ಕನ್ನಡಪ್ರಭ ವಾರ್ತೆ ಮಂಡ್ಯ
ಅಣುಕು ಕಾರ್ಯಾಚರಣೆಗೆ ವಾರ್ನಿಂಗ್ ಟೀಂ, ಕಂಟ್ರೋಲ್ ರೂಂ, ಇವ್ಯಾಕುಯೇಷನ್ ಟೀಂ, ಅಗ್ನಿ ಶಾಮಕ ದಳ, ಎನ್.ಸಿ.ಸಿ. ತಂಡ, ಗೃಹರಕ್ಷಕ ದಳ, ಪೊಲೀಸ್ ಇಲಾಖೆ, ಪ್ರಥಮ ಚಿಕಿತ್ಸೆ, ವೈದ್ಯಕೀಯ ತಂಡ, ಸಾರಿಗೆ ತಂಡ, ಸಂವಹನ ತಂಡಗಳನ್ನು ರಚಿಸಿ ಅಧಿಕಾರಿಗಳಿಗೆ ಜವಾಬ್ದಾರಿಗಳನ್ನು ವಹಿಸಲಾಯಿತು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾತನಾಡಿ, ಮೇ 11 ರಂದು ನಡೆಯುವ ಅಣುಕು ಪ್ರದರ್ಶನದ ಬಗ್ಗೆ ಕೆಆರ್‌ಎಸ್‌ಗೆ ಆಗಮಿಸುವ ಪ್ರವಾಸಿಗರು ಹಾಗೂ ಸುತ್ತಮುತ್ತಲಿನ ಗ್ರಾಮದವರಿಗೆ ಮಾಹಿತಿ ನೀಡಿ ಅರಿವು ಮೂಡಿಸಬೇಕು. ಪ್ರವಾಸಿಗರಿಗೆ ಧ್ವನಿವರ್ಧಕದ ಮೂಲಕ ಹೆಚ್ಚಿನ ಪ್ರಚಾರವನ್ನು ನೀಡುವಂತೆ ತಿಳಿಸಿದರು.ಸಭೆಯಲ್ಲಿ ಅಣುಕು ಪ್ರದರ್ಶನದ ನೋಡಲ್ ಅಧಿಕಾರಿ ಕೆ.ಎಸ್. ಶಿವಶಂಕರ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಮ್ಮಯ್ಯ, ಅಗ್ನಿ ಶಾಮಕ ಅಧಿಕಾರಿ ರಾಘವೇಂದ್ರ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.ಮಾಕ್ ಡ್ರಿಲ್ ಹಿನ್ನೆಲೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿ, ಅಗ್ನಿಶಾಮಕ ಇಲಾಖೆ ಅಧಿಕಾರಿ, ಕಾವೇರಿ ನಿರಾವರಿ ನಿಗಮದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು. ಮಾಕ್ ಡ್ರಿಲ್ ಬಗ್ಗೆ ಅಧಿಕಾರಿಗಳು ಸಿಬ್ಬಂದಿಗೆ ಜಿಲ್ಲಾಧಿಕಾರಿ ವಿವರಣೆ ನೀಡಿದರು. ಕೋಟ್.------ಮಾಕ್ ಡ್ರಿಲ್‌ಗೆ ಕೆಆರ್‌ಎಸ್‌ನ ಅಣೆಕಟ್ಟೆಯ ಪಾರ್ಕಿಂಗ್ ಏರಿಯಾ, ರಾಯಲ್ ಹೋಟೆಲ್ ಹಾಗೂ ಮಯೂರ ಹೋಟೆಲ್ ಬಳಿ ಪಾಯಿಂಟ್ ಗುರುತಿಸಲಾಗಿದೆ. ೧೫೦ ಕ್ಕೂ ಹೆಚ್ಚು ಅಧಿಕಾರಿಗಳು ಭಾಗಿಯಾಗಲ್ದಿಾರೆ. ಎಲ್ಲಾ ಇಲಾಖೆಯವರಿಗೂ ಜವಾಬ್ದಾರಿ ವಹಿಸಿ ಸೂಚನೆ ಕೊಟ್ಟಿದ್ದೇವೆ. ಅಣೆಕಟ್ಟೆಗೆ ಹೆಚ್ಚು ಭದ್ರತೆ ಹಾಗೂ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದು, ಪ್ರವಾಸಿಗರು ಯಾವುದೇ ಆತಂಕ ಪಡುವ ಅಗತ್ಯ ಇಲ್ಲ. ಪ್ರವಾಸಿಗರಿಗೆ ಯಾವುದೇ ನಿರ್ಬಂಧ ಇಲ್ಲ.- ಡಾ.ಕುಮಾರ, ಜಿಲ್ಲಾಧಿಕಾರಿ--------------ಆಪರೇಷನ್ ಅಭ್ಯಾಸ್ ಹೆಸರಿನಲ್ಲಿ ಮಾಕ್ ಡ್ರಿಲ್ ನಡೆಯಲಿದೆ. ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು, ಪ್ರವಾಸಿಗರು, ಅಣೆಕಟ್ಟು ರಕ್ಷಣೆ ಮಾಡುವ ಬಗ್ಗೆ ಅಣಕು ಕಾರ್ಯಾಚರಣೆ ನಡೆಯಲಿದೆ. ಇದೇ ಸಮಯದಲ್ಲಿ ಸಂಜೆ ೬.೫೦ ರಿಂದ ೭ ಗಂಟೆಯವರೆಗೆ ಕೆಆರ್‌ಎಸ್ ಸುತ್ತಮುತ್ತ ಬ್ಲಾಕ್ ಔಟ್ ನಡೆಸಲಾಗುವುದು. ಈ ಅಣಕು ಪ್ರದರ್ಶನಕ್ಕೆ ೧೦ ತಂಡಗಳನ್ನು ರಚಿಸಲಾಗಿದೆ. ಆಯಾ ಇಲಾಖೆ ಅಧಿಕಾರಿಗಳಿಗೆ ಜವಾಬ್ದಾರಿ ನೀಡಲಾಗಿದೆ.- ಮಲ್ಲಿಕಾರ್ಜುನ ಬಾಲದಂಡಿ, ಎಸ್‌ಪಿ೯ಕೆಎಂಎನ್‌ಡಿ-೩ಮಂಡ್ಯ ಜಿಪಂ ಕಾವೇರಿ ಸಭಾಂಗಣದಲ್ಲಿ ಕೆಆರ್‌ಎಸ್‌ನಲ್ಲಿ ನಡೆಯಲಿರುವ ಆಪರೇಷನ್ ಅಭ್ಯಾಸ್ ಅಣಕು ಕಾರ್ಯಾಚರಣೆ ಕುರಿತು ಜಿಲ್ಲಾಧಿಕಾರಿ ಡಾ.ಕುಮಾರ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.