ಜೈಲು ಜಾಮರ್‌ ಸಮಸ್ಯೆ: 14ರ ಗಡುವು, ಪರಿಹಾರವಾಗದಿದ್ದರೆ ಸಚಿವ ಸಂಪುಟ ಸಭೆ ಎದುರು ಪ್ರತಿಭಟನೆ- ಜಗದೀಶ ಶೇಣವ

KannadaprabhaNewsNetwork |  
Published : Sep 16, 2026, 02:45 AM IST
ಜಗದೀಶ ಶೇಣವ | Kannada Prabha

ಸಾರಾಂಶ

ಸೆಪ್ಟೆಂಬರ್ 14ರೊಳಗಾಗಿ ಮಂಗಳೂರು ಜೈಲಿನ ಮೊಬೈಲ್ ಜಾಮರ್ ಸಮಸ್ಯೆಯನ್ನು ಪರಿಹರಿಸದಿದ್ದಲ್ಲಿ ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಮಂಗಳೂರು ವಕೀಲರ ಸಂಘ ಎಚ್ಚರಿಕೆ ನೀಡಿದೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಸೆಪ್ಟೆಂಬರ್ 14ರೊಳಗಾಗಿ ಮಂಗಳೂರು ಜೈಲಿನ ಮೊಬೈಲ್ ಜಾಮರ್ ಸಮಸ್ಯೆಯನ್ನು ಪರಿಹರಿಸದಿದ್ದಲ್ಲಿ ಸೆಪ್ಟೆಂಬರ್ 18ರಂದು ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಮಂಗಳೂರು ವಕೀಲರ ಸಂಘ ಎಚ್ಚರಿಕೆ ನೀಡಿದೆ.ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಜಗದೀಶ್ ಕೆ. ಶೇಣವ ಅವರ ನೇತೃತ್ವದಲ್ಲಿ ಮಂಗಳೂರು ವಕೀಲರ ಸಂಘದ ಎಲ್ಲ ವಕೀಲರು ಒಗ್ಗೂಡಿ ಈ ಪ್ರತಿಭಟನೆ ನಡೆಸಲಿದ್ದಾರೆ ಎಂದು ಸಂಘ ಎಚ್ಚರಿಸಿದೆ.

ಜೈಲಿನ ಭದ್ರತೆ ಅತ್ಯಂತ ಮುಖ್ಯವಾದದ್ದು. ಅದೇ ರೀತಿ ನ್ಯಾಯಾಂಗದ ಸುಗಮ ಕಾರ್ಯನಿರ್ವಹಣೆ, ಸಾರ್ವಜನಿಕರ ಸಂಪರ್ಕ ಹಕ್ಕು ಶಿಕ್ಷಣ ಸಂಸ್ಥೆಗಳ ಕಾರ್ಯಚಟುವಟಿಕೆ ಹಾಗೂ ನಗರದ ವ್ಯಾಪಾರ-ವಾಣಿಜ್ಯ ಚಟುವಟಿಕೆಗಳಿಗೆ ಅಡ್ಡಿಯಾಗದಂತೆ ಸಮತೋಲನದ ಪರಿಹಾರ ಕಂಡುಕೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ. ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಮಂಗಳೂರು ವಕೀಲರ ಸಂಘ ಒತ್ತಾಯಿಸಿದೆ ಎಂದು ಜಗದೀಶ್ ಶೇಣವ ಅವರು ಮಾಧ್ಯಮಕ್ಕೆ ಹೇಳಿಕೆ ನೀಡಿದ್ದಾರೆಕೇಂದ್ರ ಕಾರಾಗೃಹದಲ್ಲಿ ಅಳವಡಿಸಲಾಗಿರುವ ಮೊಬೈಲ್ ಜಾಮರ್ ವ್ಯವಸ್ಥೆಯಿಂದ ಕಳೆದ ಎರಡು ವರ್ಷಗಳಿಂದ ಮಂಗಳೂರು ನ್ಯಾಯಾಲಯ, ಸುತ್ತಮುತ್ತಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳು, ಹೋಟೆಲ್‌ಗಳು, ವಸತಿ ವ್ಯವಸ್ಥೆಗಳು ಹಾಗೂ ವಿವಿಧ ವ್ಯಾಪಾರ-ವಾಣಿಜ್ಯ ಚಟುವಟಿಕೆಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಈ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ಮಂಗಳೂರು ವಕೀಲರ ಸಂಘ ಒತ್ತಾಯಿಸಿದೆ.ಈ ಕುರಿತು ಈಗಾಗಲೇ ಮಂಗಳೂರು ವಕೀಲರ ಸಂಘದ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದ್ದು, ಸಮಸ್ಯೆಯನ್ನು ಗೃಹ ಸಚಿವರ ಗಮನಕ್ಕೆ ತಂದು ಪರಿಹರಿಸುವುದಾಗಿ ಸಚಿವರು ಭರವಸೆ ನೀಡಿದ್ದರು. ಆದರೆ ಇದುವರೆಗೆ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆತಿಲ್ಲ.ಮಂಗಳೂರಿನ ನ್ಯಾಯಾಲಯ, ಶಿಕ್ಷಣ ಸಂಸ್ಥೆಗಳು, ವ್ಯಾಪಾರ-ವಾಣಿಜ್ಯ ಚಟುವಟಿಕೆಗಳು ಹಾಗೂ ಸಾರ್ವಜನಿಕ ಜೀವನಕ್ಕೆ ತೊಂದರೆಯಾಗದಂತೆ ಮೊಬೈಲ್ ಜಾಮರ್ ವ್ಯವಸ್ಥೆಯನ್ನು ತಕ್ಷಣ ಮರುಪರಿಶೀಲಿಸಿ, ವೈಜ್ಞಾನಿಕ ಹಾಗೂ ತಾಂತ್ರಿಕವಾಗಿ ಸೂಕ್ತ ಪರಿಹಾರ ಕೈಗೊಳ್ಳಬೇಕು ಎಂದು ಮಂಗಳೂರು ವಕೀಲರ ಸಂಘ ಆಗ್ರಹಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭೀಕರ ಅಗ್ನಿ ದುರಂತ: ಒಂದೇ ಕುಟುಂಬದ ನಾಲ್ವರು ಸಜೀವ ದಹನ
ಬರಘೋಷಣೆಗೆ ಆಗ್ರಹಿಸಿ ೨೧ರಂದು ತಾಳಿಕೋಟೆ ಬಂದ್‌