ಪಠ್ಯೇತರ ಕ್ರಿಯೆಯಿಂದ ಮೊಬೈಲ್‌ ಗೀಳು ದೂರ: ಇಸಿಒ ಶಿವಸ್ವಾಮಿ ಅಭಿಪ್ರಾಯ

KannadaprabhaNewsNetwork |  
Published : Jan 15, 2024, 01:49 AM IST
14ಎಚ್ಎಸ್ಎನ್‌7 : ಹೊಳೆನರಸೀಪುರ ಪಟ್ಟಣದ ಶ್ರೀ ಮಾತೃಕೃಪ ನವೋಧಯ ಸ್ಮಾಟ್ಸ್ ಕ್ಲಾಸ್ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ೨೧ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಂಸ್ಥೆಯ ಎಲ್ಲಾ ಶಿಕ್ಷಕರನ್ನು ಗೌರವಿಸಲಾಯಿತು.  | Kannada Prabha

ಸಾರಾಂಶ

ಮಕ್ಕಳಿಗೆ ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗೆ ಉತ್ತೇಜನ ನೀಡಿದಾಗ ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಪಿಡುಗಾಗಿರುವ ಮೊಬೈಲ್ ಗೀಳಿನಿಂದ ದೂರ ಮಾಡಲು ಸಾಧ್ಯವಾಗಬಹುದು. ಈ ನಿಟ್ಟಿನಲ್ಲಿ ಪೋಷಕರು ಹೆಚ್ಚಿನ ಕಾಳಜಿ ತೋರಬೇಕಿದೆ ಎಂದು ಇಸಿಒ ಶಿವಸ್ವಾಮಿ ಹೇಳಿದರು. ಹೊಳೆನರಸೀಪುರದ ನವೋದರ ಶಾಲೆಯಲ್ಲಿ ಮಾತನಾಡಿದರು.

ಆಂಗ್ಲ ಮಾಧ್ಯಮ ಶಾಲೆಯ 21ನೇ ವಾರ್ಷಿಕೋತ್ಸವಕನ್ನಡಪ್ರಭ ವಾರ್ತೆ ಹೊಳೆನರಸೀಪುರ

ಪೋಷಕರು ಮಕ್ಕಳಿಗೆ ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗೆ ಉತ್ತೇಜನ ನೀಡಿದಾಗ ಮಾನಸಿಕ ಹಾಗೂ ಬೌದ್ಧಿಕ ಬೆಳವಣಿಗೆಗೆ ಸಹಕಾರಿಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಪಿಡುಗಾಗಿರುವ ಮೊಬೈಲ್ ಗೀಳಿನಿಂದ ದೂರ ಮಾಡಲು ಸಾಧ್ಯವಾಗಬಹುದು. ಈ ನಿಟ್ಟಿನಲ್ಲಿ ಪೋಷಕರು ಹೆಚ್ಚಿನ ಕಾಳಜಿ ತೋರಬೇಕಿದೆ ಎಂದು ಇಸಿಒ ಶಿವಸ್ವಾಮಿ ಅಭಿಪ್ರಾಯಪಟ್ಟರು.

ಪಟ್ಟಣದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದ ಮುಂದೆ ನಿರ್ಮಿಸಿದ್ದ ವೇದಿಕೆಯಲ್ಲಿ ಶ್ರೀ ಮಾತೃಕೃಪ ನವೋದಯ ಸ್ಮಾಟ್ಸ್ ಕ್ಲಾಸ್ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ೨೧ನೇ ವಾರ್ಷಿಕೋತ್ಸವ ಸಮಾರಂಭ ಉದ್ಘಾಟಿಸಿ ಮಾತನಾಡಿದರು. ಶೈಕ್ಷಣಿಕ ವರ್ಷದಲ್ಲಿ ೫ ಹಾಗೂ ೭ನೇ ತರಗತಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯೂ ಬೋರ್ಡ್ ಮಟ್ಟದಲ್ಲಿ ನಡೆಯಲಿದೆ, ಆದ್ದರಿಂದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪೋಷಕರು ಡೌನ್‌ಲೋಡ್ ಮಾಡಿಕೊಂಡು ಅಭ್ಯಾಸ ಮಾಡಿಸಿ ಎಂದು ಸಲಹೆ ನೀಡಿದರು.

ಋಷಿಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಸುರೇಶ್ ಹಾಗೂ ಶ್ರೀ ಮಾತೃಕೃಪ ನವೋದಯ ಎಜುಕೆಕ್ಷನ್ ಟ್ರಸ್ಟ್ ಸಂಸ್ಥಾಪಕ ಕುಮಾರ್ ಮಾತನಾಡಿದರು.

ಸಂಸ್ಥೆಯ ಎಲ್ಲಾ ಶಿಕ್ಷಕರನ್ನು ವೇದಿಕೆಯಲ್ಲಿ ಸನ್ಮಾನಿಸಿ ಗೌರವಿಸಿದ್ದು ಮತ್ತು ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಅವರ ‘ಅಮ್ಮ ಅಮ್ಮಾ..’ ಗೀತೆಗೆ ವಿದ್ಯಾರ್ಥಿಗಳು ಅವರ ತಾಯಂದಿರ ಫೋಟೋ ಹಿಡಿದು ನೃತ್ಯ ಮಾಡಿದ್ದು ಸಭಿಕರ ಮನಗೆದ್ದಿತು. ಯುಕೆಜಿ ವಿದ್ಯಾರ್ಥಿಗಳು ಶ್ರೀ ರಾಮಕಥಾದಲ್ಲಿ ಶ್ರೀ ಹನುಮಂತನು ತನ್ನ ಎದೆ ಸೀಳಿ ಶ್ರೀರಾಮ ಸೀತಾದೇವಿಯನ್ನು ತೋರಿಸುವ ಒಂದು ಸನ್ನಿವೇಶವನ್ನು ನಾಟಕ ರೂಪದಲ್ಲಿ ಅಭಿನಯಿಸಿದರು. ವಿದ್ಯಾರ್ಥಿಗಳ ಸಾಂಸ್ಕೃತಿಕ ಹಾಗೂ ನೃತ್ಯ ಪ್ರದರ್ಶನ ಕಣ್ಮನ ಸೆಳೆಯಿತು.

ಮುಖ್ಯ ಶಿಕ್ಷಕ ಹೇಮಂತ್ ಕಾರ್ಯಕ್ರಮ ನಿರೂಪಿಸಿದರು.

ಹೊಳೆನರಸೀಪುರ ಪಟ್ಟಣದ ಶ್ರೀ ಮಾತೃಕೃಪ ನವೋಧಯ ಸ್ಮಾಟ್ಸ್ ಕ್ಲಾಸ್ ಮತ್ತು ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ೨೧ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಸಂಸ್ಥೆಯ ಎಲ್ಲಾ ಶಿಕ್ಷಕರನ್ನು ಗೌರವಿಸಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

೨೩ರಂದು ಜಿ ರಾಮ್ ಜೀ ವಿರೋಧಿಸಿ ಪ್ರತಿಭಟನಾ ಪೂರ್ವಭಾವಿ ಸಭೆ
ಸರ್ವಜ್ಞ ಕವಿಯ ತ್ರಿಪದಿಗಳು ಜನರ ಜೀವನಕ್ಕೆ ದಾರಿದೀಪ