ಪರಿಷತ್ ಉಪ ಚುನಾವಣೆ: ಗ್ಯಾರಂಟಿ ಬಲದಲ್ಲಿ ಕಾಂಗ್ರೆಸ್‌ ಗೆಲವು- ವೇಣುಗೋಪಾಲ್‌

KannadaprabhaNewsNetwork |  
Published : Oct 10, 2024, 02:25 AM IST
ಕಾಂಗ್ರೆಸ್‌ ದ.ಕ. ಉಸ್ತುವಾರಿ ವೇಣುಗೋಪಾಲ್‌ ಸುದ್ದಿಗೋಷ್ಠಿ | Kannada Prabha

ಸಾರಾಂಶ

ಅವಿಭಜಿತ ದ.ಕ.ಜಿಲ್ಲೆಯಲ್ಲಿ ಅಕ್ಟೋಬರ್‌ 21ರಂದು ನಡೆಯುವ ಸ್ಥಳೀಯಾಡಳಿತಗಳಿಂದ ಆಯ್ಕೆಯಾಗುವ ಪರಿಷತ್ ಉಪ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸುವ ವಿಶ್ವಾಸ ಇದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ದ.ಕ.ಜಿಲ್ಲಾ ಕಾಂಗ್ರೆಸ್‌ ಉಸ್ತುವಾರಿ ಆಗಿರುವ ಎಂ.ಸಿ.ವೇಣುಗೋಪಾಲ್‌ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು ಕೂಡ ಗ್ರಾಮ ಪಂಚಾಯ್ತಿ ಸದಸ್ಯ ಮತದಾರರೇ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವಿಭಜಿತ ದ.ಕ.ಜಿಲ್ಲೆಯಲ್ಲಿ ಅಕ್ಟೋಬರ್‌ 21ರಂದು ನಡೆಯುವ ಸ್ಥಳೀಯಾಡಳಿತಗಳಿಂದ ಆಯ್ಕೆಯಾಗುವ ಪರಿಷತ್ ಉಪ ಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ ಅಭ್ಯರ್ಥಿಯನ್ನು ಗೆಲ್ಲಿಸುವ ವಿಶ್ವಾಸ ಇದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ದ.ಕ.ಜಿಲ್ಲಾ ಕಾಂಗ್ರೆಸ್‌ ಉಸ್ತುವಾರಿ ಆಗಿರುವ ಎಂ.ಸಿ.ವೇಣುಗೋಪಾಲ್‌ ಹೇಳಿದ್ದಾರೆ.

ಮಂಗಳೂರಿನ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದರಾಗಿ ಆಯ್ಕೆಯಾದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾದ ಪರಿಷತ್‌ ಸ್ಥಾನಕ್ಕೆ ಈ ಉಪ ಚುನಾವಣೆ ನಡೆಯುತ್ತಿದೆ. ಪಂಚಾಯ್ತಿರಾಜ್‌ನಲ್ಲಿ ಕೆಲಸ ಮಾಡಿರುವ ಅನುಭವಿ ಅಭ್ಯರ್ಥಿ ರಾಜು ಪೂಜಾರಿ ಅವರನ್ನು ಕಣಕ್ಕೆ ಇಳಿಸಲಾಗಿದೆ. ಆದರೆ ಬಿಜೆಪಿ ಅಭ್ಯರ್ಥಿಗೆ ಅಂತಹ ಯಾವುದೇ ಅನುಭವ ಇಲ್ಲ. ಅವರು ಸದಸ್ಯರಾಗಿ ಆಯ್ಕೆಯಾದರೆ, ಹೊಸದಾಗಿ ಕಲಿಯಬೇಕಾಗುತ್ತದೆ ಎಂದರು.

ಪರಿಷತ್ ಉಪ ಚುನಾವಣೆ ಗೆಲುವಿಗಾಗಿ ಎರಡು ದಿನಗಳ ಕಾಲ ಸರಣಿ ಸಭೆಗಳನ್ನು ನಡೆಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಕೂಡ ಅ.11ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ ಎಂದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಜಿ.ಎ. ಬಾವಾ, ಮಮತಾ ಗಟ್ಟಿ, ಆರ್‌.ಪದ್ಮರಾಜ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಹರೀಶ್‌ ಕುಮಾರ್‌, ಮುಖಂಡರಾದ ಶುಭೋದಯ ಆಳ್ವ, ಜಿತೇಂದ್ರ ಸುವರ್ಣ, ಶಾಲೆಟ್ ಪಿಂಟೋ, ನಝೀರ್‌ ಬಜಾಲ್‌ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಮಧ್ಯಾಹ್ನ 3ಕ್ಕೆ ಪಿಯುಸಿ ಫಲಿತಾಂಶ
ಕಾಡುಪ್ರಾಣಿಗಳ ಸಂತಾನಶಕ್ತಿ ಹರಣಕ್ಕೆ ರಾಜ್ಯ ಸರ್ಕಾರದಿಂದ ಚಿಂತನೆ: ಖಂಡ್ರೆ