ಮೋದಿ ಜನ್ಮದಿನ: ನಾಳೆ ಬೃಹತ್ ರಕ್ತದಾನ ಶಿಬಿರ

KannadaprabhaNewsNetwork |  
Published : Sep 22, 2026, 02:15 AM IST
ಬಿಜೆಪಿ ತಾಲೂಕಾಧ್ಯಕ್ಷ ನಿಂಗಪ್ಪ ಬಟ್ಟಲಕಟ್ಟಿ.. | Kannada Prabha

ಸಾರಾಂಶ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಬ್ಯಾಡಗಿ ಮಂಡಲದ ವತಿಯಿಂದ ಸೆ. 23ರಂದು ಪಟ್ಟಣದಲ್ಲಿ ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ತಾಲೂಕಾಧ್ಯಕ್ಷ ನಿಂಗಪ್ಪ ಬಟ್ಟಲಕಟ್ಟಿ ತಿಳಿಸಿದರು.

ಬ್ಯಾಡಗಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಬ್ಯಾಡಗಿ ಮಂಡಲದ ವತಿಯಿಂದ ಸೆ. 23ರಂದು ಪಟ್ಟಣದಲ್ಲಿ ಬೃಹತ್ ಸ್ವಯಂಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ತಾಲೂಕಾಧ್ಯಕ್ಷ ನಿಂಗಪ್ಪ ಬಟ್ಟಲಕಟ್ಟಿ ತಿಳಿಸಿದರು.

ಪಟ್ಟಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 23ರಂದು ಬೆಳಗ್ಗೆ 10ರಿಂದ ಸಂಜೆ 4ರ ವರೆಗೆ ಚಾವಡಿ ರಸ್ತೆಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ರಂಗಮಂದಿರದಲ್ಲಿ ರಕ್ತದಾನ ಶಿಬಿರ ನಡೆಯಲಿದೆ ಎಂದರು.

ರಕ್ತದಾನವು ಸಮಾಜಮುಖಿ ಸೇವೆಯ ಪ್ರಮುಖ ಭಾಗವಾಗಿದ್ದು, ತುರ್ತು ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಇರುವವರಿಗೆ ನೆರವಾಗಲು ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ರಕ್ತದಾನ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಆರೋ ಗ್ಯವಂತರು ರಕ್ತದಾನ ಮಾಡುವ ಮೂಲಕ ಮಾನವೀಯ ಸೇವೆಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ದೇಶದಾದ್ಯಂತ ವಿವಿಧ ಸೇವಾ ಹಾಗೂ ಜನಪರ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ, ಅದರ ಭಾಗವಾಗಿ ಬ್ಯಾಡಗಿ ಮಂಡಲದಲ್ಲಿಯೂ ರಕ್ತದಾನ ಶಿಬಿರ ಆಯೋಜಿಸಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ರಕ್ತ ಸಂಗ್ರಹಿಸಿ ಅಗತ್ಯವಿರುವವರಿಗೆ ನೆರವಾಗುವ ಉದ್ದೇಶ ಹೊಂದಲಾಗಿದೆ. ಆದ್ದರಿಂದ ಯುವಕರು ಹಾಗೂ ಸಾರ್ವಜನಿಕರು ರಕ್ತದಾನ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು. ಪಕ್ಷದ ಮುಖಂಡರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಕರೆ ನೀಡಿದ ಅವರು, ರಕ್ತದಾನ ಮಾಡುವ ಮೂಲಕ ಮತ್ತೊಬ್ಬರ ಜೀವ ಉಳಿಸುವ ಕಾರ್ಯದಲ್ಲಿ ಪ್ರತಿಯೊಬ್ಬರೂ ಭಾಗಿಯಾಗುವಂತೆ ಮನವಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಾಜಮುಖಿ ಚಿಂತನೆ, ಅಭಿವೃದ್ಧಿಗೆ ಸದಾಕಾಲ ಮನ್ನಣೆ: ಸಂಸದ ಬೊಮ್ಮಾಯಿ
ಬರ ಘೋಷಣೆ ವಿಷಯದಲ್ಲಿ ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂಡ್ರಿಸಿ ನುಣುಚಿಕೊಳ್ಳುತ್ತಿದೆ