ಕನ್ನಡಪ್ರಭ ವಾರ್ತೆ ಉಡುಪಿಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಶಿರಿಬೀಡು ವಾರ್ಡ್ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭಾಗವಹಿಸಿ ಮತಯಾಚಿಸಿದರು.
ಸಭೆಯಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಉಡುಪಿ ನಗರ ಬಿಜೆಪಿ ಮಂಡಲ ಅಧ್ಯಕ್ಷ ದಿನೇಶ್ ಅಮೀನ್, ಪಕ್ಷದ ಮುಖಂಡರಾದ ಕಿರಣ್ ಕುಮಾರ್ ಬೈಲೂರು, ಬೈಕಾಡಿ ಸುಪ್ರಸಾದ್ ಶೆಟ್ಟಿ, ವೀಣಾ ಶೆಟ್ಟಿ, ನಗರಸಭಾ ಸದಸ್ಯರಾದ ಟಿ.ಜಿ. ಹೆಗ್ಡೆ, ಶ್ರೀ ಗಿರೀಶ್ ಅಂಚನ್, ಪ್ರಮುಖರಾದ ಮಹೇಶ್, ಆನಂದ್, ಮಂಡಲದ ಪ್ರಧಾನ ಕಾರ್ಯದರ್ಶಿ ರಶ್ಮಿತ ಶೆಟ್ಟಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
* ಹಂದಾಡಿಯಲ್ಲಿ ಮತಪ್ರಚಾರಯಶ್ಪಾಲ್ ಸುವರ್ಣ ಅವರು ಹಂದಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾರ್ಯಕರ್ತರ ಸಭೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಭಾಗವಹಿಸಿದ್ದರು. ಸಭೆಯಲ್ಲಿ ಉಡುಪಿ ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ರಾಜೀವ್ ಕುಲಾಲ್, ಪಕ್ಷದ ಮುಖಂಡರಾದ ಬಿ. ಎನ್. ಶಂಕರ ಪೂಜಾರಿ, ರವಿ ಶೆಟ್ಟಿ, ಧನಂಜಯ ಅಮೀನ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ರಾಘವೇಂದ್ರ ಕುಂದರ್, ನಿಶಾನ್ ರೈ, ಸುಧೀರ್ ಶೆಟ್ಟಿ, ನಿರಂಜನ್ ಪೂಜಾರಿ, ಮೋಹನ್ ಶೆಟ್ಟಿ, ಹಂದಾಡಿ ಗ್ರಾಪಂ ಅಧ್ಯಕ್ಷರಾದ ಶೋಭಾ, ಮಂಡಲದ ಪ್ರಧಾನ ಕಾರ್ಯದರ್ಶಿ ಸಚಿನ್ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.