ಸುಭದ್ರ ಆಡಳಿತ ಕೊಟ್ಟ ಮೋದಿ

KannadaprabhaNewsNetwork |  
Published : Jun 20, 2025, 12:34 AM IST
ಪೋಟೊ19ಕೆಎಸಟಿ1: ಕುಷ್ಟಗಿ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಶಾಸಕ ದೊಡ್ಡನಗೌಡ ಪಾಟೀಲ ಮಾತನಾಡಿದರು. | Kannada Prabha

ಸಾರಾಂಶ

ಇತ್ತೀಚಿಗೆ ನಡೆದ ಆಪರೇಷನ್ ಸಿಂದೂರ ಕಾರ್ಯಾಚರಣೆಯಲ್ಲಿ ನರೇಂದ್ರ ಮೋದಿ ಅವರು ಸೈನಿಕರಿಗೆ ಬಲ ತುಂಬುವ ಮೂಲಕ ಭಾರತೀಯರ ಮೇಲೆ ದಾಳಿ ಮಾಡಿದ ಉಗ್ರರರನ್ನು ಸದೆ ಬಡೆಯುವ ಕೆಲಸ ಮಾಡಿದ್ದಾರೆ.

ಕುಷ್ಟಗಿ:

ದೇಶಕ್ಕೆ ಸುಭದ್ರ ಆಡಳಿತ ಕೊಟ್ಟ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭ್ರಷ್ಟಾಚಾರ ರಹಿತ ಆಡಳಿತ ಕೊಟ್ಟಿರುವ ಕೀರ್ತಿ ಸಲ್ಲುತ್ತದೆ ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ವಿಕಸಿತ ಭಾರತ ಅಮೃತಕಾಲ ಸೇವೆ, ಸುಶಾಸನ, ಮೋದಿ ಸರ್ಕಾರಕ್ಕೆ 11 ವರ್ಷ ಪೂರೈಸಿದ ಹಿನ್ನಲೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿಯಾದ ನಂತರ ದೇಶದಲ್ಲಿ ಗುಂಡಿನ ದಾಳಿ, ಬಾಂಬ್ ದಾಳಿ ಕಡಿಮೆಯಾಗಿವೆ ಎಂದರು.

ಇತ್ತೀಚಿಗೆ ನಡೆದ ಆಪರೇಷನ್ ಸಿಂದೂರ ಕಾರ್ಯಾಚರಣೆಯಲ್ಲಿ ನರೇಂದ್ರ ಮೋದಿ ಅವರು ಸೈನಿಕರಿಗೆ ಬಲ ತುಂಬುವ ಮೂಲಕ ಭಾರತೀಯರ ಮೇಲೆ ದಾಳಿ ಮಾಡಿದ ಉಗ್ರರರನ್ನು ಸದೆ ಬಡೆಯುವ ಕೆಲಸ ಮಾಡಿದ್ದಾರೆ ಎಂದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯುದ್ಧ ಬೇಡ ಅಂದವರು ಯುದ್ಧ ನಿಲ್ಲಿಸಿದ ತಕ್ಷಣವೇ ಯುದ್ಧ ಮುಂದುವರಿಯಬೇಕಿತ್ತು ಎಂದು ಹೇಳಿದ್ದರು. ಇವರು ಕೇವಲ ಟೀಕೆಗಾಗಿ ಮಾತನಾಡುತ್ತಿದ್ದಾರೆ ಎಂದು ದೂರಿದರು.

ಭಾರತವೂ ಪಾಕಿಸ್ತಾನದ ಉಗ್ರರ ತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿ ಜಗತ್ತಿಗೆ ಮಾದರಿ ದೇಶವಾಗಿದೆ ಎಂದ ಅವರು, ಇದು ಆರ್ಥಿಕ ಸ್ಥಿತಿಯಲ್ಲಿ ಭಾರತ 4ನೇ ಸ್ಥಾನದಲ್ಲಿದ್ದು 3ನೇ ಸ್ಥಾನಕ್ಕೆ ಬರಲಿದೆ. ರಾಹುಲ್ ಗಾಂಧಿ ಮೋದಿ ವಿರುದ್ಧ ಮಾತನಾಡುವುದನ್ನು ಬಿಟ್ಟು ಪಕ್ಷ ಸಂಘಟನೆಗೆ ಮುಂದಾಗಬೇಕು. ಸಚಿವರಾದ ಸಂತೋಷ ಲಾಡ್, ಪ್ರಿಯಾಂಕ ಖರ್ಗೆ ಸಹ ಮೋದಿ ವಿರುದ್ಧ ಮಾತನಾಡುವುದನ್ನು ನಿಲ್ಲಿಸಬೇಕೆಂದು ಹೇಳಿದರು.

ಜಿಲ್ಲಾ ಬಿಜೆಪಿ ಸಂಚಾಲಕ ಶ್ರೀಧರ ಕೆಸರಟ್ಟಿ ಮಾತನಾಡಿ, ದೇಶದಲ್ಲಿ ಉತ್ತಮ ಆಡಳಿತ ಕೊಟ್ಟ ಮೋದಿ ಅವರು ಎಲ್ಲ ಸಂಕಲ್ಪಗಳನ್ನು ಈಡೇರಿಸಿದ್ದಾರೆ. ಆದರೆ, ಈ ರಾಜ್ಯ ಸರ್ಕಾರ ಜನೌಷಧಿ ಕೇಂದ್ರಗಳನ್ನು ಮುಚ್ಚುವ ಕೆಲಸ ಮಾಡುತ್ತಿದೆ. ರಾಜ್ಯ ಸರ್ಕಾರ ರೈತರ ಸಹಾಯ ಧನ ನಿಲ್ಲಿಸಿದೆ ಎಂದ ಆಕ್ರೋಶ ವ್ಯಕ್ತಪಡಿಸಿದ ಅವರು, ಕಾಂಗ್ರೆಸ್ ದುರಾಡಳಿತದ ಕುರಿತು ನಮ್ಮ ಕಾರ್ಯಕರ್ತರು ಜನರಿಗೆ ತಿಳಿಸಬೇಕು ಎಂದರು.

ನರೇಂದ್ರ ಮೋದಿ ಅವರು ಆಯುಷ್ಮಾನ ಭಾರತ ಕಾರ್ಡ್ ಯೋಜನೆ, ಹೆದ್ದಾರಿ ಅಭಿವೃದ್ಧಿ, ರೈಲ್ವೆ ಅಭಿವೃದ್ಧಿ, ಸ್ವಚ್ಛ ಭಾರತ ಯೋಜನೆ ಸೇರಿದಂತೆ ಅನೇಕ ಯೋಜನೆ ಜಾರಿಗೊಳಿಸಿ ಭಾರತವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ಅಧ್ಯಕ್ಷ ಮಹಾಂತೇಶ ಬಾದಾಮಿ ಮಾತನಾಡಿ, 11 ವರ್ಷಗಳ ಮೋದಿ ಆಡಳಿತ ಸೈನಿಕರಿಗೆ ಭದ್ರತೆ, ರೈತರ ಕಲ್ಯಾಣ, ಬಡವರ ಕಲ್ಯಾಣ, ಸುರಕ್ಷಿತ-ಸುಭದ್ರತೆ ಆಡಳಿತ ಕೊಟ್ಟಿದೆ ಎಂದರು.

ಬಿಜೆಪಿ ಯುವಮೋರ್ಚಾ ಅಧ್ಯಕ್ಷ ಉಮೇಶ ಯಾಧವ, ಸೋಮನಾಥ ಕುಲಕರ್ಣಿ, ಜಿಪಂ ಮಾಜಿ ಸದಸ್ಯ ಕೆ. ಮಹೇಶ ಮಾತನಾಡಿದರು, ಈ ವೇಳೆ ಪ್ರಮುಖರಾದ ಶೈಲಜಾ ಬಾಗಲಿ, ಶಿವುಕುಮಾರ ಹರಿಕೆರಿ, ಮಲ್ಲಣ್ಣ ಪಲ್ಲೇದ, ಜಯತೀರ್ಥ, ಅಶೋಕ ಬಳೂಟಗಿ, ಜಗ್ಗನಗೌಡ್ರು, ಬಾಲಪ್ಪ ಚಾಕ್ರಿ, ಶಿವನಗೌಡ ಮಾಲಗಿತ್ತಿ, ಆಲಂಪಾಷಾ ಮೋದಿ, ಮಹಾಂತೇಶ ಕಲಬಾವಿ ಸೇರಿದಂತೆ ಅನೇಕರು ಇದ್ದರು.

PREV

Recommended Stories

ಧರ್ಮಸ್ಥಳ ಗ್ರಾಮದಲ್ಲಿ ಕಳೇಬರ ಸಿಗದಿದ್ರೆ ಮುಸುಕುಧಾರಿ ಲೋಪವಲ್ಲ
ಪ್ರಧಾನಿ ಆಗಮನ ಹಿನ್ನೆಲೆಯಲ್ಲಿ 35 ಬೀದಿ ನಾಯಿಗಳ ಬಂಧನ