ದೇಶದ ರಕ್ಷಣೆ, ಸುಭದ್ರತೆಗೆ ಮೋದಿ ಮತ್ತೊಮ್ಮೆ: ಚಿದಾನಂದ್ ಎಂ.ಗೌಡ

KannadaprabhaNewsNetwork |  
Published : Apr 16, 2024, 01:04 AM IST
15ಶಿರಾ1: ಶಿರಾ ನಗರದ ಕೋಟೆ ಆಂಜನೇಯ ಸ್ವಾಮಿ ಹಾಗೂ ಗ್ರಾಮ ದೇವತೆ ದುರ್ಗಮ್ಮ ದೇವಿ, ಶ್ರೀರಾಮ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಎನ್.ಡಿ.ಎ. ಅಭ್ಯರ್ಥಿ ಗೋವಿಂದ ಕಾರಜೋಳ ಅವರ ಪರ ಮತಯಾಚಿಸಲಾಯಿತು. ವಿ.ಪ. ಸದಸ್ಯರಾದ ಚಿದಾನಂದ್ ಎಂ ಗೌಡ, ತಿಪ್ಪೇಸ್ವಾಮಿ, ಎಸ್.ಆರ್.ಗೌಡ, ಆರ್.ಉಗ್ರೇಶ್, ಬಿ.ಕೆ.ಮಂಜುನಾಥ್, ಹನುಮಂತೇಗೌಡ ಸೇರಿದಂತೆ ಹಲವರು ಹಾಜರಿದ್ದರು. | Kannada Prabha

ಸಾರಾಂಶ

ರಾಜ್ಯ ರೇಷ್ಮೆ ನಿಗಮದ ಮಾಜಿ ಅಧ್ಯಕ್ಷ ಎಸ್.ಆರ್.ಗೌಡ ಮಾತನಾಡಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಶಕ್ತಿ ಬಂದಿದ್ದು, ಎರಡೂ ಪಕ್ಷಗಳ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಿ ಎಂದರು.

ಕನ್ನಡಪ್ರಭ ವಾರ್ತೆ ಶಿರಾ

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದ ಆಡಳಿತದಲ್ಲಿ ಭಾರತ ಸುಭದ್ರವಾಗಿರುತ್ತದೆ. ದೇಶದ ಸುಭದ್ರತೆ ಹಾಗೂ ರಕ್ಷಣೆಯ ಹಿತದೃಷ್ಟಿಯಿಂದ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ ಗೌಡ ಹೇಳಿದರು.

ಭಾನುವಾರ ನಗರದ ಕೋಟೆ ಆಂಜನೇಯ ಸ್ವಾಮಿ ಹಾಗೂ ಗ್ರಾಮ ದೇವತೆ ದುರ್ಗಮ್ಮ ದೇವಿ, ಶ್ರೀರಾಮ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿ ನಂತರ ಡಾ. ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಗೋವಿಂದ ಕಾರಜೋಳ ಅವರಿಗೆ ಮತ ನೀಡುವಂತೆ ಮತಯಾಚನೆ ಮಾಡಿ ಅವರು ಮಾತನಾಡಿದರು. ಗೋವಿಂದ ಕಾರಜೋಳ ಅವರು ಹಿರಿಯರು, ಸರಳ ಹಾಗೂ ರಾಜಕೀಯ ಇಚ್ಛಾಶಕ್ತಿ ಇರುವ ರಾಜಕಾರಣಿಯಾಗಿದ್ದು, ಅವರನ್ನು ಗೆಲ್ಲಿಸಿ ಎಂದರು.

ರಾಜ್ಯ ರೇಷ್ಮೆ ನಿಗಮದ ಮಾಜಿ ಅಧ್ಯಕ್ಷ ಎಸ್.ಆರ್.ಗೌಡ ಮಾತನಾಡಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಿಂದ ಶಕ್ತಿ ಬಂದಿದ್ದು, ಎರಡೂ ಪಕ್ಷಗಳ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಿ ಎಂದರು.

ವಿಧಾನಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಮುಖಂಡ ಆರ್.ಉಗ್ರೇಶ್, ಮಧುಗಿರಿ ಬಿಜೆಪಿ ಅಧ್ಯಕ್ಷ ಹನುಮಂತೇಗೌಡ, ನಿಕಟ ಪೂರ್ವ ಅಧ್ಯಕ್ಷ ಬಿ.ಕೆ.ಮಂಜುನಾಥ್, ಜೆಡಿಎಸ್ ತಾಲೂಕು ಅಧ್ಯಕ್ಷ ಸತ್ಯಪ್ರಕಾಶ್, ಬಿಜೆಪಿ ತಾಲೂಕು ಅಧ್ಯಕ್ಷ ಚಿಕ್ಕಣ್ಣ, ನಗರಮಂಡಲ ಅಧ್ಯಕ್ಷ ಗಿರಿಧರ್, ಮುದಿಮಡು ರಂಗಸ್ವಾಮಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಉಮಾ ವಿಜಯ್ ರಾಜ್, ಮದಲೂರು ಮೂರ್ತಿ ಮಾಸ್ಟರ್, ಮುದಿಮಡು ಮಂಜುನಾಥ್, ಕಾಡುಗೊಲ್ಲ ಅಭಿವೃದ್ಧಿ ನಿಗಮ ಮಂಡಳಿಯ ಮಾಜಿ ಅಧ್ಯಕ್ಷ ಚಂಗಾವರ ಮಾರಣ್ಣ, ಜಿಲ್ಲಾ ಕಾರ್ಯದರ್ಶಿ ಎಸ್.ಪಿ.ಕೃಷ್ಣಮೂರ್ತಿ, ನಟರಾಜ್ ಸಂತೆಪೇಟೆ, ಹಿರಿಯ ಮುಖಂಡ ಬರಗೂರು ಶಿವಕುಮಾರ್, ಗ್ರಾಪಂ ಸದಸ್ಯ ಡಿ.ಎಚ್ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಯಂಜಲಗೆರೆ ಮೂರ್ತಿ, ಕದಿರೇಹಳ್ಳಿ ಮೂರ್ತಿ, ಕೊಟ್ಟ ರಂಗನಾಥ್, ನರಸಿಂಹ ರಾಜು, ಕರಿಯಣ್ಣ, ಲಲಿತಮ್ಮ, ಪದ್ಮ, ಲತಾ ಕೃಷ್ಣ, ಸೇರಿ ಹಲವರು ಹಾಜರಿದ್ದರು.

PREV

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ