ಹಾರೋಹಳ್ಳಿ: ಮೊಬೈಲ್‌ಗಳಿಂದ ಯುವ ಸಮೂಹ ದಾರಿ ತಪ್ಪುತ್ತಿದೆ. ಅದರಿಂದ ಉಪಯೋಗ ಎಷ್ಟಿದೆಯೋ ಅಷ್ಟೇ ದುಷ್ಪರಿಣಾಮಗಳೂ ಇವೆ ಎಂದು ಪಡುವಣಗೆರೆ ಮುಖ್ಯ ಶಿಕ್ಷಕ ರಾಜು ಹೇಳಿದರು.
ಇಂದಿನ ದಿನಮಾನಸಗಳಲ್ಲಿ ಸರ್ಕಾರ ಬಾಲ್ಯವಿವಾಹದ ಕುರಿತು ಎಷ್ಟೇ ಜಾಗೃತಿ ಮೂಡಿಸಿದರೂ ಸಂಪೂರ್ಣ ತಡೆಯಲು ಸಾಧ್ಯವಾಗುತ್ತಿಲ್ಲ. ಬಾಲ್ಯ ವಿವಾಹದಿಂದ ಆ ಮಗುವಿನ ಮೇಲೆ ಕೆಟ್ಟ ದುಷ್ಪರಿಣಾಮ ಬೀರಲಿದೆ. ಎಲ್ಲಾ ಪೋಷಕರೂ ಇದನ್ನು ಅರಿತುಕೊಂಡಾಗ ಮಾತ್ರ ಈ ಸಮಸ್ಯೆಗೆ ಮುಕ್ತಿ ಸಿಗಲಿದೆ ಎಂದು ತಿಳಿಸಿದರು.
ಗ್ರಾಪಂ ಆಡಳಿತಾಧಿಕಾರಿ ಶ್ರೀನಿವಾಸ್ ಮಾತನಾಡಿ, ಮಹಿಳಾ ಮತ್ತು ಮಕ್ಕಳ ಹಕ್ಕುಗಳನ್ನು ತಿಳಿಸುವ ಸಲುವಾಗಿ ಈ ಸಭೆಯನ್ನು ಆಯೋಜಿಸಲಾಗಿದ್ದು ಸಭೆಯ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ತಿಳಿಸಿದರು.ಸಭೆಯಲ್ಲಿ ಅಂಗನವಾಡಿ ಮೇಲ್ವಿಚಾರಕಿ ಸರಸ್ವತಿ, ಪಿಡಿಒ ಶಿವಪ್ರಸಾದ್, ಶಿಕ್ಷಕ ಸುರೇಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.
22ಕೆಆರ್ ಎಂಎನ್ 1.ಜೆಪಿಜಿಹಾರೋಹಳ್ಳಿ ತಾಲೂಕಿನ ಟಿ.ಹೊಸಹಳ್ಳಿ ಗ್ರಾಪಂ ವ್ಯಾಪ್ತಿಯ ಪಡುವಣಗೆರೆ ಸರ್ಕಾರಿ ಶಾಲಾವರಣದಲ್ಲಿ ಮಹಿಳಾ ಮತ್ತು ಮಕ್ಕಳ ವಿಶೇಷ ಸಭೆ ನಡೆಯಿತು.
----