ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಭಯ: ಡಿಕೆಶಿ

KannadaprabhaNewsNetwork | Updated : Mar 18 2024, 09:00 AM IST

ಸಾರಾಂಶ

ಪ್ರಧಾನಿ ಮೋದಿ ಅವರಿಗೆ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರನ್ನು ಕಂಡರೆ ಭಯ. ಹೀಗಾಗಿ ಅವರ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಅವರು ಕರ್ನಾಟಕದಿಂದ ಅದರಲ್ಲೂ ಕಲಬುರಗಿಯಿಂದ ಚುನಾವಣಾ ಪ್ರಚಾರ ಆರಂಭಿಸಲು ಖರ್ಗೆ ಅವರ ಬಗೆಗಿನ ಭಯ ಕಾರಣ. 

ಕಲಬುರಗಿ ಸೇರಿದಂತೆ ರಾಜ್ಯದ 20 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

20ರಂದು 2ನೇ ಪಟ್ಟಿ ಅಂತಿಮ ಸಾಧ್ಯತೆ: ಪಕ್ಷದ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಯಾವಾಗ ಎಂಬ ಪ್ರಶ್ನೆಗೆ, ಮಾ. 19ರಂದು ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಮಾ. 20ರಂದು ಪಟ್ಟಿ ಅಂತಿಮವಾಗಬಹುದು ಎಂದು ತಿಳಿಸಿದರು.

21ರಂದು ಗ್ಯಾರಂಟಿ ಸಮಿತಿ ಸದಸ್ಯರ ಸಭೆ: ಇನ್ನು ರಾಜ್ಯದಲ್ಲಿ ತಾಲೂಕು, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯರುಗಳ ಸಭೆಯನ್ನು ಮಾ. 21ರಂದು ನಡೆಸಲಿದ್ದೇವೆ. ಇವರೆಲ್ಲರಿಗೂ ಲೋಕಸಭೆ ಚುನಾವಣೆಯ ಜವಾಬ್ದಾರಿ ನೀಡಲಾಗುವುದು ಎಂದು ಹೇಳಿದರು.

Share this article