ಭಾರತದ ಪ್ರಗತಿಗೆ ಮೋದಿ ಕೊಡುಗೆ ವಿಶ್ವಕ್ಕೇ ಮಾದರಿ : ಯಶ್ಪಾಲ್

KannadaprabhaNewsNetwork |  
Published : Sep 19, 2026, 02:30 AM IST
18ಮೋದಿ | Kannada Prabha

ಸಾರಾಂಶ

ನಗರ ಬಿಜೆಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಮಣಿಪಾಲ ಆರ್.ಎಸ್.ಬಿ. ಸಭಾಭವನದಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರವನ್ನು ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.

ಉಡುಪಿ: ನಗರ ಬಿಜೆಪಿ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಮಣಿಪಾಲ ಆರ್.ಎಸ್.ಬಿ. ಸಭಾಭವನದಲ್ಲಿ ಆಯೋಜಿಸಿದ್ದ ಬೃಹತ್ ರಕ್ತದಾನ ಶಿಬಿರವನ್ನು ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.

ನಂತರ ಮಾತನಾಡಿದ ಶಾಸಕರು, ನರೇಂದ್ರ ಮೋದಿ ಅವರು ಕಳೆದ 12 ವರ್ಗಗಳಿಂದ ಪ್ರಧಾನಿಯಾಗಿ ದೇಶಕ್ಕೆ ನೀಡಿದ ಕೊಡುಗೆಳು, ಅವರ ದಕ್ಷ ನಾಯಕತ್ವ, ದೃಢ ಸಂಕಲ್ಪಗಳು ವಿಶ್ವಕ್ಕೇ ಮಾದರಿಯಾಗಿದೆ, ಈ ರಕ್ತದಾನ ಶಿಬಿರದಲ್ಲಿ 500 ಕ್ಕೂ ಮಿಕ್ಕಿ ಯುವಜನರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿರುವುದು ಮೋದಿ ಬಗ್ಗೆ ಯುವ ಜನತೆಗಿರುವ ವಿಶ್ವಾಸಕ್ಕೆ ಸಾಕ್ಷಿ ಎಂದರು.

ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಹಾಗೂ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಶುಭ ಹಾರೈಸಿದರು.ರಕ್ತದಾನ ಶಿಬಿರದಲ್ಲಿ ಕಸ್ತೂರ್ಬಾ ಆಸ್ಪತ್ರೆ ಹಾಗೂ ಉಡುಪಿ ಜಿಲ್ಲಾ ಆಸ್ಪತ್ರೆ ರಕ್ತನಿಧಿ ವಿಭಾಗದ ಸಹಯೋಗದಲ್ಲಿ 518 ಯುನಿಟ್ ರಕ್ತ ಸಂಗ್ರಹಿಸಲಾಯಿತು.

ಮುಖಂಡರಾದ ಮಟ್ಟಾರು ರತ್ನಾಕರ ಹೆಗ್ಡೆ, ಉದಯ ಕುಮಾರ್ ಶೆಟ್ಟಿ ಕಿದಿಯೂರು, ಪ್ರಭಾಕರ ಪೂಜಾರಿ, ಕಿರಣ್ ಕುಮಾರ್ ಬೈಲೂರು, ಶಿಲ್ಪಾ ಸುವರ್ಣ, ರೇಷ್ಮಾ ಉದಯ ಶೆಟ್ಟಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು ಮತ್ತು ರಶ್ಮಿತಾ ಬಾಲಕೃಷ್ಣ ಶೆಟ್ಟಿ ಮುಂತಾದವವರು ಉಪಸ್ಥಿತರಿದ್ದರು. ಬೃಹತ್ ರಕ್ತದಾನ ಶಿಬಿರವನ್ನು ಶಾಸಕ ಯಶ್ ಪಾಲ್ ಸುವರ್ಣ ಉದ್ಘಾಟಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ರೀಡೆಯಿಂದ ದೈಹಿಕ, ಮಾನಸಿಕ ಬೆಳವಣಿಗೆ: ಶಿವಶೇಖರ್
ನಾಪೋಕ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 77.45 ಲಕ್ಷ ರು. ಲಾಭ