ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರವೇ ಬರುತ್ತದೆ ಎಂಬ ಲೆಕ್ಕಾಚಾರ ಬಿಜೆಪಿಗಿದೆ. ಆದರೆ ಈ ಸಲ ಅದು ಬುಡಮೇಲಾಗುತ್ತಿದೆ ಎಂದರು.
ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಇಡೀ ದೇಶದ ಲೆಕ್ಕಾಚಾರವೇ ಬದಲಾಗುತ್ತಿದೆ. ಹೀಗಾಗಿ ಬಿಜೆಪಿ ಲೆಕ್ಕಾಚಾರ ಕೂಡ ಉಲ್ಟಾ ಆಗುತ್ತದೆ. ಹಿಂದಿ ಮಾತನಾಡುವ ರಾಜ್ಯಗಳಲ್ಲಿ ನಮ್ಮ ಪಕ್ಷದ ಮೈತ್ರಿ ಹೆಚ್ಚು ಸ್ಥಾನ ಗಳಿಸಲಿದೆ ಎಂದು ನುಡಿದರು.ನಮ್ಮ ಲೆಕ್ಕಾಚಾರದ ಪ್ರಕಾರ ಮತ್ತೆ 2024ರಲ್ಲಿ ಮೋದಿ ಸರ್ಕಾರ ಬರಲ್ಲ ಎಂಬುದು. ನೋಡೋಣ ಯಾರ ಲೆಕ್ಕಾಚಾರ ನಿಜವಾಗುತ್ತದೆ ಎಂಬುದನ್ನು ಎಂದರು.
ಹೈಕಮಾಂಡ್ ಲೋಕಸಭೆ ಚುನಾವಣೆಗಾಗಿ ಸಮೀಕ್ಷೆ ಮಾಡುತ್ತಿದ್ದಾರೆ. ನಮಗೆ ಸ್ವಾತಂತ್ರ್ಯ ಬಂದು 70 ಆಯ್ತು. ಕಾಂಗ್ರೆಸ್ ಪಕ್ಷದ ಹಣ 700 ಕೋಟಿ. ಬಿಜೆಪಿ ಸರ್ಕಾರದ ಹಣ 8500 ಕೋಟಿ ದಾಟಿದೆ. ಯಾವ ಪಕ್ಷ ಸಾಹುಕಾರ ಎಂಬುದು ಜನರಿಗೆ ಗೊತ್ತಿದೆ ಎಂದರು.
ನಮ್ಮ ಪಕ್ಷದಲ್ಲಿ ಯಾವುದು ಅಸಮಾಧಾನವಿಲ್ಲ. ಬಣಗಳೂ ಇಲ್ಲ. ಇಲ್ಲಿ ಇರುವುದು ಕಾಂಗ್ರೆಸ್ ಬಣವೊಂದೇ ಎಂದ ಅವರು, ಜಾರಕಿಹೊಳಿ, ಡಿ.ಕೆ. ಶಿವಕುಮಾರ ಮಧ್ಯೆ ಭಿನ್ನಮತ ಇದೆ ಅಂತೇನೂ ನನಗೆ ಅನಸ್ತಾ ಇಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.