ಕನ್ನಡಪ್ರಭ ವಾರ್ತೆ ಬಾಗೇಪಲ್ಲಿ
ದೇಶದಲ್ಲಿ ಮತಗಳ್ಳತನ ಮಾಡುವ ಮೂಲಕ ಕೇಂದ್ರದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ಚುಕ್ಕಾಣಿ ಹಿಡಿದಿದೆ. ಇದು ದೇಶದ ಜನತೆಗೆ ಮಾಡುತ್ತಿರುವ ಮಹಾ ಮೋಸ ಎಂದು ಬಾಗೇಪಲ್ಲಿ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಆರೋಪಿಸಿದರು.ವೋಟ್ ಚೋರ್ ಗದ್ದಿ ಚೋಡ್ ಮತಗಳ್ಳತನ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ್ ಪುತ್ಥಳಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು.ಬಿಜೆಪಿಯಿಂದ ಮತಗಳ್ಳತನ
ನಂತರ ಶಾಸಕ ಎಸ್.ಎನ್ ಸುಬ್ಬಾರೆಡ್ಡಿ ಸಹಿ ಮಾಡುವ ಮೂಲಕ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದೇಶದ ಅನೇಕ ರಾಜ್ಯಗಳಲ್ಲಿ ಬಿಜೆಪಿ ವೋಟ್ ಚೋರಿ ಮಾಡುವ ಮೂಲಕ ಕೇಂದ್ರದಲ್ಲಿ ಸತತ 3 ಬಾರಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬಿಜೆಪಿಯವರು ದೇಶದ ಜನರಿಗೆ ಮಾಡುತ್ತಿರುವ ಮೋಸ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಜಾತಿ, ಧರ್ಮದ ಆಧಾರದಲ್ಲಿ ಕಾಂಗ್ರೆಸ್ ರಾಜಕಾರಣ ಮಾಡುವುದಿಲ್ಲ. ರಾಹುಲ್ ಗಾಂಧಿ ಅವರು ಮುಂದಿನ ಪೀಳಿಗೆಯನ್ನು ಉಳಿಸುವ ನಿಟ್ಟಿನಲ್ಲಿ ವೋಟ್ ಚೋರಿಯನ್ನು ತಡೆಯಲು ದೇಶವ್ಯಾಪ್ತಿ ಹೋರಾಟ ನಡೆಸುತ್ತಿದ್ದಾರೆ ಎಂದ ಅವರು ಮುಂದಿನ ಚುನಾವಣೆಯಲ್ಲಿ ದೇಶದ ಜನರಿಗೆ ಮೋಸ ಮಾಡುತ್ತಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದರು.50 ಸಾವಿರ ಸಹಿ ಸಂಗ್ರಹ ಗುರಿ
ಗ್ಯಾರಂಟಿ ತಾಲೂಕು ಸಮಿತಿ ಎಚ್.ಎಸ್. ನರೇಂದ್ರ ಮಾತನಾಡಿ, ಮತಗಳ್ಳತನ ನಿಲ್ಲಿಸಬೇಕೆಂಬ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಮತದಾರರ ಸಹಿ ಸಂಗ್ರಹ ಅಭಿಯಾನ ಹಮ್ಮಿಕೊಂಡಿದೆ. ಕ್ಷೇತ್ರದಲ್ಲಿ 50 ಸಾವಿರ ಸಹಿ ಅಭಿಯಾನದ ಗುರಿಯಾಗಿದೆ ಎಂದರು.ಈ ಸಂದರ್ಭದಲ್ಲಿ ಪುರಸಭೆ ಅದ್ಯಕ್ಷ ಎ.ಶ್ರೀನಿವಾಸ್, ಸದಸ್ಯರಾದ ಶ್ರೀನಿವಾಸ ರೆಡ್ಡಿ, ನಂಜುಂಡಪ್ಪ, ಡಿಎಸ್ಎಸ್ ಮುಖಂಡರಾದ ಪೂಜಪ್ಪ, ಗೂಳೂರು ಎಸ್.ಎಸ್.ರಮೇಶ್ ಬಾಬು, ಮಂಜುನಾಥ ರೆಡ್ಡಿ, ಬೂರಗಮಡುಗು ಲಕ್ಷ್ಮೀನರಸಿಂಹಪ್ಪ ಇದ್ದರು.