ಕನ್ನಡಪ್ರಭ ವಾರ್ತೆ ಬೀದರ್
ಸೋಮವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಆವರಣದಲ್ಲಿ ಸಾರ್ವಜನಿಕರಿಗೆ ಮೊಬೈಲ್ ಮರಳಿಸಿ ಮಾತನಾಡಿದ ಅವರು, ಜಿಲ್ಲೆಯ ಸಾರ್ವಜನಿಕರು ತಮ್ಮ ಮೊಬೈಲ್ ಕಳೆದು ಹೋದಲ್ಲಿ ಅಥವಾ ಯಾರಾದರು ಕಳುವು ಮಾಡಿಕೊಂಡು ಹೋದಲ್ಲಿ ನೀವು ಈ-ಲಾಸ್ಟ್ ಅಥವಾ ಸಿಈಐಆರ್ ಪೋರ್ಟಲ್‌ನಲ್ಲಿ ನಿಮ್ಮ ದೂರುಗಳನ್ನು ದಾಖಲಿಸಿದರೆ ತಮ್ಮ ಮೊಬೈಲ್‌ಗಳನ್ನು ಅದಷ್ಟು ಬೇಗ ಬೀದರ್ ಜಿಲ್ಲಾ ಪೊಲೀಸರು ಪತ್ತೆ ಹಚ್ಚಿ ದೂರುದಾರರಿಗೆ ಹಿಂದಿರುಗಿಸಲಾಗುವುದು ಎಂದು ಹೇಳಿದರು.
ಈ ಪ್ರಕರಣವನ್ನು ಭೇಧಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ಕಾರ್ಯವೈಖರಿಯನ್ನು ಪೊಲೀಸ್ ಅಧೀಕ್ಷಕರು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಬೀದರ್ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಚಂದ್ರಕಾಂತ ಪೂಜಾರಿ, ಬೀದರ್ ಪೊಲೀಸ್ ಉಪಾಧೀಕ್ಷಕ ಶಿವನಗೌಡ ಪಾಟೀಲ, ನೂತನ ನಗರ ಠಾಣೆಯ ಪಿಐ ಸಂತೋಷ ಎಲ್.ಟಿ, ಸಿಬ್ಬಂದಿಯಾದ ರಾಹುಲ, ಸಚೀನ, ಸಂತೋಷ, ರಾಮಣ್ಣ, ಧನರಾಜ, ಮಲ್ಲಿಕಾರ್ಜುನ, ಭರತ, ನಿಂಗಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.