ಮೋದಿ ಅತ್ಯಾಚಾರಿಗಳ ಪರ ನಿಲ್ಲುತ್ತಾರೆ: ಪ್ರಿಯಾಂಕಾ ಕಿಡಿ

KannadaprabhaNewsNetwork |  
Published : May 05, 2024, 02:03 AM ISTUpdated : May 05, 2024, 09:40 AM IST
4ಕೆಡಿವಿಜಿ6-ದಾವಣಗೆರೆಯಲ್ಲಿ ಎಐಸಿಸಿ ನಾಯಕಿ ಪ್ರಿಯಾಂಕ ಗಾಂಧಿಗೆ ಸಚಿವ ಎಸ್ಸೆಸ್ ಮಲ್ಲಿಕಾರ್ಜುನ ಬೆಳ್ಳಿ ಸ್ಮರಣಿಗೆ ನೀಡಿ, ಸನ್ಮಾನಿಸಿದರು. ರಣದೀಪ್ ಸಿಂಗ್ ಸುರ್ಜೀವಾಲಾ, ಡಿ.ಕೆ.ಶಿವಕುಮಾರ, ಶಾಮನೂರು ಶಿವಶಂಕರಪ್ಪ ಇತರರು ಇದ್ದರು. ...............4ಕೆಡಿವಿಜಿ7-ದಾವಣಗೆರೆಯಲ್ಲಿ ಎಐಸಿಸಿ ನಾಯಕಿ ಪ್ರಿಯಾಂಕ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ, ರಣದೀಪ ಸಿಂಗ್ ಸುರ್ಜೀವಾಲಾ, ಎಸ್ಸೆಸ್ ಮಲ್ಲಿಕಾರ್ಜುನ, ಶಾಮನೂರು ಶಿವಶಂಕರಪ್ಪ ಪ್ರಚಾರ ಸಮಾವೇಶದಲ್ಲಿ. .............4ಕೆಡಿವಿಜಿ8, 9-ದಾವಣಗೆರೆಯಲ್ಲಿ ಕಾಂಗ್ರೆಸ್ ಪ್ರಚಾರ ಸಮಾವೇಶದಲ್ಲಿ ಜನರತ್ತ ಕೈಮುಗಿಯುತ್ತಿರುವ ಎಐಸಿಸಿ ನಾಯಕಿ ಪ್ರಿಯಾಂಕ ಗಾಂಧಿ | Kannada Prabha

ಸಾರಾಂಶ

ಚುನವಾಣೆ ಸಮಯದಲ್ಲಿ ಮಹಿಳೆಯರ ಆತ್ಮನಿರ್ಭರತೆಯ ವಿಚಾರವಾಗಿ ಮಾತನಾಡುವ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮಹಿಳೆಯರ ಗೌರವಕ್ಕೆ ಧಕ್ಕೆ ಬಂದಾಗಲೆಲ್ಲ ಅತ್ಯಾಚಾರಿಗಳು, ದೌರ್ಜನ್ಯ ಎಸಗಿದವರ ಪರ ನಿಲ್ಲುತ್ತಾರೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದರು.

 ದಾವಣಗೆರೆ :  ಚುನವಾಣೆ ಸಮಯದಲ್ಲಿ ಮಹಿಳೆಯರ ಆತ್ಮನಿರ್ಭರತೆಯ ವಿಚಾರವಾಗಿ ಮಾತನಾಡುವ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮಹಿಳೆಯರ ಗೌರವಕ್ಕೆ ಧಕ್ಕೆ ಬಂದಾಗಲೆಲ್ಲ ಅತ್ಯಾಚಾರಿಗಳು, ದೌರ್ಜನ್ಯ ಎಸಗಿದವರ ಪರ ನಿಲ್ಲುತ್ತಾರೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಆರೋಪಿಸಿದರು.

ನಗರದಲ್ಲಿ ಶನಿವಾರ ಕಾಂಗ್ರೆಸ್ ಪ್ರಚಾರ ಸಮಾವೇಶದಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಪರೋಕ್ಷವಾಗಿ ಪ್ರಸ್ತಾಪಿಸಿದ ಅವರು, ಸಾವಿರಾರು ಮಹಿಳೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಸಂಸದನ ಜೊತೆಗೆ ವೇದಿಕೆಯಲ್ಲಿ ಪ್ರಧಾನಿ ಮೋದಿ ಕಾಣಿಸಿಕೊಳ್ಳುತ್ತಾರೆ. ಸಂಸದನ ಕುಕೃತ್ಯದ ವಿಚಾರ ಬಹಿರಂಗ ಆಗುತ್ತಿದ್ದಂತೆಯೇ ಆತ ವಿದೇಶಕ್ಕೆ ಓಡಿ ಹೋದರೂ ಪ್ರಧಾನಿ, ಗೃಹ ಮಂತ್ರಿಗೆ ಗೊತ್ತೇ ಆಗುವುದಿಲ್ಲ. ಪ್ರಧಾನಿ ಮೋದಿ, ಗೃಹ ಮಂತ್ರಿಗೆ ದೇಶದ ಪ್ರತಿಯೊಬ್ಬ ನಾಯಕರು, ಮುಖಂಡರ ಚಲನವಲನಗಳ ಇಂಚಿಂಚೂ ಮಾಹಿತಿ ಇರುತ್ತದೆ. ಅಂಥದ್ದರಲ್ಲಿ ಸಾವಿರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಸಂಸದ ವಿದೇಶಕ್ಕೆ ಹೋದ ಬಗ್ಗೆ ಮಾಹಿತಿ ಇರುವುದಿಲ್ಲವೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷ ನೋಟುಗಳ ಎಕ್ಸ್‌-ರೇ ಯಂತ್ರ ತಂದು, ಚಿನ್ನಾಭರಣ ಕದಿಯುತ್ತದೆಂದು, ನಿಮ್ಮ ಮನೆಯಲ್ಲಿ ಎರಡು ಎಮ್ಮೆಗಳಿದ್ದರೆ ಒಂದು ಎಮ್ಮೆ ಬಿಟ್ಟು, ಇನ್ನೊಂದು ಎಮ್ಮೆಯನ್ನು ಕಾಂಗ್ರೆಸ್ ಕಸಿಯುತ್ತದೆಂದು ಮೋದಿ ಹೇಳಿದ್ದಾರೆ. ಮೋದಿಯವರಿಂದ ಇಷ್ಟೊಂದು ಕೀಳುಮಟ್ಟದ ಅಪಪ್ರಚಾರ ನಿರೀಕ್ಷೆ ಮಾಡಿದ್ದಿರಾ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಜನತೆಗೆ ಪ್ರಶ್ನಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!