ಫೋಟೋ- 3ಎಂವೈಎಸ್ 47
ನಗರದ ಎಂಎಂಕೆ ಮತ್ತು ಎಸ್.ಡಿ.ಎಂ ಬಾಲಕಿಯರ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಆಯುಷ ಐನೈನ್ ಮಾರ್ಚ್ ನಲ್ಲಿ ಜಮ್ಮುವಿನಲ್ಲಿ ನಡೆದ ಖೇಲೋ ಇಂಡಿಯಾ ಉಶೂ ಲೀಗ್ (ಸಬ್ ಜೂನಿಯರ್ ಮತ್ತು ಜೂನಿಯರ್ ನ್ಯಾಷನಲ್ )ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸ್ಥಾನದೊಡನೆ ಬೆಳ್ಳಿ ಪದಕ ಹಾಗೂ ನಗದು ಬಹುಮಾನಗಳಿಸಿದ್ದಾರೆ.
ಈ ಹಿಂದೆ ಸೆಪ್ಟೆಂಬರ್ ನಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿಯೂ ಚಿನ್ನದ ಪದಕ ಗಳಿಸಿದ್ದು ರಾಜವಂಶಸ್ಥೆ ತ್ರಿಶಿಕಾ ಒಡೆಯರ್ ಅವರು ಪ್ರಶಸ್ತಿ ನೀಡಿ ಸನ್ಮಾನಿಸಿದ್ದರು. ಚೆನ್ನೈನಲ್ಲಿ ನಡೆದ ಸೌತ್ ಜೋನ್ ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿ ಚಿನ್ನದ ಪದಕಗಳಿಸಿದ್ದಾರೆ.ಇವರ ಈ ಸಾಧನೆಗೆ ಎಸ್.ಡಿ.ಎಂ.ಇ ಸೊಸೈಟಿ ಅಧ್ಯಕ್ಷ, ಡಾ.ಡಿ. ವೀರೇಂದ್ರ ಹೆಗ್ಗೆಡೆ ಅವರು ಸನ್ಮಾನಿಸಿದರು. ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಎಲ್ಲಾ ಉಪನ್ಯಾಸಕರು ಇದ್ದರು.