ಮಾಗಡಿ: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಐದು ಗ್ಯಾರಂಟಿಗಳನ್ನು ಟೀಕೆ ಮಾಡುತ್ತಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಈಗ ಮೋದಿ ಗ್ಯಾರಂಟಿ ಹೆಸರಿನಲ್ಲಿ ಮತ ಕೇಳುವ ಸ್ಥಿತಿಗೆ ಬಂದಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ವ್ಯಂಗ್ಯವಾಡಿದರು.
ಹತ್ತು ವರ್ಷ ಮೂರು ತಿಂಗಳಲ್ಲಿ ನಿಮ್ಮ ಪರವಾಗಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇನೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಶುದ್ಧ ನೀರು ಘಟಕಗಳನ್ನು ಆರಂಭಿಸಿ ಕೇವಲ 10 ಪೈಸೆಗೆ ಒಂದು ಲೀಟರ್ ನೀರು ಕೊಡುವ ಕೆಲಸವನ್ನು ಮಾಡಿದೆ. ಮುಂದೆ ಕೂಡ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಲಿದ್ದು ನನ್ನ ಕೂಲಿ ಕೇಳುತ್ತಿದ್ದೇನೆ. ಮತದಾರರು ನೀಡಬೇಕು. ಕ್ಷೇತ್ರದಲ್ಲಿ ಸಾಕಷ್ಟು ಯೋಜನೆಗಳನ್ನು ಹಾಕಿಕೊಂಡಿದ್ದು ಇದನ್ನು ಅನುಷ್ಠಾನಕ್ಕೆ ತರುವ ನಿಟ್ಟಿನಲ್ಲಿ ನನಗೆ ಪ್ರೋತ್ಸಾಹ ಕೊಡಬೇಕೆಂದು ಮನವಿ ಮಾಡಿದರು.
ಶಾಸಕ ಬಾಲಕೃಷ್ಣ ಮಾತನಾಡಿ, ಬಿಜೆಪಿ ಅಭ್ಯರ್ಥಿ ಕ್ಷೇತ್ರದ ಪರಿಚಯ ಮಾಡಿಕೊಳ್ಳಲು 10 ವರ್ಷ ಬೇಕು. ಸಂಸದ ಡಿಕೆ ಸುರೇಶ್ ಅವರು ಪಂಚಾಯಿತಿಗೆ ಏನು ಕೆಲಸ ಆಗಬೇಕೆಂಬುದು ಅವರಿಗೆ ತಿಳಿದಿದೆ. ಇಂತಹ ಸಂಸದರನ್ನು ಕಳೆದುಕೊಂಡರೆ ಕ್ಷೇತ್ರಕ್ಕೆ ನಷ್ಟ ಹೊರೆತು ಡಿ.ಕೆ.ಸುರೇಶ್ ರವರಿಗೆ ಅಲ್ಲ ನೀರಾವರಿ ಯೋಜನೆಯಿಂದ ಹಿಡಿದು ಸಾಕಷ್ಟು ಯೋಜನೆಗಳನ್ನು ಮುಂದುವರಿಸಬೇಕಿದ್ದು ಸಂಸದ ಡಿಕೆ ಸುರೇಶ್ ಅವರನ್ನು ಗೆಲ್ಲಿಸಿಕೊಡಿ ಎಂದು ಮನವಿ ಮಾಡಿದರು.ಇದೇ ವೇಳೆ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷ ಶೈಲಜಾ, ಜೆಡಿಎಸ್ ಮುಖ ಐಯಂಡಳ್ಳಿ ರಂಗಸ್ವಾಮಿ, ಬಿಜೆಪಿ ಪಕ್ಷದ ಜಯಮ್ಮ ಸೇರಿದಂತೆ ಚನ್ನಪಟ್ಟಣ, ಬಿಡದಿ ಸೇರಿದಂತೆ ಅನೇಕ ಮುಖಂಡರು ಕಾಂಗ್ರೆಸ್ ಪಕ್ಷಕ್ಕೆ ಸೇರಿದರು.
ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್.ಎಂ.ರೇವಣ್ಣ, ಕಾಂಗ್ರೆಸ್ ಮುಖಂಡ ಎಚ್.ಎಂ.ಕೃಷ್ಣಮೂರ್ತಿ ಮಾತನಾಡಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಜಯಕುಮಾರ್, ಮಣಿಗನಹಳ್ಳಿ ಸುರೇಶ್, ಬಮೂಲ್ ನಿರ್ದೇಶಕ ನರಸಿಂಹಮೂರ್ತಿ, ಮುಖಂಡರಾದ ಜೆ.ಪಿ. ಚಂದ್ರೇಗೌಡ, ಎಂ.ಕೆ.ಧನಂಜಯ, ಪುರುಷೋತ್ತಮ್, ಕಲ್ಕೆರೆ ಶಿವಣ್ಣ, ಪೂಜಾರಿ ಪಾಳ್ಯ ಕೃಷ್ಣಮೂರ್ತಿ, ಬಿಡದಿ ಪ್ರಾಧಿಕಾರದ ಅಧ್ಯಕ್ಷ ನಟರಾಜು, ಮಾಗಡಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಕೆಂಚೇಗೌಡ ಅನೇಕ ಮುಖಂಡರು ಭಾಗವಹಿಸಿದ್ದರು.ಪೋಟೋ 26ಮಾಗಡಿ2:
ಮಾಗಡಿ ಕಾಂಗ್ರೆಸ್ ಕಚೇರಿಯಲ್ಲಿ ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ, ಬಿಜೆಪಿ ಮಹಿಳಾ ಮುಖಂಡರಾದ ಜಯಮ್ಮ ಸಂಸದ ಡಿ.ಕೆ.ಸುರೇಶ್, ಶಾಸಕ ಬಾಲಕೃಷ್ಣ್ಣಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದರು.