ಮೂಡುಬಿದಿರೆ: ಕೌಶಲಗಳನ್ನು ಹೊಂದಿದ ವಿದ್ಯಾರ್ಥಿಗಳಿಗೆ ಮಾಧ್ಯಮದಲ್ಲಿ ಔದ್ಯೋಗಿಕ ಅವಕಾಶಗಳು ಹೆಚ್ಚಿವೆ. ಆದರೆ, ಸೂಕ್ತ ಶಿಕ್ಷಣ ಹಾಗೂ ತರಬೇತಿ ಪಡೆಯುವುದು ಅಗತ್ಯ ಎಂದು ಆಳ್ವಾಸ್ ಸ್ವಾಯತ್ತ ಕಾಲೇಜಿನ ಪ್ರಾಂಶುಪಾಲ ಡಾ.ಕುರಿಯನ್ ಹೇಳಿದರು.
ಸಿದ್ದಕಟ್ಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಬನ್ನಡ್ಕ ವಿಶ್ವವಿದ್ಯಾನಿಲಯ ಕಾಲೇಜು, ಮೂಡುಬಿದಿರೆ ಮಹಾವೀರ ಕಾಲೇಜು, ಕಟೀಲು ಎಸ್‌ಡಿಟಿ ಪ್ರಥಮ ದರ್ಜೆ ಕಾಲೇಜು ಹಾಗೂ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು ವಿಚಾರಸಂಕಿರಣದಲ್ಲಿ ಪಾಲ್ಗೊಂಡರು.
ಆಳ್ವಾಸ್ ಸ್ವಾಯತ್ತ ಕಾಲೇಜಿನ ಪರೀಕ್ಷಾಂಗ ಕುಲಸಚಿವ ಡಾ. ನಾರಾಯಣ ಶೆಟ್ಟಿ ಮಾತನಾಡಿ, ಡಿಜಿಟಲ್ ವೇದಿಕೆಗೆ ವಿದ್ಯಾರ್ಥಿಗಳು ಅಪ್‌ಡೇಟ್ ಆಗಬೇಕಾಗಿರುವುದು ಇಂದಿನ ಅನಿವಾರ್ಯತೆ. ಅಂತಹ ಮೂಲಸೌಕರ್ಯ ಹೊಂದಿದ ಕಾಲೇಜಿನಲ್ಲಿ ಶಿಕ್ಷಣ ಪಡೆದಲ್ಲಿ ಉದ್ಯೋಗದ ಸಾಧ್ಯತೆಗಳು ಹೆಚ್ಚಿವೆ ಎಂದರು.ವಿಭಾಗದ ಮುಖ್ಯಸ್ಥ ಪ್ರಸಾದ್ ಶೆಟ್ಟಿ ಮಾತನಾಡಿ, ಸಮಕಾಲೀನ ಮಾಧ್ಯಮದ ಅವಶ್ಯಕತೆಗೆ ಅನುಗುಣವಾಗಿ ತರಬೇತಿ ಪಡೆಯಲು ಇರುವ ಅವಕಾಶಗಳ ಬಗ್ಗೆ ತಿಳಿಸಿದರು. ಕಾರ್ಯಕ್ರಮ ಸಂಯೋಜಕ ಹರ್ಷವರ್ಧನ ಪಿ.ಆರ್. ಪ್ರಾಸ್ತಾವಿಕವಾಗಿ ಮಾತನಾಡಿ, ವಿಚಾರಸಂಕಿರಣ ರೂಪುರೇಷೆ ಹಾಗೂ ಅವಶ್ಯಕತೆ ಬಗ್ಗೆ ತಿಳಿಸಿದರು.ವಿಭಾಗದ ಪ್ರಾಧ್ಯಾಪಕ ಡಾ.ಶ್ರೀನಿವಾಸ ಹೊಡೆಯಾಲ, ದೀಕ್ಷಿತಾ, ಅಕ್ಷಯ್ ಕುಮಾರ್, ಹನ್ನಾ ಫಾತಿಮಾ ತರಬೇತಿ ನೀಡಿದರು. ವಿದ್ಯಾರ್ಥಿನಿಯರಾದ ರಕ್ಷಿತಾ ಚಪ್ಪರಿಕೆ ಮತ್ತು ಪ್ರೇರಣಾ ಕಾರ್ಯಕ್ರಮ ನಿರೂಪಿಸಿದರು.