ಕನ್ನಡಪ್ರಭ ವಾರ್ತೆ ವಿಜಯಪುರ:ನಗರ ಮತಕ್ಷೇತ್ರ ವ್ಯಾಪ್ತಿಯ ವಾರ್ಡ್ 2ರ ದರ್ಗಾ ರಸ್ತೆಯಲ್ಲಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯಕ್ಕೆ ರಾಜ್ಯ ಸಂಯುಕ್ತ ಸೌಹಾರ್ದ ಸಹಕಾರಿ ನಿಯಮಿತದ ನಿದೇರ್ಶಕ ರಾಮನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ಭೇಟಿ ನೀಡಿದ ಬಿಜೆಪಿ ನಗರ ಮಂಡಲ ಪದಾಧಿಕಾರಿಗಳು ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಅವರ ಪರವಾಗಿ ಮತಯಾಚನೆ ಮಾಡಿದರು.
ರಾಜಯೋಗಿನಿ ಬ್ರಹ್ಮಕುಮಾರಿ ಸರೋಜಾ ಅಕ್ಕ, ರಾಜಯೋಗಿ ಬ್ರಹ್ಮಕುಮಾರ ಗಂಗಾಧರ ಅಣ್ಣ, ಬಿಜೆಪಿ ನಗರ ಮಂಡಲದ ಅಧ್ಯಕ್ಷ ಶಂಕರ ಹೂಗಾರ ಸೇರಿದಂತೆ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು, ಅಭಿಮಾನಿಗಳು, ಹಾಗೂ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ಪರಿವಾರದ ದೈವಿ ಸಹೋದರ, ಸಹೋದರಿಯರು ಉಪಸ್ಥಿತರಿದ್ದರು.