ಕನ್ನಡಪ್ರಭ ವಾರ್ತೆ ಬೆಳಗಾವಿ
ಈ ಭಾಗದ ಶಾಸಕಿಯೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ವಿಶೇಷ ಪ್ರಯತ್ನದಿಂದ ಸುಮಾರು ₹ 3.50 ಕೋಟಿ ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಜಾತ್ರೆಗೆ ಬೇಕಾಗಿರುವ ಸಕಲ ಸಹಕಾರ ಕೊಡುವುದಾಗಿ ಭರವಸೆ ನೀಡಿದ ಅವರು, ಸಾರ್ವಜನಿಕರಿಗೆ ಹಾಗೂ ಅವರ ಆಸ್ತಿ-ಪಾಸ್ತಿಗಳಿಗೆ ಯಾವುದೇ ತೊಂದರೆಗಳಾಗದಂತೆ ನಿಗದಿತ ಸಮಯದಲ್ಲಿ ರಸ್ತೆ ಅಭಿವೃದ್ಧಿಪಡಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.ಗ್ರಾಮದ ಹಿರಿಯರು ಹಾಗೂ ಪಿಕೆಪಿಎಸ್ ಅಧ್ಯಕ್ಷ ಗಂಗಣ್ಣ ಕಲ್ಲೂರ, ಮಹಾಲಕ್ಷ್ಮಿ ದೇವಸ್ಥಾನ ಟ್ರಸ್ಟ್ ಕಮಿಟಿಯವರು, ಗ್ರಾಮ ಪಂಚಾಯತಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು, ಗ್ರಾಮದ ನಾಗರಿಕರು, ಸುಳೇಭಾವಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.