ಉಡುಪಿ: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ಪೋಷಣ್ ಅಭಿಯಾನ, ಸುಕನ್ಯಾ ಸಮೃದ್ಧಿ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಗಳು ಅಂಗನವಾಡಿ ಕೇಂದ್ರಗಳ ಮೂಲಕವೇ ಸಮಾಜದ ಕಟ್ಟ ಕಡೆಯ ಮಗುವನ್ನು ತಲುಪುತ್ತಿವೆ. ಮೋದಿ ಅವರ 25 ವರ್ಷಗಳ ಸಾರ್ವಜನಿಕ ಸೇವಾ ಪಯಣ ಅಂತ್ಯೋದಯದಿಂದ ಸರ್ವೋದಯದತ್ತ ಸಾಗಿದೆ’ ಎಂದು ಕುಂದಾಪುರ ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್, ‘ಅಂಗನವಾಡಿ ಕಾರ್ಯಕರ್ತೆಯರು ಮಕ್ಕಳ ಆರೋಗ್ಯ ಮತ್ತು ಸಂಸ್ಕಾರದ ಮೊದಲ ದೀಪ. ಅವರ ಅತ್ಯಮೂಲ್ಯ ಸೇವೆಯನ್ನು ಗುರುತಿಸುವುದೇ ಈ ‘ಅಂಗಳದ ಉತ್ಸವ’ ಕಾರ್ಯಕ್ರಮದ ಉದ್ದೇಶ’ ಎಂದರು.
ಕಾರ್ಯಕ್ರಮದಲ್ಲಿ 23 ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಸನ್ಮಾನಿಸಲಾಯಿತು. ಮಕ್ಕಳಿಗೆ ಕಲಿಕಾ ಪರಿಕರಗಳನ್ನು ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಕುಂದಾಪುರ ಮಂಡಲ ಅಧ್ಯಕ್ಷ ಸುರೇಶ್ ಶೆಟ್ಟಿ ಗೋಪಾಡಿ, ‘ಸೇವಾ ಸಂಕಲ್ಪ ಅಭಿಯಾನ’ದ ಜಿಲ್ಲಾ ಸಂಚಾಲಕ ದಿನಕರ ಶೆಟ್ಟಿ ಹೆರ್ಗ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್, ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿಗಳಾದ ಗಿರೀಶ್ ಎಂ. ಅಂಚನ್, ಶಿವಕುಮಾರ್ ಅಂಬಲಪಾಡಿ, ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ. ಎಸ್., ಸ್ಥಳೀಯ ಮುಖಂಡರಾದ ಬಾಲಕೃಷ್ಣ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ರಾಧಾ ಉಪಸ್ಥಿತರಿದ್ದರು.ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಉಷಾ ಪ್ರಕಾಶ್ ಶೆಟ್ಟಿ ಸ್ವಾಗತಿಸಿ, ಕಾರ್ಯದರ್ಶಿ ಜ್ಯೋತಿ ರಮೇಶ್ ವಂದಿಸಿದರು. ಕುಂದಾಪುರ ಮಂಡಲ ಯುವ ಮೋರ್ಚಾ ಉಪಾಧ್ಯಕ್ಷ ಸುದರ್ಶನ್ ಕಾರ್ಯಕ್ರಮ ನಿರೂಪಿಸಿದರು.