- ಪಕ್ಷದ ಕಚೇರಿಯಲ್ಲಿ ಹುಚ್ಚವ್ವನಹಳ್ಳಿ ಮಂಜು ಬಣ ಕಾಂಗ್ರೆಸ್‌ಗೆ ಬೆಂಬಲ ಕಾರ್ಯಕ್ರಮ - - - ಕನ್ನಡಪ್ರಭ ವಾರ್ತೆ, ದಾವಣಗೆರೆ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಅವರಿಗೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ ನೇತೃತ್ವದ ಬಣ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ.
ನಗರದ ಎಂಸಿಸಿ ಬಿ ಬ್ಲಾಕ್‌ನಲ್ಲಿ ಪಕ್ಷದ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಸಮ್ಮುಖದಲ್ಲಿ ಸಂಘದ ಹುಚ್ಚವ್ವನಹಳ್ಳಿ ಮಂಜುನಾಥ ನೇತೃತ್ವದಲ್ಲಿ ರೈತರು, ಮುಖಂಡರು, ಕಾರ್ಯಕರ್ತರು ಸಂಪೂರ್ಣ ಬೆಂಬಲ ಘೋಷಿಸಿದರು.ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಮಾತನಾಡಿ, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ದೊಡ್ಡ ಪ್ರಮಾಣದ ರೈತರಿಗೆ ಅನುಕೂಲವಾಗಿದೆಯೇ ಹೊರತು, ಸಣ್ಣ, ಅತಿ ಸಣ್ಣ ರೈತರಿಗೆ ಯಾವುದೇ ಅನುಕೂಲವೂ ಆಗಿಲ್ಲ. ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಸಹ ರೈತನ ಮಗಳು. ರೈತರ ಸಂಕಷ್ಟಗಳನ್ನು ಕಣ್ಣಾರೆ ಕಂಡವರು. ಕೃಷಿ ಬಗ್ಗೆ ಸಾಕಷ್ಟು ಅರಿವು, ಮಾಹಿತಿ, ಜ್ಞಾನವೂ ಇದೆ. ರೈತರ ಪ್ರತಿಯೊಂದು ವಿಚಾರಗಳ ಬಗ್ಗೆ ಕಾಳಜಿ ಇದೆ ಎಂದು ತಿಳಿಸಿದರು.
ಸಂಘದ ರಾಜ್ಯಾಧ್ಯಕ್ಷ ಹುಚ್ಚವನಹಳ್ಳಿ ಮಂಜುನಾಥ, ಮುಖಂಡರಾದ ರಾಜನಹಟ್ಟಿ ರಾಜು, ಯಲೋದಹಳ್ಳಿ ರವಿಕುಮಾರ, ಹೂವಿನಮಡು ನಾಗರಾಜ, ಎಂ.ಬಿ ಪಾಟೀಲ, ಎಂ.ಕೆಂಚಮ್ಮ, ಎಂ.ಬಸಪ್ಪ, ಅಂಜಿನಪ್ಪ ಹಾಲಿವಾಣ, ಹನುಮಂತಪ್ಪ ಇತರರು ಇದ್ದರು.- - -
-2ಕೆಡಿವಿಜಿ9:
ದಾವಣಗೆರೆಯಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಸಮ್ಮುಖದಲ್ಲಿ ಗುರುವಾರ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಅವರಿಗೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವ್ವನಹಳ್ಳಿ ಮಂಜುನಾಥ, ಮುಖಂಡರು, ರೈತರು ಬೆಂಬಲ ವ್ಯಕ್ತಪಡಿಸಿದರು.