ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರರಿಗೆ ಸಚಿವ ಸ್ಥಾನ ನೀಡಿ

KannadaprabhaNewsNetwork |  
Published : Feb 28, 2026, 01:30 AM IST
 ಪಿ.ವಿ. ಸೀತಾರಾಂ | Kannada Prabha

ಸಾರಾಂಶ

ಮಾಗಡಿ: ಬೆಸ್ತರ ಸಮುದಾಯದ ವಿಧಾನ ಪರಿಷತ್ ಸದಸ್ಯರಾಗಿರುವ ತಿಪ್ಪಣ್ಣಪ್ಪ ಕಮಕನೂರರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡುವ ಮೂಲಕ ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡಿಸ‌ಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಪಿ.ವಿ. ಸೀತಾರಾಂ ಮನವಿ ಮಾಡಿದರು

ಮಾಗಡಿ: ಬೆಸ್ತರ ಸಮುದಾಯದ ವಿಧಾನ ಪರಿಷತ್ ಸದಸ್ಯರಾಗಿರುವ ತಿಪ್ಪಣ್ಣಪ್ಪ ಕಮಕನೂರರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡುವ ಮೂಲಕ ಹಿಂದುಳಿದ ವರ್ಗಕ್ಕೆ ನ್ಯಾಯ ಕೊಡಿಸ‌ಬೇಕು ಎಂದು ರಾಜ್ಯ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ಪಿ.ವಿ. ಸೀತಾರಾಂ ಮನವಿ ಮಾಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಮ್ಮ ಬೆಸ್ತ ಸಮಾಜವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಲು ಈ ಹಿಂದೆ ಪ್ರಯತ್ನಪಟ್ಟಿದ್ದರು. ಆದರೆ ಕಾರಣಾಂತರಗಳಿಂದ ಸಾಧ್ಯವಾಗದ ಕಾರಣ ಮತ್ತೊಮ್ಮೆ ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಕ್ರಮ ಕೈಗೊಳ್ಳಬೇಕು, ರಾಜ್ಯದಲ್ಲಿ ಪ್ರಸ್ತುತ ಜಾತಿ ಗಣತಿಯ ಪ್ರಕಾರ ಸರಿ ಸುಮಾರು 35 ಲಕ್ಷ ಜನಸಂಖ್ಯೆ ಬೆಸ್ತರಿದ್ದು ಆಯಾ ಗ್ರಾಮದ ಕೆರೆಗಳನ್ನು ಬೆಸ್ತ ಸಮುದಾಯಕ್ಕೆ ನೀಡಿ ಅವರನ್ನು ಆರ್ಥಿಕವಾಗಿ ಸಫಲರಾಗಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.ಸಮಾಜದ ಅಭಿವೃದ್ಧಿ ನಿಗಮಗಳಿಗೆ ನೂರಾರು ಕೋಟಿ ಅನುದಾನ ಮೀಸಲಿಡುತ್ತಿದ್ದು ನಮ್ಮ ಸಮುದಾಯದ ಅಭಿವೃದ್ಧಿ ನಿಗಮಕ್ಕೆ ಕೇವಲ ಎರಡು ಕೋಟಿ ನೀಡಿರುವುದು ಯಾವ ನ್ಯಾಯ? ನಿಗಮದ ನೌಕರರಿಗೆ ಸಂಬಳ ನೀಡಲು ಸಹ ಸಾಕಾಗುವುದಿಲ್ಲ. ನಮ್ಮ ಸಮಾಜ ಅಭಿವೃದ್ಧಿ ನಿಗಮಕ್ಕೆ ಇನ್ನೂ ಹೆಚ್ಚಿನ ಅನುದಾನ ನೀಡಬೇಕು. ನಮ್ಮ ಸಮಾಜದ ಕುಲ ಗುರುಗಳಾದ ಅಂಬಿಗರ ಚೌಡಯ್ಯನವರ ಪ್ರತಿಮೆಯನ್ನು ವಿಧಾನಸೌಧದ ಮುಂಭಾಗದಲ್ಲಿ ಪ್ರತಿಷ್ಠಾಪನೆ ಮಾಡಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಈ ಬಾರಿಯ ಬಜೆಟ್ ನಲ್ಲಿ ನಮ್ಮ ಸಮುದಾಯಕ್ಕೆ ಹೆಚ್ಚಿನ ಆದ್ಯತೆ ಕೊಡುತ್ತಾರೆಂಬ ನಿರೀಕ್ಷೆ ಇದ್ದು ಸಚಿವ ಸ್ಥಾನ ಹಾಗೂ ಹೆಚ್ಚಿನ ಅನುದಾನ ನಿಗಮಕ್ಕೆ ನೀಡುವ ಮೂಲಕ ಸಿದ್ದರಾಮಯ್ಯನವರು ನಮ್ಮ ಸಮುದಾಯದ ಪರವಾಗಿ ನಿಲ್ಲುತ್ತಾರೆಂಬ ವಿಶ್ವಾಸವಿದೆ ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

56 ಸಾವಿರ ಹುದ್ದೆಗಳ ಭರ್ತಿ ಹೇಳಿಕೆ ಬಿಜೆಪಿ ಹೋರಾಟದ ಫಲ
ಸಂಭವನೀಯ ಕ್ಯಾನ್ಸರ್‌ ತಡೆಗೆ ಎಚ್‌ಪಿವಿ ಲಸಿಕೆ ಪೂರಕ