ಕನ್ನಡಪ್ರಭ ವಾರ್ತೆ ದಾವಣಗೆರೆ
ತಮ್ಮ ತವರು ಜಿಲ್ಲೆ ಶಿವಮೊಗ್ಗದಲ್ಲಿ ಬಿಜೆಪಿ ಪ್ರಚಾರ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ತೆರೆದ ವಾಹನದಲ್ಲಿ ಸಮಾರಂಭದ ವೇದಿಕೆಗೆ ತಲುಪಿದ್ದು, ಲಕ್ಷಾಂತರ ಜನರ ಮಧ್ಯೆ ವಿಶ್ವ ನಾಯಕ ನರೇಂದ್ರ ಮೋದಿಯವರ ಜೊತೆಗೆ ಹೋಗಲು ಅವಕಾಶ ಸಿಕ್ಕಿರುವುದು ನನ್ನ ಗೆಲುವಿಗೆ ದಿಕ್ಸೂಚಿ ಎಂದರು.
ಮಹಿಳಾ ಸಬಲೀಕರಣದ ಬಗ್ಗೆ ನರೇಂದ್ರ ಮೋದಿಯವರು ಕೇವಲ ಬಾಯಿ ಮಾತಿನಲ್ಲಿ ಹೇಳುವುದಿಲ್ಲ. ಅದನ್ನು ಕಾರ್ಯ ರೂಪಕ್ಕೆ ತಂದು ತೋರಿಸಿದ್ದಾರೆ. ಮಹಿಳಾ ಕೋಟಾದಲ್ಲಿ ನನಗೆ ದಾವಣಗೆರೆ ಲೋಕಸಭಾ ಕ್ಷೇತ್ರ ಟಿಕೆಟ್ ಕೊಟ್ಟಿದ್ದಾರೆ. ಅಂತಹ ಮಹಾನ್ ನಾಯಕರ ಜೊತೆಗೆ ನಿಂತು, ರ್‍ಯಾಲಿಯಲ್ಲಿ ಭಾಗವಹಿಸಲು ತಮಗೆ ಅವಕಾಶ ಕಲ್ಪಿಸುವ ಮೂಲಕ ಲಕ್ಷಾಂತರ ಮಹಿಳೆಯರಿಗೆ ಮೋದಿ ಗೌರವ ಸೂಚಿಸಿದ್ದಾರೆ ಎಂದು ತಿಳಿಸಿದರು.ಮತ್ತೆ ನರೇಂದ್ರ ಮೋದಿಯವರ ಪ್ರಧಾನಿಯಾಗಿ ಮಾಡಲು ಅಹೋರಾತ್ರಿ ಶ್ರಮಿಸುತ್ತೇವೆ. ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಭದ್ರಕೋಟೆ. ಅದನ್ನು 2024ರ ಸಾರ್ವತ್ರಿಕ ಚುನಾವಣೆಯಲ್ಲಿ ಮತ್ತೊಮ್ಮೆ ನಮ್ಮ ಮತದಾರರು ಸಾಬೀತುಪಡಿಸಲಿದ್ದಾರೆ. ಈ ಸಲವೂ ನಮ್ಮ ಕ್ಷೇತ್ರದಲ್ಲಿ ಬಿಜೆಪಿ ಅಲೆ ಜೋರಾಗಿಯೇ ಇದೆ. ಕಳೆದ 28 ವರ್ಷದಿಂದಲೂ ನಮ್ಮ ಕ್ಷೇತ್ರದ ಬಿಜೆಪಿಯ ಭದ್ರಕೋಟೆಯಾಗಿದೆ. ಈ ಸಲವೂ ಮತದಾರರು ಬಿಜೆಪಿ ಅಭ್ಯರ್ಥಿಯಾದ ತಮಗೆ ಆಶೀರ್ವದಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಸುರಕ್ಷಿತ ಕೈಗಳಿಗೆ ಆಡಳಿತ
ಗಾಯತ್ರಿ ಸಿದ್ದೇಶ್ವರ, ಬಿಜೆಪಿ ಅಭ್ಯರ್ಥಿ