ಮಾಯಕೊಂಡ ಕ್ಷೇತ್ರದಲ್ಲಿ ರಕ್ಷಣಾ ಪಡೆಗಳ ಸಂಚಲನ

KannadaprabhaNewsNetwork |  
Published : Mar 27, 2025, 01:06 AM IST
ಕ್ಯಾಪ್ಷನ26ಕೆಡಿವಿಜಿ34 ಮಾಯಕೊಂಡ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಗಡಿಭದ್ರತಾ ಪಡೆಯಿಂದ ಪಥ ಸಂಚಲನ ನಡೆಯಿತು. | Kannada Prabha

ಸಾರಾಂಶ

ಯುಗಾದಿ, ರಂಜಾನ್ ಪ್ರಯುಕ್ತ ಕ್ಷೇತ್ರದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಲೋಕಿಕೆರೆ ಸೇರಿದಂತೆ ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಗಡಿ ಭದ್ರತಾ ಪಡೆಯ ತುಕಡಿ ಅರೆಸೇನಾ ಪಡೆಯ ಯೋಧರು ಗ್ರಾಮಗಳಲ್ಲಿ ಪಥ ಸಂಚಲನ ನಡೆಸಿ, ಶಾಂತಿ ಕಾಪಾಡಲು ಜನರಿಗೆ ಸಂದೇಶ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ದಾವಣಗೆರೆ

ಯುಗಾದಿ, ರಂಜಾನ್ ಪ್ರಯುಕ್ತ ಕ್ಷೇತ್ರದಲ್ಲಿ ಶಾಂತಿ-ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಲೋಕಿಕೆರೆ ಸೇರಿದಂತೆ ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಗಡಿ ಭದ್ರತಾ ಪಡೆಯ ತುಕಡಿ ಅರೆಸೇನಾ ಪಡೆಯ ಯೋಧರು ಗ್ರಾಮಗಳಲ್ಲಿ ಪಥ ಸಂಚಲನ ನಡೆಸಿ, ಶಾಂತಿ ಕಾಪಾಡಲು ಜನರಿಗೆ ಸಂದೇಶ ನೀಡಿದರು.

ಅರೆಸೇನಾ ತುಕಡಿ ಮುಖ್ಯಸ್ಥ ಬಿ.ಎಸ್. ರೈ ಮಾತನಾಡಿ, ನಾಡಿನ ಎಲ್ಲರೂ ಶಾಂತಿ, ಸೌಹಾರ್ದತೆ, ಸಹಬಾಳ್ವೆಯಿಂದ ಹಬ್ಬಗಳನ್ನು ಆಚರಿಸಬೇಕು. ಸಹೋದರತ್ವ ಭಾವನೆಯಿಂದ ನಡೆದುಕೊಳ್ಳಬೇಕು. ಅಹಿತಕರ ಘಟನೆಗಳ ನಡೆದಂತೆ ವರ್ತಿಸಬೇಕು ಎಂದರು.

ರಂಜಾನ್ ಮತ್ತು ಯುಗಾದಿ ಹಬ್ಬದ ಸಂದರ್ಭದಲ್ಲಿ ಸಂಭವಿಸಬಹುದಾದ ಅನಾಹುತಗಳು ಘಟನೆಗಳನ್ನು ಹತ್ತಿಕ್ಕಲು ಪೂರ್ವಭಾವಿಯಾಗಿ ಗ್ರಾಮಗಳಲ್ಲಿ ಪಥಸಂಚಲನ ನಡೆಸಿ, ಶಾಂತಿ- ಕಾನೂನು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಮುಂಜಾಗ್ರತಾ ಕ್ರಮವಾಗಿ ಪಥಸಂಚಲನ ನಡೆಸಲಾಗುತ್ತಿದೆ. ಇದಕ್ಕೆ ಗ್ರಾಮಸ್ಥರ ಸಹಕಾರ ಪ್ರೋತ್ಸಾಹ ಅಗತ್ಯ ಎಂದರು.

ಈ ಸಂದರ್ಭದಲ್ಲಿ ಸಬ್ ಇನ್‌ಸ್ಪೆಕ್ಟರ್ ಶ್ರೀಶೈಲ ಪಟ್ಟಣಶೆಟ್ಟಿ, ಗ್ರಾಪಂ ಅಧ್ಯಕ್ಷೆ ಶಿಲ್ಪ ಶಿವಮೂರ್ತಿ, ಗ್ರಾಪಂ ಸದಸ್ಯರಾದ ನಾಗಪ್ಪ, ದಲಿತ ಸಂಘರ್ಷ ಸಮಿತಿ ಮುಖಂಡ ಮಂಜುನಾಥ, ಪತ್ರಕರ್ತ ಪುರಂದರ ಲೋಕಿಕೆರೆ, ರಾಜು, ಆಶಾ ಕಾರ್ಯಕರ್ತೆ, ರತ್ನಮ್ಮ, ಅಂಗನವಾಡಿ ಶಿಕ್ಷಕರು, ಸ್ವಸಹಾಯ ಸಂಘದ ಪ್ರತಿನಿಧಿಗಳು, ಗ್ರಾಮಸ್ಥರು ಇದ್ದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಯಿತು.

- - - -26ಕೆಡಿವಿಜಿ34.ಜೆಪಿಜಿ:

ಮಾಯಕೊಂಡ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಗಡಿಭದ್ರತಾ ಪಡೆಯಿಂದ ಪಥ ಸಂಚಲನ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ