ಉತ್ತಮ ಆಡಳಿತ ನೀಡುವಲ್ಲಿ ಮೋದಿ ಸರ್ಕಾರ ಯಶಸ್ವಿ: ಗಣೇಶ್ ಕಾರ್ಣಿಕ್

KannadaprabhaNewsNetwork |  
Published : Jun 12, 2025, 01:43 AM IST
ಚಿತ್ರ : 10ಎಂಡಿಕೆ1 : ಬಿಜೆಪಿಯ ರಾಜ್ಯ ಸಂಚಾಲಕ ಗಣೇಶ್ ಕಾರ್ಣಿಕ್ ಮಾತನಾಡಿದರು.  | Kannada Prabha

ಸಾರಾಂಶ

ಉತ್ತಮ ಆಡಳಿತ ನೀಡುವಲ್ಲಿ ಮೋದಿ ಸರ್ಕಾರ ಯಶಸ್ವಿಯಾಗಿದೆ ಎಂದು ಬಿಜೆಪಿಯ ರಾಜ್ಯ ಸಂಚಾಲಕ ಗಣೇಶ ಕಾರ್ಣಿಕ್‌ ಹೇಳಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 3ನೇ ಅವಧಿಯ ಸರ್ಕಾರ ಜೂ.9ಕ್ಕೆ ಒಂದು ವರ್ಷ ಪೂರ್ಣಗೊಳಿಸಿದ್ದು, ಈ ಮೂಲಕ 2014ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೇರಿದ ಬಿಜೆಪಿ ಸರ್ಕಾರಕ್ಕೆ 11 ವರ್ಷ ತುಂಬಿದಂತಾಗಿದೆ. ಉತ್ತಮ ಆಡಳಿತ ನೀಡುವಲ್ಲಿ ಮೋದಿ ಸರ್ಕಾರ ಯಶಸ್ವಿಯಾಗಿದೆ ಎಂದು ಬಿಜೆಪಿಯ ರಾಜ್ಯ ಸಂಚಾಲಕ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಉತ್ತಮ ಆಡಳಿತದ ಮೂಲಕ ದೇಶದ ಜನರ ಅಪೇಕ್ಷೆಯಂತೆ ಪರಿವರ್ತನೆ ತರುವಲ್ಲಿ ಮೋದಿ ಸರ್ಕಾರ ಯಶಸ್ವಿಯಾಗಿದೆ. ಕಳೆದ 11 ವರ್ಷಗಳಲ್ಲಿ ಭಾರತವು ವೇಗವಾಗಿ ಬೆಳೆಯುತ್ತಿರುವ ಪ್ರಮುಖ ಆರ್ಥಿಕತೆಯಾಗಿ ಬದಲಾಗಿದೆ ಎಂದು ಹೇಳಿದರು.

2014-24ರ ಅವಧಿಯಲ್ಲಿ ಮೋದಿ ಸರ್ಕಾರವು ಕರ್ನಾಟಕದ ರಸ್ತೆ, ರೈಲ್ವೆ, ನಗರಾಭಿವೃದ್ಧಿ ಮತ್ತು ಇಂಧನ ಕ್ಷೇತಕ್ಕೆ 5 ಲಕ್ಷ ಕೋಟಿಗೂ ಹೆಚ್ಚು ಹೂಡಿಕೆ ಮಾಡಿದೆ. ರಾಜ್ಯದಲ್ಲಿ 1860 ಕಿ.ಮೀ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ, ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್‌ವೇಗೆ 8408 ಕೋಟಿ ಬಿಡುಗಡೆ ಮಾಡಿದೆ. ರೈಲ್ವೆ ಮಾರ್ಗಗಳ ವಿದ್ಯುದೀಕರಣದಲ್ಲಿ ಐತಿಹಾಸಿಕ ಪ್ರಗತಿ ಸಾಧಿಸಲಾಗಿದೆ ಎಂದು ತಿಳಿಸಿದರು.

ಸ್ಟಾರ್ಟ್ ಅಪ್ ಇಂಡಿಯಾ, ಕೃಷಿ, ಕೈಗಾರಿಕಾ ಅಭಿವೃದ್ಧಿ, ಬಡವರ ಕಲ್ಯಾಣ ಮತ್ತು ಸಾಮಾಜಿಕ, ಆರೋಗ್ಯ ಭದ್ರತೆ, ಪಿಎಂ ಕಿಸಾನ್, ಬೆಳೆ ವಿಮೆ, ಸ್ವಚ್ಛ ಭಾರತ್, ಉಜ್ವಲ, ಮುದ್ರಾ, ಅಮೃತ್ ಯೋಜನೆ ಸೇರಿದಂತೆ ಪ್ರತಿಯೊಂದು ಕ್ಷೇತ್ರಕ್ಕೂ ಕೋಟ್ಯಾಂತರ ಅನುದಾನ ನೀಡಿ ಜನಪರ ಆಡಳಿತ ನೀಡಿದ್ದಾರೆ. ಕರ್ನಾಟಕದಲ್ಲಿ 10 ವಂದೇ ಮಾತರಂ ರೈಲುಗಳು ಸಂಚರಿಸುತ್ತಿದೆ. ಬೆಂಗಳೂರಿನ ಸುತ್ತ 271 ಕಿ.ಮೀ ಉದ್ದದ ವೃತ್ತಾಕಾರದ ರೈಲು ಸಂಪರ್ಕ ಯೋಜನೆಯ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರವೇ ಭರಿಸಲಿದೆ. ದೇಶಾದ್ಯಂತ ಸಂಕಲ್ಪದಿಂದ ಸಿದ್ಧಿ ಅಭಿಯಾನ ಆರಂಭಗೊಂಡಿದ್ದು, ಮೋದಿ ಸರ್ಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸವಾಗುತ್ತಿದೆ ಎಂದು ಗಣೇಶ್ ಕಾರ್ಣಿಕ್ ಮಾಹಿತಿ ನೀಡಿದರು.

ಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರವಿ ಕಾಳಪ್ಪ, ಎಂಎಲ್ಸಿ ಸುಜಾ ಕುಶಾಲಪ್ಪ, ಮಾಜಿ ಎಂಎಲ್ಸಿ ಸುನಿಲ್ ಸುಬ್ರಮಣಿ, ಪಕ್ಷದ ಉಪಾಧ್ಯಕ್ಷ ಕಿಲನ್ ಗಣಪತಿ, ಪ್ರ.ಕಾರ್ಯದರ್ಶಿ ಚಲನ್ ಕುಮಾರ್ ಹಾಜರಿದ್ದರು.

PREV

Recommended Stories

ಸರ್ಕಾರಿ ಶಾಲೆ ಕುಡಿವ ನೀರಿಗೆ ವಿಷ ಬೆರೆಸಿದ್ದಕ್ಕೆ ಸಿಎಂ ಗರಂ
ಡಾ.ರಾಜ್‌ಕುಮಾರ್‌ರ ನೆಚ್ಚಿನ ಸಹೋದರಿ ನಾಗಮ್ಮ ನಿಧನ