ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು

KannadaprabhaNewsNetwork |  
Published : Jun 09, 2025, 03:33 AM ISTUpdated : Jun 09, 2025, 03:34 AM IST
08ಜಿಯುಡಿ1 | Kannada Prabha

ಸಾರಾಂಶ

ರೈತರು ಆಧುನಿಕ ಕೃಷಿ ಪದ್ದತಿಗಳನ್ನು ಅಳವಡಿಸಿಕೊಳ್ಳಬೇಕು. ಕೃಷಿಯಲ್ಲಿ ಯಾಂತ್ರೀಕರಣ ಬಳಸಿಕೊಂಡು ಅಧಿಕ ಇಳುವರಿ, ಸಮಯವನ್ನು ಉಳಿಸುವಂತಹ ಕೆಲಸ ಮಾಡಬೇಕು. ಕೇವಲ ಒಂದೇ ಬೆಳೆಯನ್ನು ಬೆಳೆಯದೇ ವಿವಿಧ ಬೆಳೆಗಳನ್ನು ಬೆಳೆಯಬೇಕು. ಇದೆಲ್ಲದರ ಜೊತೆಗೆ ಸಾವಯವ ಕೃಷಿ ಅಳವಡಿಸಿಕೊಳ್ಳಲಿ

ಕನ್ನಡಪ್ರಭ ವಾರ್ತೆ ಗುಡಿಬಂಡೆ

ದೇಶದ ಆರ್ಥಿಕತೆಯ ಬೆನ್ನೆಲುಬು ರೈತರು. ಆದರೆ ಇಂದು ರೈತರು ಹಳೇಯ ಕೃಷಿ ಪದ್ದತಿಗಳನ್ನು ಬಿಟ್ಟು ಆಧುನಿಕ ಕೃಷಿ ಪದ್ಧತಿಗಳನ್ನು ಬಳಸಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ತಾಲೂಕು ಪಂಚಾಯತಿ ಇಒ ನಾಗಮಣಿ ಸಲಹೆ ನೀಡಿದರು.

ತಾಲೂಕಿನ ವಿವಿಧ ಗ್ರಾಪಂ ಕೇಂದ್ರಗಳಲ್ಲಿ ಚಿಂತಾಮಣಿಯ ಕೃಷಿ ವಿಜ್ಞಾನ ಕೇಂದ್ರ ಹಾಗೂ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕೃಷಿಯಲ್ಲಿ ಯಾಂತ್ರೀಕರಣ

ರೈತರು ಆಧುನಿಕ ಕೃಷಿ ಪದ್ದತಿಗಳನ್ನು ಅಳವಡಿಸಿಕೊಳ್ಳಬೇಕು. ಕೃಷಿಯಲ್ಲಿ ಯಾಂತ್ರೀಕರಣ ಬಳಸಿಕೊಂಡು ಅಧಿಕ ಇಳುವರಿ, ಸಮಯವನ್ನು ಉಳಿಸುವಂತಹ ಕೆಲಸ ಮಾಡಬೇಕು. ಕೇವಲ ಒಂದೇ ಬೆಳೆಯನ್ನು ಬೆಳೆಯದೇ ವಿವಿಧ ಬೆಳೆಗಳನ್ನು ಬೆಳೆಯಬೇಕು. ಇದೆಲ್ಲದರ ಜೊತೆಗೆ ಸಾವಯವ ಕೃಷಿ ಪದ್ದತಿಗಳು, ಕೈ ತೋಟ ಹಾಗೂ ಸುಸ್ಥಿರ ಕೃಷಿ ಪದ್ದತಿಗಳನ್ನು ಅಳವಡಿಸಿಕೊಂಡಾಗ ರೈತರು ಮತ್ತಷ್ಟು ಅಭಿವೃದ್ದಿಯಾಗಬಹುದು ಎಂದರು.

ಬಳಿಕ ಕೃಷಿ ವಿಜ್ಞಾನ ಕೇಂದ್ರದ ಡಾ.ತನ್ವೀರ್ ಅಹ್ಮದ್ ತೊಗರಿ ಹಾಗೂ ಟೊಮೋಟೊ ಬೆಳೆ ಬಗ್ಗೆ ಮಾಹಿತಿ ನೀಡಿ, ರೈತರು ಯಾವುದೇ ಬೆಳೆಯನ್ನು ಇಡುವ ಸಮಯದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳು ಅಥವಾ ವಿಜ್ಞಾನಿಗಳ ಸಲಹೆ ಪಡೆಯಬೇಕು. ಅವರಲ್ಲಿ ತಾವು ಬೆಳೆಯುವಂತಹ ಬೆಳೆಯ ಬಗ್ಗೆ ಸಮರ್ಪಕ ಮಾಹಿತಿಯನ್ನು ಪಡೆದು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಬೇಕು ಎಂದರು.

ಬಿತ್ತನೆಗೆ ಮನ್ನ ಮಣ್ಣು ಪರೀಕ್ಷೆ

ಮಣ್ಣು ವಿಜ್ಞಾನಿಗಳಾದ ಡಾ.ಸಂದ್ಯಾ ಮಾತನಾಡಿ, ರೈತರು ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವ ಮುನ್ನಾ ತಮ್ಮ ಜಮೀನನಲ್ಲಿನ ಮಣ್ಣನ್ನು ಪರೀಕ್ಷೆ ಮಾಡಿಸಿಕೊಳ್ಳಬೇಕು. ರೈತರು ಮಣ್ಣು ಪರೀಕ್ಷೆ ಮಾಡಿಸಿ ಅದರ ವರದಿಯಂತೆ ಪೋಷಕಾಂಶಗಳನ್ನು ನಿರ್ವಹಣೆ ಮಾಡಬೇಕು ಎಂದರು.

ವಿಜ್ಞಾನಿ ಡಾ.ಶ್ರೀರಾಮ್ ಕುಮಾರ್ ಪರಿಸರ ಸ್ನೇಹಿ ಕೀಟ ನಿರ್ವಹಣಾ ತಾಂತ್ರಿಕತೆಗಳ ಕುರಿತು ಹಾಗೂ ಗುಡಿಬಂಡೆ ಸಹಾಯಕ ಕೃಷಿ ನಿರ್ದೇಶಕ ಕೇಶವರೆಡ್ಡಿ ಕೃಷಿ ಇಲಾಖೆಯಿಂದ ಸಿಗುವಂತಹ ಸೌಲಭ್ಯಗಳ ಕುರಿತು, ತೋಟಗಾರಿಕೆ ಇಲಾಖೆಯ ಅಧಿಕಾರಿ ದಿವಾಕರ್ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.

ಇದೇ ಸಮಯದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಹೆಚ್.ಪಿ.ರಾಮನಾಥ್ ಹಾಗೂ ಕೃಷಿಕ ಸಮಾಜದ ತಾಲೂಕು ಅಧ್ಯಕ್ಷ ಮಂಜುನಾಥ್, ವಿವಿಧ ಗ್ರಾಪಂಗಳ ಅಧ್ಯಕ್ಷರು, ಉಪಾಧ್ಯಕ್ಷರುಗಳು, ಸದಸ್ಯರು ಹಾಜರಿದ್ದರು.

PREV

Recommended Stories

ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಖರ್ಗೆ ಕುಟುಂಬದ ವಿರುದ್ಧ ಕೋರ್ಟ್‌ಗೆ ಖಾಸಗಿ ದೂರು