ಶೆಟ್ಟಿಕೊಪ್ಪದಲ್ಲಿ ನಡೆದ ಕಾಂಗ್ರೆಸ್ ಮುಖಂಡರ, ಕಾರ್ಯಕರ್ತರ ಸಭೆ
ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರದಲ್ಲಿ ಯಾವುದೇ ರೀತಿಯಲ್ಲೂ ಜನಪರ ಕಾರ್ಯಕ್ರಮಗಳಿಲ್ಲ ಎಂದು ಕೆಪಿಸಿಸಿ ಸದಸ್ಯ ಪಿ.ಆರ್.ಸದಾಶಿವ ಟೀಕಿಸಿದರು.
ಸೋಮವಾರ ಶೆಟ್ಟಿಕೊಪ್ಪದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಬಿಜೆಪಿಯವರು ಯಾವುದೇ ಅಭಿವೃದ್ಧಿ ಆಧಾರದ ಮೇಲೆ ಮತ ಕೇಳದೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಹಿಂದುತ್ವ, ಅಯೋಧ್ಯೆ ರಾಮ ಮಂದಿರ ನಿರ್ಮಾಣದ ವಿಷಯದ ಮೇಲೆ ಮತಗಳನ್ನು ಕೇಳುತ್ತಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ದಿನ ಬಳಕೆ ವಸ್ತುಗಳ ಬೆಲೆ ದಿನೇ, ದಿನೇ ಏರಿಕೆಯಾಗುತ್ತಿದೆ.ಪೆಟ್ರೋಲ್, ಡೀಸೆಲ್, ಗ್ಯಾಸ್ ಬಡವರ ಕೈಗೆಟುಕದಂತಾಗಿದೆ. ಕೇಂದ್ರ ಸರ್ಕಾರ ರೈತರನ್ನು, ಅಲ್ಪ ಸಂಖ್ಯಾತರನ್ನು, ದಲಿತರನ್ನು ಕಡೆಗಣಿಸಿದೆ. ಮೋದಿ ಹಾಗೂ ಅಮಿತ್ ಷಾ ಅವರ ಸರ್ವಾಧಿಕಾರಿ ಧೋರಣೆಯಿಂದ ಬಿಜೆಪಿ ಸಂಪೂರ್ಣ ನೆಲ ಕಚ್ಚಿ ಹೋಗಿದೆ. ರಾಜ್ಯದಲ್ಲಿ ಅಲ್ಲದೆ ಬೇರೆ ರಾಜ್ಯಗಳಲ್ಲೂ ಕೂಡ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಗ್ಯಾರಂಟಿ ಯೋಜನೆಗಳದ್ದೇ ಮನೆ ಮಾತಾಗಿದೆ. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಜೊತೆಯಲ್ಲಿ ಅಭಿವೃದ್ಧಿ ಕಾರ್ಯಗಳೂ ಸಹ ನಡೆಯುತ್ತಿದೆ. ಕೇಂದ್ರದಲ್ಲೂ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ 5 ನ್ಯಾಯ 25 ಗ್ಯಾರಂಟಿ ಯೋಜನೆಗಳು ಜಾರಿಯಾಗಲಿವೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಯವರು ಸರಳ , ಸಜ್ಜನ ವ್ಯಕ್ತಿಯಾಗಿದ್ದಾರೆ. ಹಿಂದೆ 5 ವರ್ಷ ಲೋಕಸಭಾ ಸದಸ್ಯರಾಗಿ ಕ್ಷೇತ್ರದ ಜ್ವಲಂತ ಸಮಸ್ಯೆಗಳ ಬಗ್ಗೆ ಸದನದಲ್ಲಿ ಧ್ವನಿ ಎತ್ತಿದ್ದಾರೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೇರ್‌ಬೈಲ್ ನಟರಾಜ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಬಡವರ, ರೈತರ, ದಲಿತರ, ಹಿಂದುಳಿದ ವರ್ಗಗದವರ, ಅಲ್ಪ ಸಂಖ್ಯಾತ ವರ್ಗದವರ ಪರವಾಗಿ ಕಾರ್ಯನಿರ್ವಹಿಸುತ್ತಿದೆ. ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ಸರ್ಕಾರದಿಂದ ಸಾಕಷ್ಟು ಅನುದಾನ ತಂದಿದ್ದಾರೆ. ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಪ್ರಾರಂಭ ವಾಗಿದೆ. ಈಗಾಗಲೇ ಪ್ರತೀ ಗ್ರಾಮ ಪಂಚಾಯಿತಿಗಳಿಗೆ 40 ಲಕ್ಷ ರು. ಅನುದಾನ ನೀಡಲಾಗಿದೆ. ಅಲ್ಪ ಸಂಖ್ಯಾತರ ಕೋಟಾದಡಿ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ತರಲಾಗಿದೆ. ರಾಜ್ಯದ ಹಾಗೂ ಕ್ಷೇತ್ರದ ಜನ ಹಿತ ಕಾಪಾಡುವಂತಹ ಸಂಸದರ ಅವಶ್ಯತೆ ಇದೆ. ಆದ್ದರಿಂದ ಈ ಬಾರಿ ಜಯಪ್ರಕಾಶ್ ಹೆಗ್ಡೆಯವರನ್ನು ಅತ್ಯಧಿಕ ಅಂತರದಿಂದ ಜಯಶೀಲ ರನ್ನಾಗಿಸಲು ನಾವೆಲ್ಲರೂ ಶ್ರಮಿಸಬೇಕೆಂದು ಕರೆ ನೀಡಿದರು.ಸಭೆ ಅಧ್ಯಕ್ಷತೆಯನ್ನು ಕಡಹಿನಬೈಲು ಗ್ರಾಪಂ ಮಟ್ಟದ ಕಾಂಗ್ರೆಸ್ ಅಧ್ಯಕ್ಷ ಭೀಮನರಿ ಪ್ರಶಾಂತ್ ವಹಿಸಿದ್ದರು. ಈ ಸಂದರ್ಭದಲ್ಲಿ ಎಪಿಎಂಸಿ ಉಪಾಧ್ಯಕ್ಷ ಎಸ್.ಡಿ.ರಾಜೇಂದ್ರ, ತಾಲೂಕು ಪ್ರಚಾರ ಸಮಿತಿ ಅಧ್ಯಕ್ಷ ಎಲ್ದೋ, ಮುಖಂಡರಾದ ಈ.ಸಿ.ಜೋಯಿ, ಬೆನ್ನಿ, ಸಾಜು, ಮಾಳೂರು ದಿಣ್ಣೆರಮೇಶ್, ಶೈಲಾಮಹೇಶ್, ಎಂ.ಆರ್.ರವಿಶಂಕರ್, ದೇವಂತ್ ರಾಜ್‌ಗೌಡ, ಅಬ್ದುಲ್‌ರೆಹಮಾನ್, ಎಂ.ಮಹೇಶ್, ಬೇಸಿಲ್, ಕೆ.ಟಿ.ನಂದೀಶ್, ಎನ್.ಕೆ.ಕೀರ್ತನ್, ಸುಲೇಮಾನ್, ರಂಜುಎಲಿಯಾಸ್, ಮಂಜುನಾಥ ಮತ್ತಿತರರ ಉಪಸ್ಥಿತರಿದ್ದರು.ಇದಕ್ಕೂ ಮೊದಲು ಮುತ್ತಿನಕೊಪ್ಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಯಿತು. ನಂತರ ಮೆಣಸೂರು, ನಾಗಲಾಪುರ ಹಾಗೂ ಗುಬ್ಬಿಗಾ ಗ್ರಾಮ ಪಂಚಾಯಿತಿ ಮಟ್ಟದ ಸಭೆ ನಡೆಯಿತು.======================ಫೋಟೋ:- ೮ ಎನ್.ಆರ್.ಪಿ. ೧ ಎನ್.ಆರ್.ಪುರ ========================