ದಾಖಲೆಯ 4339ನೇ ದಿನಗಳ ಆಡಳಿವನ್ನು ಪೂರೈಸಿದ, ಸತತವಾಗಿ 12 ವರ್ಷಗಳು ದೀರ್ಘಾವಧಿ ಪ್ರಧಾನಿ ಹುದ್ದೆ ನಿರ್ವಹಿಸಿದ ನರೇಂದ್ರ ದಾಮೋದರ ದಾಸ್ ಮೋದಿಯವರಿಗೆ ದೀರ್ಘಾಯುಷ್ಯ ಕೋರಿ ಬುಧವಾರ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಪರ್ಯಾಯ ಶ್ರೀ ಶೀರೂರು ಶ್ರೀ ಕೃಷ್ಣ ಮಠದ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀ ಪಾದರಿಂದ ಹಾಗೂ ಬಿಜೆಪಿ ಉಡುಪಿ ಜಿಲ್ಲೆ ವತಿಯಿಂದ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿದಾಖಲೆಯ 4339ನೇ ದಿನಗಳ ಆಡಳಿವನ್ನು ಪೂರೈಸಿದ, ಸತತವಾಗಿ 12 ವರ್ಷಗಳು ದೀರ್ಘಾವಧಿ ಪ್ರಧಾನಿ ಹುದ್ದೆ ನಿರ್ವಹಿಸಿದ ನರೇಂದ್ರ ದಾಮೋದರ ದಾಸ್ ಮೋದಿಯವರಿಗೆ ದೀರ್ಘಾಯುಷ್ಯ ಕೋರಿ ಬುಧವಾರ ಶ್ರೀ ಕೃಷ್ಣ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ ಪರ್ಯಾಯ ಶ್ರೀ ಶೀರೂರು ಶ್ರೀ ಕೃಷ್ಣ ಮಠದ ಶ್ರೀ ಶ್ರೀ ವೇದವರ್ಧನತೀರ್ಥ ಶ್ರೀ ಪಾದರಿಂದ ಹಾಗೂ ಬಿಜೆಪಿ ಉಡುಪಿ ಜಿಲ್ಲೆ ವತಿಯಿಂದ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಲಾಯಿತು.
ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ, ಬಿಜೆಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್, ಪ್ರಧಾನ ಕಾರ್ಯದರ್ಶಿಗಳಾದ ಶ್ರೀಕಾಂತ್ ನಾಯಕ್ ಮತ್ತು ದಿನಕರ ಶೆಟ್ಟಿ ಹೆರ್ಗ, ಜಿಲ್ಲಾ ವಕ್ತಾರರಾದ ಮಧುಕರ ಮುದ್ರಾಡಿ ಮತ್ತು ಸುಪ್ರಸಾದ್ ಶೆಟ್ಟಿ, ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಸಂಧ್ಯಾ ರಮೇಶ್, ಪ್ರಮುಖರಾದ ನಯನಾ ಗಣೇಶ್, ವೀಣಾ ಎಸ್. ಶೆಟ್ಟಿ, ಪ್ರಜ್ಞಾ ಶೆಟ್ಟಿ, ಪದ್ಮಾ ರತ್ನಾಕರ್, ಅಜಿತ್ ಪೈ, ಶಾಮ್ ಪ್ರಸಾದ್ ಕುಡ್ವ ಮತ್ತಿತರರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.