ಶಿವಮೊಗ್ಗ: ಶಿವಮೊಗ್ಗ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಮಂಗಳವಾರ ಸಂಜೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮೊಬೈಲ್ ಕಳೆದುಕೊಂಡಿದ್ದ ವಾರಸುದಾರರಿಗೆ ಮೊಬೈಲ್ ಪೋನ್‌ಗಳನ್ನು ಹಿಂದಿರುಗಿಸಲಾಯಿತು.
ಕಳೆದು ಹೋದ ಮೊಬೈಲ್‌ಗಳ ಪತ್ತೆಗಾಗಿ ಎಸ್ಪಿ ಜಿ.ಕೆ.ಮಿಥುನ್ ಕುಮಾರ್, ಎಎಸ್ಪಿಗಳಾದ ಅನಿಲ್ ಕುಮಾರ್ ಭೂಮರೆಡ್ಡಿ, ಕಾರಿಯಪ್ಪರವರ ಮಾರ್ಗದರ್ಶನದಲ್ಲಿ ಸೆನ್ ಠಾಣೆಯ ಡಿವೈಎಸ್ಪಿ ಕೃಷ್ಣಮೂರ್ತಿ ನೇತೃತ್ವದಲ್ಲಿ ಪಿಐ ಮಂಜುನಾಥ್ ಮತ್ತು ಸಿಬ್ಬಂದಿಗಳನ್ನು ಒಳಗೊಂಡ ತಂಡವನ್ನು ರಚಿಸಲಾಗಿತ್ತು.
ಕಳೆದ ಮೂರು ತಿಂಗಳಲ್ಲಿ 16,35,000 ರು. ಮೌಲ್ಯದ ಒಟ್ಟು 110 ಮೊಬೈಲ್ ಗಳನ್ನ ಪತ್ತೆ ಮಾಡಲಾಗಿದೆ. ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಗಳು ಕಳೆದು ಹೋದರೆ ಠಾಣೆಗೆ ಭೇಟಿ ನೀಡದೆ ಸ್ವತಃ ತಾವೇ ಕೆಎಸ್ಪಿ ಅಪ್ಲಿಕೇಶನ್ ನ ಈ ಲಾಸ್ಟ್ ಆಪ್ ಮೂಲಕ ದೂರು ದಾಖಲಿಸಿ ಸ್ವೀಕೃತಿಯನ್ನು ಪಡೆದು https://www.ceir.gov.in ವೆಬ್ ಪೋರ್ಟಲ್ ಭೇಟಿ ನೀಡಿ block stolen/Lost Mobile ಆಪ್ಷನ್ ಮೇಲೆ ಕ್ಲಿಕ್ ಮಾಡಿ ನಂತರ ಫಾರಂನಲ್ಲಿ ಕಳೆದು ಹೋದ ಮೊಬೈಲ್ ಫೋನಿನ IMEI ನಂಬರ್ ಮತ್ತು ಅಗತ್ಯ ವಿವರಗಳನ್ನು ಭರ್ತಿ ಮಾಡಿ ಸಬ್ಮಿಟ್ ಮಾಡುವ ಮೂಲಕ ದೂರನ್ನು ದಾಖಲಿಸಬಹುದಾಗಿದೆ.ದೂರು ದಾಖಲಾದ 24 ಗಂಟೆಯ ಒಳಗಾಗಿ ಕಳೆದುಹೋದ ಮೊಬೈಲ್ ಫೋನ್ ಬ್ಲಾಕ್ ಆಗುತ್ತದೆ. ಇದರಿಂದಾಗಿ ನಿಮ್ಮ ಮೊಬೈಲ್ ಫೋನ್ ದುರ್ಬಳಕೆಯಾಗದಂತೆ ತಡೆಯಬಹುದಾಗಿದೆ. ತಮ್ಮ ಮೊಬೈಲ್ ಫೋನನ್ನು ಯಾರಾದರೂ ಬಳಕೆ ಮಾಡಲು ಪ್ರಯತ್ನಿಸಿದ್ದಲ್ಲಿ ಅವರ ವಿವರವೂ ದೊರಕುತ್ತದೆ. ಇದರಿಂದ ಸುಲಭವಾಗಿ ತಮ್ಮ ಕಳೆದು ಹೋದ ಮೊಬೈಲ್ ಫೋನ್ ಗಳನ್ನು ಪತ್ತೆ ಮಾಡಲು ಸಾಧ್ಯವಾಗುತ್ತದೆ ಎಂದು ಎಸ್ಪಿ ಜಿ.ಕೆ.ಮಿಥುನ್‌ಕುಮಾರ್ ತಿಳಿಸಿದರು.
ಈ ಸಂದರ್ಭದಲ್ಲಿ ಎಎಸ್ಪಿಗಳಾದ ಅನಿಲ್ ಕುಮಾರ್ ಭೂಮರೆಡ್ಡಿ, ಕಾರಿಯಪ್ಪ ಇದ್ದರು