ಕನ್ನಡಪ್ರಭ ವಾರ್ತೆ ಭಾರತೀನಗರ
ಭಾರತೀ ಪದವಿ ಪೂರ್ವ ಕಾಲೇಜಿನ ಹಿರಿಯ ಉಪನ್ಯಾಸಕ ಬಿ.ಕೆ.ಮಹದೇವ ಅವರು ಇತ್ತೀಚಿಗೆ ಬೈಕ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಬಲಗಾಲು ಮತ್ತು ಎಡಗೈಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು.
ವಿಷಯ ತಿಳಿದು ಪರಿಷತ್ ಸದಸ್ಯ ವಿವೇಕಾನಂದ ಅವರು ಮಹದೇವ ಅವರ ಮನೆಗೆ ಭೇಟಿ ನೀಡಿ ಆರ್ಥಿಕ ನೆರವು ನೀಡಿ ಯೋಗಕ್ಷೇಮ ವಿಚಾರಿಸಿದರು.ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಶಿಕ್ಷಕ ಬಂಧುಗಳು ಸಕ್ರಿಯವಾಗಿ ದುಡಿದು ನನ್ನನ್ನು ವಿಧಾನ ಪರಿಷತ್ ಸ್ಥಾನಕ್ಕೆ ಆಯ್ಕೆಗೊಳಿಸಿದ್ದಾರೆ. ಅಂತಹವರ ಕಷ್ಟಸುಖ ವಿಚಾರಿಸುವುದು ನನ್ನ ಆದ್ಯ ಕರ್ತವ್ಯವಾಗಿದೆ. ಹಾಗಾಗಿ ಅವರ ಕಾಯಕಕ್ಕೆ ನನ್ನ ಸೇವೆ ಮೀಸಲಾಗಿರುತ್ತೇನೆ. ನನ್ನ ದಕ್ಷಿಣ ಶಿಕ್ಷಕರ ಕ್ಷೇತ್ರದ ಯಾವುದೇ ಶಿಕ್ಷಕರಿಗೆ ಅನ್ಯಾಯವಾಗದ ರೀತಿಯಲ್ಲಿ ನೋಡಿಕೊಳ್ಳುವುದು ನನ್ನ ಆದ್ಯ ಜವಾಬ್ದಾರಿಯಾಗಿದೆ ಎಂದರು.
ಈ ವೇಳೆ ಕರ್ನಾಟಕ ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಸಂಘದ ಉಪಾಧ್ಯಕ್ಷ ತಳಗವಾದಿ ಹನುಮಂತಯ್ಯ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಕೆ.ಶಿವಾನಂದ, ನಿವೃತ್ತ ಪ್ರಾಧ್ಯಾಪಕ ಬಿ.ಎಸ್.ಬೋರಯ್ಯ, ಕೆ.ಟಿ.ಸುರೇಶ್ ಸೇರಿದಂತೆ ಹಲವರಿದ್ದರು.