ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಹೆಮ್ಮೆಯ ಪ್ರಧಾನಸೇವಕರಾಗಿ 12 ವರ್ಷಗಳ ಕಾಲ ಯಶಸ್ವಿಯಾಗಿ ಕರ್ತವ್ಯ ನಿರ್ವಹಿಸಿ, 4399 ದಿನಗಳ ಸುದೀರ್ಘ ಆಡಳಿತದ ದಾಖಲೆ ನಿರ್ಮಿಸಿರುವ ಹಿನ್ನೆಲೆಯಲ್ಲಿ ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು, ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ, ಮೋದಿ ಅವರ ಆಯುರಾರೋಗ್ಯ ಹಾಗೂ ರಾಷ್ಟ್ರದ ಸಮೃದ್ಧಿಗಾಗಿ ವಿಶೇಷ ಪೂಜೆ ಸಲ್ಲಿಸಿದರು. ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ದೇವಸ್ಥಾನಗಳಲ್ಲಿಯೂ ಬಿಜೆಪಿ ಕಾರ್ಯಕರ್ತರು ಹಾಗೂ ಮುಖಂಡರು ವಿಶೇಷ ಪೂಜೆ ಸಲ್ಲಿಸಿ, ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯ ಮತ್ತು ದೇಶದ ಅಭಿವೃದ್ಧಿಗಾಗಿ ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಪಕ್ಷದ ಪದಾಧಿಕಾರಿಗಳು, ಪ್ರಮುಖರು, ಕಾರ್ಯಕರ್ತರು ಮತ್ತು ಭಕ್ತಾದಿಗಳು ಉಪಸ್ಥಿತರಿದ್ದು, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ಭಾರತ ಮತ್ತಷ್ಟು ಅಭಿವೃದ್ಧಿಯತ್ತ ಸಾಗಲೆಂದು ಪ್ರಾರ್ಥಿಸಿದರು.