ಯಲಬುರ್ಗಾದಲ್ಲಿ ಮಾದರಿ ಕ್ರೀಡಾಂಗಣ ನಿರ್ಮಾಣ: ರಾಯರಡ್ಡಿ

KannadaprabhaNewsNetwork |  
Published : May 11, 2025, 01:26 AM IST
9ಕೆಕೆಆರ್1:ಕೊಪ್ಪಳ ಜಿಲ್ಲೆಯ  ಯಲಬುರ್ಗಾ ಪಟ್ಟಣದ ಕೊಪ್ಪಳ ರಸ್ತೆಯಲ್ಲಿರುವ ತಾಲೂಕು ಕ್ರೀಡಾಂಗಣಕ್ಕೆ ಸಿಎಂ ಆರ್ಥಿಕ ಸಲಹೆಗಾರ ಹಾಗೂ ಶಾಸಕ ಬಸವರಾಜ ರಾಯರಡ್ಡಿ  ಅಧಿಕಾರಿಗಳ ಜತೆಗೊಡಿ  ನೂತನ ಕ್ರೀಡಾಂಗಣ ನಿರ್ಮಾಣ ಕುರಿತು ವೀಕ್ಷಣೆ ನಡೆಸಿದರು.  | Kannada Prabha

ಸಾರಾಂಶ

೨೦೦೪ರಲ್ಲಿ ಶಾಸಕನಾಗಿದ್ದ ಅವಧಿಯಲ್ಲಿ ಯಲಬುರ್ಗಾ ಪಟ್ಟಣದಲ್ಲಿ ತಾಲೂಕು ಕ್ರೀಡಾಂಗಣ ನಿರ್ಮಿಸಲಾಗಿತ್ತು. ಇದೀಗ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು ಬಜೆಟ್‌ನಲ್ಲಿ ಕ್ರೀಡಾಂಗಣದ ಕಟ್ಟಡ ಅಭಿವೃದ್ಧಿಗೆ ₹ ೬ ಕೋಟಿ ಅನುದಾನ ನೀಡುವ ಜತೆಗೆ ಸ್ವಾತಂತ್ರ‍್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಹೆಸರು ನಾಮಕರಣ ಮಾಡಿ ಆದೇಶ ಹೊರಡಿಸಿದ್ದಾರೆ.

ಕೊಪ್ಪಳ(ಯಲಬುರ್ಗಾ):

ರಾಜ್ಯದಲ್ಲಿಯೇ ಮಾದರಿಯಾಗುವಂತೆ ತಾಲೂಕು ಕ್ರೀಡಾಂಗಣ ನಿರ್ಮಿಸಲಾಗುವುದು ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು.

ಯಲಬುರ್ಗಾ ಪಟ್ಟಣದ ಕೊಪ್ಪಳ ರಸ್ತೆಯಲ್ಲಿರುವ ತಾಲೂಕು ಕ್ರೀಡಾಂಗಣಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಅವರು, ೨೦೦೪ರಲ್ಲಿ ಶಾಸಕನಾಗಿದ್ದ ಅವಧಿಯಲ್ಲಿ ಯಲಬುರ್ಗಾ ಪಟ್ಟಣದಲ್ಲಿ ತಾಲೂಕು ಕ್ರೀಡಾಂಗಣ ನಿರ್ಮಿಸಲಾಗಿತ್ತು. ಇದೀಗ ಕಟ್ಟಡ ಸಂಪೂರ್ಣ ಶಿಥಿಲಗೊಂಡಿದ್ದು ಬಜೆಟ್‌ನಲ್ಲಿ ಕ್ರೀಡಾಂಗಣದ ಕಟ್ಟಡ ಅಭಿವೃದ್ಧಿಗೆ ₹ ೬ ಕೋಟಿ ಅನುದಾನ ನೀಡುವ ಜತೆಗೆ ಸ್ವಾತಂತ್ರ‍್ಯ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಹೆಸರು ನಾಮಕರಣ ಮಾಡಿ ಆದೇಶ ಹೊರಡಿಸಿದ್ದಾರೆ. ಇನ್ನು ₹ ೩ ಕೋಟಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಯಿಂದ ಅನುದಾನ ಬರಲಿದೆ. ಒಟ್ಟು ₹ ೯ ಕೋಟಿ ವೆಚ್ಚದಲ್ಲಿ ಮಾದರಿ ಕ್ರೀಡಾಂಗಣ ನಿರ್ಮಿಸಲಾಗುವುದು. ಒಳಾಂಗಣ ಮತ್ತು ಹೊರಾಂಗಣ, ಕಾಂಪೌಂಡ್, ವಾಹನ ಪಾರ್ಕಿಂಗ್, ಕುಡಿಯುವ ನೀರಿನ ವ್ಯವಸ್ಥೆ, ರನ್ನಿಂಗ್ ಟ್ರ‍್ಯಾಕ್, ಸಾರ್ವಜನಿಕರ ಮತ್ತು ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು.

ಕ್ರೀಡಾಗಂಣ ನಿರ್ಮಾಣಕ್ಕೆ ಶೀಘ್ರವೇ ಟೆಂಡರ್‌ ಪ್ರಕ್ರಿಯೆ ನಡೆಯಲಿದ್ದು, ರಾಷ್ಟ್ರೀಯ ಹಬ್ಬ ಅಚರಣೆ ಸೇರಿದಂತೆ ವಿವಿಧ ಕಾರ್ಯಕ್ರಮ ನಡೆಸಲು ಸಹಕಾರಿಯಾಗಿದೆ ಎಂದು ಹೇಳಿದರು.

ವಿವಿಧೆಡೆ ಭೇಟಿ:

ಪಟ್ಟಣದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ನ್ಯಾಯಾಲಯ ಸಂಕೀರ್ಣ, ಬಿಎಸ್ಸಿ ನರ್ಸಿಂಗ್ ಕಾಲೇಜು ಕಟ್ಟಡದ ನಿರ್ಮಾಣದ ಸ್ಥಳವನ್ನು ರಾಯರೆಡ್ಡಿ ಪರಿಶೀಲಿಸಿದರು.

ಈ ವೇಳೆ ತಹಸೀಲ್ದಾರ್‌ ಬಸವರಾಜ ತೆನ್ನಳ್ಳಿ, ಪಪಂ ಮುಖ್ಯಾಧಿಕಾರಿ ನಾಗೇಶ, ಲೋಕೋಪಯೋಗಿ ಇಲಾಖೆ ಎಇಇ ಬಿ. ಮಲ್ಲಿಕಾರ್ಜುನ, ಜಿಲ್ಲಾ ಯುವಜನ ಸೇವಾಕ್ರೀಡಾ ಇಲಾಖೆಯ ಅಧಿಕಾರಿ ವಿಠಲ್ ಜಾಬಗೌಡ್ರ, ಎಸ್.ಆರ್. ನವಲಿ ಹಿರೇಮಠ, ಎಂಜಿನಿಯರ್‌ ಸಚಿನ ಪಾಟೀಲ, ಮಹಾಂತೇಶ ಹಿರೇಮಠ, ಎಆರ್‌ಎಸ್ ಸಮಿತಿ ಉಪಾಧ್ಯಕ್ಷ ಡಾ. ಶಿವನಗೌಡ ದಾನರೆಡ್ಡಿ, ಅವಳಿ ತಾಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಸುಧೀರ ಕೊರ್ಲಳ್ಳಿ, ಸಂಗಮೇಶ ಗುತ್ತಿ, ಭ್ಯೂನ್ಯಾಯ ಮಂಡಳಿ ಸದಸ್ಯ ಮಲ್ಲು ಜಕ್ಕಲಿ ಸೇರಿದಂತೆ ಇತರರು ಇದ್ದರು.

PREV

Recommended Stories

ಗುತ್ತಲದಲ್ಲಿ ಸಂಭ್ರಮದ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
ಹಳಿಯಾಳದ ಮೆಕ್ಕೆಜೋಳದಲ್ಲಿ ಕೀಟನಾಶಕಗಳ ಪ್ರಮಾಣ ಅಧಿಕ