ಕನ್ನಡಪ್ರಭ ವಾರ್ತೆ ಹೊನ್ನಾಳಿ
ಮೋದಿ ಮತ್ತೊಮ್ಮೆ ಪ್ರಧಾನಿ ಎಂಬ ಗೋಡೆ ಬರಹಕ್ಕೆ ಮಂಗಳವಾರ ಚಾಲನೆ ನೀಡಿ ಮಾತನಾಡಿ ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮನ ಮಂದಿರ ನಿರ್ಮಾಣ ಮಾಡಿದ್ದಕ್ಕೆ ದೇಶ ಹಾಗೂ ವಿದೇಶಗಳಲ್ಲಿ ಜನರು ಸಂತಸ ವ್ಯಕ್ತಪಡಿಸಿದ್ದಾರೆ. ರಾಮ ಮಂದಿರ ನಿರ್ಮಾಣದಿಂದ ಹೊಟ್ಟೆ ತುಂಬುತ್ತಾ ಎಂದು ಪ್ರಶ್ನಿಸಿದವರಿಗೆ ಈಗ ಉತ್ತರ ಸಿಕ್ಕುತ್ತಿದೆ. ಉತ್ತರ ಪ್ರದೇಶ ಸರ್ಕಾರದ ಬೊಕ್ಕಸಕ್ಕೆ ₹ 20 ಸಾವಿರ ಕೋಟಿ ಶ್ರೀರಾಮ ಮಂದಿರದಿಂದಲೇ ಬರಲಿದೆ ಎಂದು ಎಸ್‍ಬಿಐಯ ಸಮೀಕ್ಷೆಯಿಂದ ತಿಳಿದು ಬಂದಿದೆ. ಅಯೋಧ್ಯೆ ಶ್ರೀರಾಮ ಮಂದಿರವನ್ನು ಸುಪ್ರೀಂ ಕೋರ್ಟಿನ ತೀರ್ಪು ಬಂದ ಬಳಿಕ ಕಟ್ಟಿದ್ದೇವೆ, ಬಿಜೆಪಿ ಸಂವಿಧಾನಕ್ಕೆ ಗೌರವ ಕೊಡುವ ಪಕ್ಷ ಎಂದರು.
500 ವರ್ಷಗಳ ಸತತ ಹೋರಾಟದಲ್ಲಿ ಮೃತಪಟ್ಟಿದ್ದ ಲಕ್ಷಾಂತರ ಹಿಂದೂಗಳು ಹಾಗೂ ಕರಸೇವಕರಾಗಿ ಹೋಗಿದ್ದ ಹಲವು ಕರ ಸೇವಕರು ತಮ್ಮ ಪ್ರಾಣ ಕಳೆದುಕೊಂಡರು ಅಂತಹ ಎಲ್ಲರಿಗೂ ಆತ್ಮಶಾಂತಿ ಸಿಕ್ಕಿದೆ ಎಂದರು. ಒಂದು ಕಾಲಕ್ಕೆ ಭಾರತವೆಂದರೆ ಮೂಗು ಮುರಿಯುತ್ತಿದ್ದ ವಿದೇಶಿಗರು ಇಂದು ಅದೇ ರಾಷ್ಟ್ರಗಳು ಭಾರತ ಎಂದರೆ ಸಾಕು ನಮಸ್ಕಾರ ಮಾಡುವ ರೂಢಿ ಬೆಳೆಸಿಕೊಂಡಿದ್ದಾರೆ. ಅಂತಹ ತಾಕತ್ತು ಮೋದಿ ಪ್ರಧಾನಿಯಾದ ಬಳಿಕ ಸಾಧ್ಯವಾಯಿತು, ಇಂತಹ ಪ್ರಧಾನಿ ಕಳೆದುಕೊಳ್ಳಲು ಯಾರೂ ಇಷ್ಟಪಡಲ್ಲ ಎಂದರು.ಬಿಜೆಪಿ ಚುನಾವಣೆಯ ಪ್ರಣಾಳಿಕೆಯಲ್ಲಿದ್ದ ಶ್ರೀ ರಾಮಮಂದಿರ ನಿರ್ಮಾಣ, ಆರ್ಟಿಕಲ್ 370 ರದ್ದು, ತ್ರಿವಳಿ ತಲಾಖ್ ರದ್ದು ,ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಸೇರಿದಂತೆ ಇತರ ಯೋಜನೆಗಳ ಪ್ರಣಾಳಿಕೆಯಂತೆ ಈಡೇರಿಸಿದ್ದೇವೆ. ಮೋದಿ ಪ್ರಧಾನಿಯಾದ ಬಳಿಕ ಅಧಿಕಾರಕ್ಕೆ ಬಂದ ನಂತರ ಆರ್ಥಿಕ ಪ್ರಗತಿ 5ನೇ ಸ್ಥಾನಕ್ಕೆ ಬಂದಿದೆ, ಮುಂದಿನ ದಿನಗಳಲ್ಲಿ ಮೂರನೇ ಸ್ಥಾನಕ್ಕೇರಲಿದೆ ಎಂದು ತಿಳಿಸಿದರು.
ತಾಲೂಕು ಬಿಜೆಪಿ ಅಧ್ಯಕ್ಷ ಸುರೇಶ್ ಜೆ.ಕೆ.,ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ನೆಲಹೊನ್ನೆ ಮಂಜುನಾಥ್,ಜಿಲ್ಲಾ ಕಾರ್ಯದರ್ಶಿ ಅರಕೆರೆ ನಾಗರಾಜ್,ತಾ.ಪಂ. ಮಾಜಿ ಉಪಾಧ್ಯಕ್ಷ ಶಿವಾನಂದ್,ಕುಬೇಂದ್ರಪ್ಪ,ಶ್ರೀನಿವಾಸ್ ಹಾಗೂ ಇತರರಿದ್ದರು.ಲೋಕಸಭೆ ಚುನಾವಣೆ: ಎನ್‌ಡಿಎಗೆ 450ಕ್ಕೂ ಹೆಚ್ಚು ಸ್ಥಾನ ನಿರೀಕ್ಷೆ