ಕನ್ನಡಪ್ರಭ ವಾರ್ತೆ ಗದಗ
ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸೇವೆ ಮತ್ತು ಸಮರ್ಪಣೆಯ 25 ವರ್ಷಗಳ ಸ್ಮರಣಾರ್ಥ ಆಯೋಜಿಸಲಾಗಿದ್ದ ವಿವಿಧ ಸೇವಾ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಮುಂಬರುವ ಪಶ್ಚಿಮ ಪದವೀಧರ ಮತಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗಾಗಿ ಕಾರ್ಯಕರ್ತರು ಶ್ರಮಿಸಬೇಕು ಎಂದರು.
ಬಿಜೆಪಿ ಜಿಲ್ಲಾಧ್ಯಕ್ಷ ತೋಟಪ್ಪ (ರಾಜು) ಕುರುಡಗಿ ಮಾತನಾಡಿ, ಪ್ರಧಾನಿಯವರ 25 ವರ್ಷಗಳ ಜನಸೇವೆಯನ್ನು ಸ್ಮರಿಸಿ ವಿವಿಧ ಸಮಾಜಮುಖಿ ಕಾರ್ಯಕ್ರಮ ಹಮ್ಮಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಎಂದರು. ಕಾರ್ಯಕ್ರಮ ಸಂಚಾಲಕ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಿಂಗರಾಜ ಪಾಟೀಲ ಮಾತನಾಡಿ, ಈ ಅಭಿಯಾನದಡಿ ಆಶೀರ್ವಾದ ದೀಪ, ₹ 25 ಕೋಟಿ ಮಕ್ಕಳ ಕನಸಿನ ಭಾರತ, ನಮೋ ಸೇವಾ ಕಥನ ಬೀದಿ ನಾಟಕ, ವಿಕಸಿತ ಭಾರತ ಸಂಕಲ್ಪ ಯಾತ್ರೆ, ರಕ್ತದಾನ ಶಿಬಿರ, ಅನಾಥಾಶ್ರಮ, ವೃದ್ಧಾಶ್ರಮ ಭೇಟಿ, ವೃಕ್ಷಾರೋಪಣ, ಆರೋಗ್ಯ ತಪಾಸಣೆ ಹಾಗೂ ಸ್ವಚ್ಛತಾ ಅಭಿಯಾನ ಸೇರಿದಂತೆ ಹತ್ತು ಹಲವು ಸೇವಾ ಚಟುವಟಿಕೆಗಳನ್ನು ಕಾರ್ಯಕರ್ತರು ಹಮ್ಮಿಕೊಳ್ಳಲಿದ್ದಾರೆ ಎಂದು ವಿವರಿಸಿದರು.ಕಾರ್ಯಕ್ರಮದಲ್ಲಿ ಶಾಸಕ ಡಾ. ಚಂದ್ರು ಲಮಾಣಿ, ವಿಧಾನಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಕೇಂದ್ರ ಆಹಾರ ನಿಗಮದ ಸದಸ್ಯ ರವಿ ದಂಡಿನ, ಮುಖಂಡ ಉಮೇಶಗೌಡ ಪಾಟೀಲ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಕ್ಕೀರೇಶ ರಟ್ಟಿಹಳ್ಳಿ, ಸೇವಾ ಸಂಕಲ್ಪ ಅಭಿಯಾನ ತಂಡದ ಅನಿಲ ಅಬ್ಬಿಗೇರಿ, ಸಂತೋಷ ಅಕ್ಕಿ ಸೇರಿದಂತೆ ಮಂಡಲ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.