ಪ್ರಧಾನಿ ನರೇಂದ್ರ ಮೋದಿ ಸದಾ ರಾಷ್ಟ್ರದ ಪ್ರಗತಿಗೆ ಕಾರ್ಯ ಕೈಗೊಳ್ಳುತ್ತಾರೆ
ಕುಕನೂರು: ಪ್ರಧಾನಿ ಮೋದಿ ಮನ್ ಕೀ ಬಾತ್,ದೇಶದ ಪ್ರಗತಿಗೆ ಸಹಕಾರಿ ಆಗಿದೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು.
ತಾಲೂಕಿನ ಮಸಬಹಂಚಿನಾಳ ಗ್ರಾಮದ ಬಿಜೆಪಿ ಕಾರ್ಯಾಲಯದಲ್ಲಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ಅವರ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಿಸಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿ ಕಾರ್ಗಿಲ್ ವಿಜಯ ದಿವಸ್ ನೆನಪು, ಜಲ ಸಂರಕ್ಷಣೆ ಮತ್ತು ದೇಶದ ರಕ್ಷಣೆ ಹಾಗೂ ತಂತ್ರಜ್ಞಾನದ ಪ್ರಗತಿಯ ಬಗ್ಗೆ ಮಾತನಾಡಿದ್ದಾರೆ. ಕಾರ್ಗಿಲ್ ಯುದ್ಧದಲ್ಲಿ ವೀರ ಮರಣದಪ್ಪಿದ ಸೈನಿಕರಿಗೆ ನಮನ ಮತ್ತು ಗೌರವ. ರಕ್ಷಣೆ ಮತ್ತು ದೇಶದ ರಕ್ಷಣಾ ಹಾಗೂ ತಾಂತ್ರಿಕ ಸಾಮರ್ಥ್ಯ ಹೆಚ್ಚಳದ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮಳೆ ನೀರನ್ನು ಉಳಿಸುವ ಮತ್ತು ಜಲ ಸಂರಕ್ಷಣೆ ಮಾಡುವ ಅಗತ್ಯತೆಯ ಬಗ್ಗೆ ಸಂದೇಶ ನೀಡಿದ್ದಾರೆ. ಬ್ಯಾಡ್ಮಿಂಟನ್‌ನಲ್ಲಿ ಜಪಾನ್ ಓಪನ್ ಗೆದ್ದ ಪಿ.ವಿ. ಸಿಂಧುಗೆ ಅಭಿನಂದನೆ ಸಲ್ಲಿಸಿದ್ದಾರೆ. ಹರ್ ಘರ್ ತಿರಂಗಾ ಮತ್ತು ಸ್ಥಳೀಯ ಉತ್ಪನ್ನಗಳಿಗೆ ಬೆಂಬಲ ನೀಡುವ ನಿಟ್ಟಿಯಲ್ಲಿ ಯೋಜನೆ ರೂಪಿಸುವಲ್ಲಿ ಪ್ರಧಾನಿ ಮಾತನಾಡಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಸದಾ ರಾಷ್ಟ್ರದ ಪ್ರಗತಿಗೆ ಕಾರ್ಯ ಕೈಗೊಳ್ಳುತ್ತಾರೆ. ಜನರ ಹಿತ ಮೂಲ ಧ್ಯೇಯ. ಭಾರತವನ್ನು ತಳಮಟ್ಟದಿಂದ ಮತ್ತಷ್ಟು ಸದೃಢಗೊಳಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯ ಕೈಗೊಂಡು ಭಾರತದ ಹಿರಿಮೆ ವಿಶ್ವದಲ್ಲಿ ಗಟ್ಟಿಗೊಳಿಸಿದ್ದಾರೆ.ಎಲ್ಲ ರಂಗದಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರಿಂದ ಭಾರತ ಬಲಿಷ್ಠ ಆಗಿದೆ ಎಂದರು.
ಬಿಜೆಪಿ ಮಂಡಲ ಅಧ್ಯಕ್ಷ ಮಾರುತಿ ಹೊಸಮನಿ, ವಿಶ್ವನಾಥ ಮರಿಬಸಪ್ಪನವರ್, ಶ್ರೀನಿವಾಸ ತಿಮ್ಮಾಪೂರ, ಜಗನ್ನಾಥಗೌಡ ಪಾಟೀಲ, ಪಪಂ ಸದಸ್ಯ ಸಿದ್ಲಿಂಗಯ್ಯ ಉಳ್ಳಾಗಡ್ಡಿ ಇತರರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.