದೆ. ಸಂವಿಧಾನದಡಿ ಪರಿಶಿಷ್ಟ ಜಾತಿಯಿಂದ ಬಂಜಾರ, ಲಂಬಾಣಿ, ಭೋವಿ, ಕೊರಮ, ಮತ್ತು ಕೊರಚ ಜಾತಿಯನ್ನು ತೆಗೆದು ಹಾಕಲು ಮೀಸಲು ಕ್ಷೇತ್ರದಲ್ಲಿ ಶಾಸಕರು ಹಾಗೂ ಸಚಿವರಾಗಿರುವ ಪಿ.ಎಂ.ನರೇಂದ್ರಸ್ವಾಮಿ ತಮ್ಮ ನಿಲುವು ಹಾಗೂ ಉದ್ದೇಶವನ್ನು ಸಾರ್ವಜನಿಕವಾಗಿ ಸ್ವಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಸರ್ಕಾರ ಕೂಡಲೇ ಕ್ರಮ ಕೈಗೊಳ್ಳದಿದ್ದರೇ ರಾಜ್ಯಾದ್ಯಂತ ಕಾಂಗ್ರೆಸ್ ಪಾರ್ಟಿ ಹಠಾವೋ ಪರಿಶಿಷ್ಟ ಜಾತಿ ಸಮುದಾಯಗಳ ಬಚಾವೋ ಎಂಬ ಜನಾಂದೋಲನವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಕೋಡಿಹಳ್ಳಿ ವೆಂಕಟೇಶ್, ಯುವ ಮುಖಂಡ ಸಿ.ಎಂ ಧನಂಜಯ್, ಮಂಜು, ಪ್ರಸನ್ನ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಶ್ರಯ ಮನೆಗಳ ಹಂಚಿಕೆ ಕನಸು ನನಸಾಗಿದೆ: ಸಚಿವ ರುದ್ರಪ್ಪ ಲಮಾಣಿ
ಕಾಯಂ ಮುಖ್ಯ ಶಿಕ್ಷಕರ ನೇಮಕಕ್ಕೆ ಪಟ್ಟು; ಗ್ರಾಮಸ್ಥರಿಂದ ಶಾಲೆಗೆ ಬೀಗ