- ಚನ್ನಗಿರಿಯಲ್ಲಿ ರಾಜ್ಯ ಬಿಜೆಪಿ ಪರಿಷತ್ ಸದಸ್ಯ ಮಾಡಾಳು ಮಲ್ಲಿಕಾರ್ಜುನ್ ಒತ್ತಾಯ
ಕನ್ನಡಪ್ರಭ ವಾರ್ತೆ ಚನ್ನಗಿರಿ
ಕ್ಷೇತ್ರದ ಜನರ ಜೀವನಾಡಿ ಉಬ್ರಾಣಿ ಏತನೀರಾವರಿ ಮತ್ತು ಸಾಸಿವೆಹಳ್ಳಿ ಏತನೀರಾವರಿ ಯೋಜನೆಗೆ ಒಳಪಡುವ ಎಲ್ಲ ಕೆರೆಗಳಿಗೆ ಸಮರ್ಪಕವಾಗಿ ನೀರನ್ನು ಹರಿಸದೇ, ನಿರ್ವಹಣೆ ಮಾಡದೇ ರೈತರಿಗೆ ವಂಚಿಸಲಾಗುತ್ತಿದೆ. ಈ ಕ್ಷೇತ್ರದ ಶಾಸಕರು ಸಮರ್ಪಕ ಆಡಳಿತ ನಡೆಸಲು ವಿಫಲರಾಗಿದ್ದಾರೆ. ಇಂತಹ ಅದಕ್ಷ ಶಾಸಕ ಕೂಡಲೇ ರಾಜೀನಾಮೆ ನೀಡಬೇಕು ಎಂದು ರಾಜ್ಯ ಬಿಜೆಪಿ ಪರಿಷತ್ ಸದಸ್ಯ ಮಾಡಾಳು ಮಲ್ಲಿಕಾರ್ಜುನ್ ಆಗ್ರಹಿಸಿದರು.ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಶಾಸಕರಾಗಿದ್ದ ಮಾಡಾಳು ವಿರೂಪಾಕ್ಷಪ್ಪ ಅವರು ಉಬ್ರಾಣಿ ಏತನೀರಾವರಿ ಯೋಜನೆಗೆ ಸಂಬಂಧಿಸಿದಂತೆ ನದಿಯಿಂದ ನೀರೆತ್ತುವ ಮೋಟರ್‌ಗಳು 20 ವರ್ಷಗಳಷ್ಟು ಹಳೆಯದಾಗಿವೆ. ಇವುಗಳನ್ನು ಬದಲಿಸಲು ಸರ್ಕಾರದಿಂದ ಹಣ ಮಂಜೂರು ಮಾಡಿಸಿ ಟೆಂಡರ್ ಪ್ರಕ್ರಿಯೆ ಪೂರ್ಣ ಗೊಳಿಸಿದ್ದರು. ಅನಂತರ ಬಂದ ಶಾಸಕರು ಮೋಟರ್ ಖರೀದಿಸಿದ ಗುತ್ತಿಗೆದಾರನಿಗೆ ಹಣ ಬಿಡುಗಡೆಯಾಗಿಲ್ಲ ಎಂದು ಇದುವರೆಗೂ ಹೊಸ ಮೋಟರ್‌ಗಳನ್ನು ಅಳವಡಿಸಿಲ್ಲ. ಉಬ್ರಾಣಿ ಏತನೀರಾವರಿ ಯೋಜನೆಯಲ್ಲಿ ಅರಾಜಕತೆ ಸೃಷ್ಠಿಯಾಗಿದೆ ಎಂದು ಆರೋಪಿಸಿದರು.
ಚುನಾಯಿತ ಪ್ರತಿನಿಧಿ ಬೇಜವಾಬ್ದಾರಿಯಿಂದ ಇದ್ದಾರೆ ಎಂದು ಅಧಿಕಾರಿಗಳು ಬೇಜವಾಬ್ದಾರಿ ತನದ ವರ್ತನೆ ಮಾಡಬೇಡಿ. ಆಡಳಿತ ವ್ಯವಸ್ಥೆ ಸುಸೂತ್ರವಾಗಿ ನಡೆಯಲಿ ಎಂದು ನಾನು ಇಲ್ಲಿಯವರೆಗೂ ಸುಮ್ಮನಿದ್ದೇನೆ. ಇದೇ ರೀತಿ ಮುಂದುವರೆದರೆ ಕ್ಷೇತ್ರದ ಜನರ ಹಿತಾಸಕ್ತಿಗೋಸ್ಕರ ಉಗ್ರ ಪ್ರತಿಭಟನೆ, ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸೂಳೆಕೆರೆಯಿಂದ ಚನ್ನಗಿರಿ ಪಟ್ಟಣ ಸೇರಿದಂತೆ ಇತರೆ 80 ಹಳ್ಳಿಗಳಿಗೆ ಕುಡಿಯುವ ನೀರನ್ನು ವಿತರಣೆ ಮಾಡುವ ಯೋಜನೆಯನ್ನು ನಮ್ಮ ಸರ್ಕಾರದ ಅವಧಿಯಲ್ಲಿ ಅನುಷ್ಠಾನಗೊಳಿಸಲಾಗಿತ್ತು. ಆದರೆ ಈಗ ಕಲುಷಿತ ನೀರು ವಿತರಣೆಯಾಗುತ್ತಿದೆ. ಸ್ಥಳೀಯ ಸರ್ಕಾರವಾಗಿರುವ ಪುರಸಭೆಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಹಣವಿಲ್ಲದೇ ಯಾವುದೇ ಕೆಲಸಗಳು ನಡೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
- - -
ನ್ಯಾಯಾಲಯದ ಆದೇಶ ನಾವು ಗೌರವನೀಡುತ್ತೇವೆ. ಆದರೆ ಎಲ್ಲರಿಗೂ ಒಂದೇ ಮಾನದಂಡದಲ್ಲಿ ಪುಟ್ ಪಾತ್ ಒತ್ತುವರಿ ತೆರವುಗೊಳಿಸಬೇಕು. ಕೆಲವರಿಗೆ ಒಂದು ಇನ್ನೊಬ್ಬರಿಗೆ ಇನ್ನೊಂದು ಕಾನೂನು ಮಾಡಿದರೆ ಸಹಿಸುವುದಿಲ್ಲ ಎಂದರು.
-9ಕೆಸಿಎನ್ಜಿ1: