ಒಬಿಸಿ ಜಿಲ್ಲಾಧ್ಯಕ್ಷ ತರಾ.ವೆಂಕಟೇಶ್ । ತಗ್ಗಲಿ ಹೊಸಹಳ್ಳಿಯಲ್ಲಿ ಗ್ರಾಮಚಲೋಗೆ ಚಾಲನೆ
ಹತ್ತು ವರ್ಷಗಳ ಕಾಲ ದೇಶದಲ್ಲಿ ಹಗರಣ ಮುಕ್ತ ಆಡಳಿತ ನೀಡಿದ ಬಿಜೆಪಿ ಸರ್ಕಾರ ಸ್ಪಷ್ಟ ಬಹುಮತ ಪಡೆದು ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾಗುವುದು ನಿಶ್ಚಿತ ಎಂದು ಬಿಜೆಪಿ ಒಬಿಸಿ ಜಿಲ್ಲಾಧ್ಯಕ್ಷ ತ.ರಾ. ವೆಂಕಟೇಶ್ ತಿಳಿಸಿದರು.
ತಾಲೂಕಿನ ಜಡಿಗೇನಹಳ್ಳಿ ಹೋಬಳಿ ತಗ್ಗಲಿ ಹೊಸಹಳ್ಳಿ ಗ್ರಾಮದಲ್ಲಿ ಬಿಜೆಪಿ ಗ್ರಾಮ ಚಲೋ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ದಶಕಗಳ ಕಾಲ ದೇಶವನ್ನಾಳಿದ ಕಾಂಗ್ರೆಸ್ ಪಕ್ಷ ಸ್ವಾರ್ಥ ರಾಜಕಾರಣದಲ್ಲಿ ತೊಡಗಿದ್ದರು. ಆದರೆ ದೇಶದಲ್ಲಿ ನರೇಂದ್ರ ಮೋದಿಯವರು ಪ್ರಧಾನಿಯಾದ ೧೦ ವರ್ಷಗಳಲ್ಲಿ ಮುಂದಿನ ೫೦ ವರ್ಷಕ್ಕಾಗುವಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಆದ್ದರಿಂದ ದೇಶದಲ್ಲಿ ಮೂರನೇ ಬಾರಿಗೆ ನರೇಂದ್ರ ಮೋದಿಯವರೇ ಪ್ರಧಾನಮಂತ್ರಿ ಆಗಬೇಕು ಎಂಬುದು ದೇಶದ ಜನರ ಅಭಿಪ್ರಾಯವಾಗಿದ್ದು, ಅವರ ಸಾಧನೆಗಳ ಕರಪತ್ರಗಳನ್ನು ಗ್ರಾಮಚಲೋ ಹೆಸರಿನಲ್ಲಿ ಮನೆಮನೆಗೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.
ಬಿಜೆಪಿ ಮುಖಂಡರಾದ ಸತೀಶ್, ಮೋಹನ್ ಕುಮಾರ್, ಚಂದ್ರಪ್ಪ, ಶಶಿಕುಮಾರ್ ಹಾಜರಿದ್ದರು.
---------------ತಗ್ಗಲಿ ಹೊಸಹಳ್ಳಿ ಗ್ರಾಮದಲ್ಲಿ ಬಿಜೆಪಿ ಗ್ರಾಮ ಚಲೋ ಕಾರ್ಯಕ್ರಮಕ್ಕೆ ಬಿಜೆಪಿ ಒಬಿಸಿ ಜಿಲ್ಲಾಧ್ಯಕ್ಷ ಮನೆಮನೆಗೆ ಕರಪತ್ರ ಹಂಚುವ ಮೂಲಕ ಚಾಲನೆ ನೀಡಿದರು.