ಸರ್ಕಾರಿ ಪಬ್ಲಿಕ್ ಶಾಲೆ ರಾಜ್ಯಕ್ಕೇ ಮಾದರಿ: ಬಿಇಒ

KannadaprabhaNewsNetwork | Published : Mar 6, 2024 2:15 AM

ಸಾರಾಂಶ

ಸಮಾಜದ ಗಣ್ಯ ವ್ಯಕ್ತಿಗಳು, ಪೋಷಕರು, ಗ್ರಾಮಸ್ಥರು, ಎಸ್‌ಡಿಎಂಸಿ ಸದಸ್ಯರು ಕೈಜೋಡಿಸಿದರೆ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವ ರೀತಿ ಅಭಿವೃದ್ಧಿ ಮಾಡಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ. ರಾಮಪ್ಪ ತಿಳಿಸಿದರು.

ಕನ್ನಡಪ್ರಭ ವಾರ್ತೆ ಕನಕಪುರ

ಸಮಾಜದ ಗಣ್ಯ ವ್ಯಕ್ತಿಗಳು, ಪೋಷಕರು, ಗ್ರಾಮಸ್ಥರು, ಎಸ್‌ಡಿಎಂಸಿ ಸದಸ್ಯರು ಕೈಜೋಡಿಸಿದರೆ ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆಯುವ ರೀತಿ ಅಭಿವೃದ್ಧಿ ಮಾಡಲು ಸಾಧ್ಯ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಜಿ. ರಾಮಪ್ಪ ತಿಳಿಸಿದರು.

ತಾಲೂಕಿನ ಏಳಗಹಳ್ಳಿ ಸರ್ಕಾರಿ ಪಬ್ಲಿಕ್ ಶಾಲೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪಬ್ಲಿಕ್ ಶಾಲೆ ಎಂಬ ಕಾನ್ಸೆಪ್ಟ್ ಹುಟ್ಟಿದ್ದೆ ಕನಕಪುರ ತಾಲೂಕಿನಿಂದ. ಇಂದು ತಾಲೂಕಿನೆಡೆಗೆ ಇಡೀ ರಾಜ್ಯವೇ ತಿರುಗಿ ನೋಡುವಂತಹ ವ್ಯವಸ್ಥೆ ನಿರ್ಮಾಣವಾಗಿದೆ. ಉಪಮುಖ್ಯಮಂತ್ರಿಗಳು ಮತ್ತು ಸಂಸದ ಡಿ.ಕೆ.ಸುರೇಶ್ ಅವರ ಸಹಕಾರದಿಂದ ಈ ರೀತಿಯ 10 ಶಾಲೆಗಳನ್ನು ತೆರೆಯಲು ಇಲಾಖೆ ನಿರ್ಧರಿಸಿದೆ ಎಂದರು.

ಸರ್ಕಾರಿ ಶಾಲೆಗಳು ಎಂದರೆ ಮೂಗು ಮುರಿಯುವವರೇ ಹೆಚ್ಚು. ಆದರೆ ಈ ಶಾಲೆ ಖಾಸಗಿ ಶಾಲೆಗಳಿಗಿಂತಲೂ ಯಾವುದರಲ್ಲೂ ಕಡಿಮೆ ಇಲ್ಲದಂತೆ ಎಲ್ಲಾ ಸೌಲಭ್ಯಗಳನ್ನು ಕಲ್ಪಿಸಿಕೊಡಲಾಗಿದೆ. ಶಾಲೆಯಲ್ಲಿ ಶಿಕ್ಷಕರ ತೊಡಗಿಸಿಕೊಳ್ಳುವಿಕೆ ಮತ್ತು ಮಕ್ಕಳ ಶಿಸ್ತು ಇತರೆ ಶಾಲಾ ಶಿಕ್ಷಕರಿಗೂ ಮಾದರಿಯಾಗಿದೆ. ಶೈಕ್ಷಣಿಕ ಅಭಿವೃದ್ಧಿಗೆ ಪೋಷಕರ ಸಹಕಾರ ಕೊಡಬೇಕು ಎಂದರು.

ವಕೀಲ ಚಿನ್ನರಾಜು ಮಾತನಾಡಿ, ಗ್ರಾಮೀಣ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂಬ ನಿಟ್ಟಿನಲ್ಲಿ ಸ್ಥಳೀಯ ಮುಖಂಡರ ಸಹಕಾರದಿಂದ ಪಬ್ಲಿಕ್ ಶಾಲೆ ನಿರ್ಮಿಸಲಾಗಿದೆ. ಅವಕಾಶಗಳು ಬಂದಾಗ ಅದರ ಸದುಪಯೋಗ ಮಾಡಿಕೊಂಡರೆ ಅದು ನಿಮ್ಮ ಜೀವನವನ್ನು ಉನ್ನತ ಮಟ್ಟಕ್ಕೆ ಕೊಂಡೊಯ್ಯತ್ತದೆ ಎಂದರು.

ಕಾರ್ಯಕ್ರಮದಲ್ಲಿ ತಾಲ್ಲೂಕು ಶಿಕ್ಷಣ ಸಂಯೋಜಕ ಮಹೇಶ್, ಸಿಡಿಪಿಒ ಶೀಲಾ, ಪಿ.ಆರ್ ಡಿ ಇಂಜಿನಿಯರ್ ಚಂದ್ರಶೇಖರ್, ಕಾಂಗ್ರೆಸ್ ಮುಖಂಡ ಏಳಗಹಳ್ಳಿ ಎಚ್.ಕೆ.ರವಿ, ತಾಪಂ ಮಾಜಿ ಅಧ್ಯಕ್ಷ ಕೃಷ್ಣಪ್ಪ, ದೊಡ್ಡ ಅಲಹಳ್ಳಿ ಮಹೇಶ್, ಬಿ.ಎಸ್.ಗೌಡ, ನಲ್ಲಹಳ್ಳಿ ಗ್ರಾಪಂ ಅಧ್ಯಕ್ಷೆ ಗೀತಾ, ಸದಸ್ಯ ಮರಿಯಪ್ಪ, ಸತ್ಯಸಾಯಿ ಸಂಸ್ಥೆ ಕೇಶವ್, ರೋಟರಿ ಕಾರ್ಯದರ್ಶಿ ಕುಮಾರ್ ನಾಯಕ್, ಸಿದ್ದೇಶ್, ಶಿವಕುಮಾರ್, ಪಿಡಿಒ ದಾಸಪ್ಪ ಹಾಗೂ ಎಸ್‌ಡಿಎಂಸಿ ಸದಸ್ಯರು, ಪೋಷಕರು ಉಪಸ್ಥಿತರಿದ್ದರು.

Share this article