ಸಾಧಾರಣ ಮಳೆ: ಮೇಕೇರಿಯಲ್ಲಿ ರಸ್ತೆಗುರುಳಿದ ಮರ

KannadaprabhaNewsNetwork |  
Published : Aug 05, 2026, 02:30 AM IST
ಮರ | Kannada Prabha

ಸಾರಾಂಶ

ಕೊಡಗು ಜಿಲ್ಲೆಯಾದ್ಯಂತ ಮಂಗಳವಾರ ಸಾಧಾರಣ ಮಳೆಯಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿ ಸೇರಿ ಹಲವು ಕಡೆಗಳಲ್ಲಿ ಬಿಡುವು ನೀಡಿ ಆಗಾಗ್ಗೆ ಮಳೆ ಸುರಿಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಜಿಲ್ಲೆಯಾದ್ಯಂತ ಮಂಗಳವಾರ ಸಾಧಾರಣ ಮಳೆಯಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿ ಸೇರಿ ಹಲವು ಕಡೆಗಳಲ್ಲಿ ಬಿಡುವು ನೀಡಿ ಆಗಾಗ್ಗೆ ಮಳೆ ಸುರಿಯಿತು.

ಮಡಿಕೇರಿ ಮೇಕೇರಿ ರಸ್ತೆಯಲ್ಲಿ ಮರಬಿದ್ದು ವಾಹನ ಸಂಚಾರ ಸ್ಥಗಿತಗೊಂಡಿತು. ಮುಂಜಾನೆ ರಸ್ತೆಗೆ ಅಡ್ಡಲಾಗಿ ಮರ ಬಿದ್ದಿದ್ದ ಹಿನ್ನೆಲೆಯಲ್ಲಿ ವಾಹನ ಸವಾರರು ಪರದಾಟ ನಡೆಸುವಂತಾಯಿತು. ಅರಣ್ಯ ಇಲಾಖೆ ಸಿಬ್ಬಂದಿ ಬೆಳಿಗ್ಗೆ ಮರ ತೆರವು ಮಾಡಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

ಕೊಡಗು ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 8.90 ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ 32.40 ಮಿ.ಮೀ, ವಿರಾಜಪೇಟೆ ತಾಲೂಕಿನಲ್ಲಿ 4.50 ಮಿ.ಮೀ, ಪೊನ್ನಂಪೇಟೆ ತಾಲೂಕಿನಲ್ಲಿ 2.10 ಮಿ.ಮೀ, ಸೋಮವಾರಪೇಟೆ ತಾಲೂಕಿನಲ್ಲಿ 10 ಮಿ.ಮೀ, ಕುಶಾಲನಗರ ತಾಲೂಕಿನಲ್ಲಿ 2.40 ಮಿ.ಮೀ. ಮಳೆಯಾಗಿದೆ.

ಹೋಬಳಿವಾರು: ಮಡಿಕೇರಿ 20.90, ನಾಪೋಕ್ಲು 21.80, ಸಂಪಾಜೆ 34.80, ಭಾಗಮಂಡಲ 47.60, ವಿರಾಜಪೇಟೆ 5.40, ಅಮ್ಮತ್ತಿ 3.40, ಹುದಿಕೇರಿ 66.80, ಶ್ರೀಮಂಗಲ 1.10, ಪೊನ್ನಂಪೇಟೆ 0.50, ಬಾಳೆಲೆ 0.30, ಸೋಮವಾರಪೇಟೆ 1, ಶನಿವಾರಸಂತೆ 0.40, ಶಾಂತಳ್ಳಿ 6.70, ಕೊಡ್ಲಿಪೇಟೆ 0.80, ಕುಶಾಲನಗರ 2.40, ಸುಂಟಿಕೊಪ್ಪ 5.10 ಮಿ.ಮೀ.ಮಳೆಯಾಗಿದೆ. ಹಾರಂಗಿ ವಿವರ: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2857.22 ಅಡಿಗಳು. ಇಂದಿನ ನೀರಿನ ಒಳಹರಿವು 7147 ಕ್ಯುಸೆಕ್, ಹೊರ ಹರಿವು ನದಿಗೆ 6291 ಕ್ಯುಸೆಕ್. ನಾಲೆಗೆ 500 ಕ್ಯುಸೆಕ್.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುರುಶಿಷ್ಯ ಪರಂಪರೆ ಹಿಂದೂ ಸಂಸ್ಕೃತಿಯ ಕೊಡುಗೆ: ಡಾ. ರಾಘವೇಂದ್ರ ರಾವ್
ಸಮಾಜದ ಒಗ್ಗೂಡವಿಕೆಯಿಂದ ಅಭಿವೃದ್ಧಿ ಸಾಧ್ಯ: ಗುರುರಾಜ ಗಂಟಿಹೊಳೆ