ನೆಲಮಂಗಲ/ದಾಬಸ್‍ಪೇಟೆ: ನೇಕಾರರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸವನ್ನು ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಜೀ ಅವರ ನೇತೃತ್ವದ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ಮಂಜುಳಾ ಸುರೇಶ್ ಹೇಳಿದರು
ನೆಲಮಂಗಲ/ದಾಬಸ್‍ಪೇಟೆ: ನೇಕಾರರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸವನ್ನು ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಜೀ ಅವರ ನೇತೃತ್ವದ ಸರ್ಕಾರ ಮಾಡುತ್ತಿದೆ ಎಂದು ಬಿಜೆಪಿ ಮಹಿಳಾ ಘಟಕದ ತಾಲೂಕು ಅಧ್ಯಕ್ಷೆ ಮಂಜುಳಾ ಸುರೇಶ್ ಹೇಳಿದರು.
ನೆಲಮಂಗಲದಲ್ಲಿ ತಾಲೂಕು ಬಿಜೆಪಿ ಮಹಿಳಾ ಘಟಕ ಹಮ್ಮಿಕೊಂಡಿದ್ದ ರಾಷ್ಟ್ರೀಯ ಕೆಮಗ್ಗ ನೇಕಾರರ ದಿನಾಚರಣೆ ಅಂಗವಾಗಿ ವೃತ್ತಿಪರ ನೇಕಾರರ ಸನ್ಮಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನೇಕಾರ ಸಮುದಾಯಕ್ಕೆ ಕೇಂದ್ರ ಸರ್ಕಾರ ಶಕ್ತಿ ತುಂಬುಲು ಹಲವಾರು ಯೋಜನೆಗಳನ್ನು ರೂಪಿಸಿದೆ. ರಾಜ್ಯದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿಗಳಿದ್ದಾಗಲೂ ನೇಕಾರರಿಗೆ ನೆರವು ನೀಡಿದ್ದರು. ಜವಳಿ ಕ್ಷೇತ್ರದಲ್ಲಿ ಕೆಲಸ ಮಾಡುವವರ ಕೌಶಲ್ಯ ವೃದ್ಧಿಗೆ, ಮಾರುಕಟ್ಟೆ ವಿಸ್ತರಣೆಗೆ ಕೇಂದ್ರ ಸರ್ಕಾರ ಹಲವಾರು ಕಾರ್ಯಕ್ರಮ ಮತ್ತು ಯೋಜನೆಗಳನ್ನು ರೂಪಿಸಿದೆ. ನೇಕಾರಿಕೆ ಕೇವಲ ವೃತ್ತಿಯಲ್ಲ. ಅದೊಂದು ಕಲೆ ಎಂದು ಕೇಂದ್ರ ಸರ್ಕಾರ ಭಾವಿಸಿದೆ ಎಂದು ಹೇಳಿದರು.
ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ.ಬೃಂಗೀಶ್ ಮಾತನಾಡಿ, ಈ ಹಿಂದೆ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರ್ಕಾರ ನೇಕಾರರಿಗೆ ಏನೂ ಮಾಡಲಿಲ್ಲ. ಮೋದಿ ಜೀ ಅವರು, ನೇಕಾರರ ವೃತ್ತಿ ಗುರುತಿಸಿ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ ಘೋಷಣೆ ಮಾಡಿ ಇದರ ಮೂಲಕ ನೇಕಾರಿಕೆ ಕೌಶಲ್ಯ ಉಳಿಸುವ ಇಚ್ಛಾಶಕ್ತಿ ಹೊಂದಿದ್ದಾರೆ ಎಂದರು.
ಮಹಿಳಾ ಘಟಕದ ತಾಲೂಕು ಉಪಾಧ್ಯಕ್ಷೆ ವೇದಾವತಿ ಮಾತನಾಡಿ, ಉದ್ಯೋಗ ಎಂದರೆ ಕೇವಲ ಎಂಜಿನಿಯರಿಂಗ್, ವೈದ್ಯಕೀಯ ಪದವಿ ಪಡೆದವರು, ಐಟಿ ಬಿಟಿ ಉದ್ಯೋಗ ಮಾತ್ರವಲ್ಲ, ಕೃಷಿ, ಹೈನುಗಾರಿಕೆಯೂ ಉದ್ಯೋಗವಾಗಿದೆ. ಗ್ರಾಮೀಣ ಭಾಗದಲ್ಲಿ ಬಡತನ ಇದೆ. ಇಂತಹ ಸಂದರ್ಭದಲ್ಲಿ ಕೈಮಗ್ಗಗಳು ಉದ್ಯೋಗ ನೀಡಬಲ್ಲವು. ಆದರೆ ಸರ್ಕಾರಗಳು ಈ ಕ್ಷೇತ್ರಕ್ಕೆ ಸಹಕಾರ ನೀಡಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಲಿಂಗಣ್ಣನಪಾಳ್ಯದ ನೇಕಾರರಾದ ಲತಾ ಸಿದ್ದರಾಜು ಹಾಗೂ ಬಿನ್ನಮಂಗಲದ ನೇಕಾರರಾದ ಚಿಕ್ಕಮ್ಮ ಶಿವಶಂಕರಪ್ಪಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಾದ ಎಂ.ಎಂ.ಗೌಡ, ಜಿಲ್ಲಾ ಉಪಾಧ್ಯಕ್ಷೆ ರಾಜಮ್ಮ, ಮಹಿಳಾ ಘಟಕದ ಮಾಜಿ ಜಿಲ್ಲಾಧ್ಯಕ್ಷೆ ಸೌಮ್ಯ, ತಾಲೂಕು ಪ್ರಧಾನ ಕಾರ್ಯದರ್ಶಿ ಶೀಲಾ, ಉಪಾಧ್ಯಕ್ಷರುಗಳಾದ ಮಂಜುಳಾ, ನೀಲಮ್ಮ, ಸುಮಾ, ಗೀತಾ, ಶಾಂತಕುಮಾರಿ, ಕುಮಾರ್ ಮತ್ತಿತರಿದ್ದರು.
ಪೋಟೋ 3 :
ನೆಲಮಂಗಲದಲ್ಲಿ ತಾಲೂಕು ಬಿಜೆಪಿ ಮಹಿಳಾ ಘಟಕದಿಂದ ಹಮ್ಮಿಕೊಂಡ ರಾಷ್ಟ್ರೀಯ ಕೆಮಗ್ಗ ನೇಕಾರರ ದಿನಾಚರಣೆ ಅಂಗವಾಗಿ ವೃತ್ತಿಪರ ನೇಕಾರರನ್ನು ಮಹಿಳಾ ನಾಯಕಿಯರು ಸನ್ಮಾನಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.