ದೇಶದ ಭದ್ರತೆಗಾಗಿ ಮೋದಿ ಪ್ರಧಾನಿಯಾಗಬೇಕು: ಹುಲಿಕೆರೆ ಸಂಪತ್ ಕುಮಾರ್

KannadaprabhaNewsNetwork |  
Published : Apr 21, 2024, 02:31 AM IST
20ಎಚ್ಎಸ್ಎನ್12 : ಹಾಸನ ಲೋಕಸಭಾ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಜಂಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಮಂಚೇನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚಿಸಿದರು. ಕೃಷಿ ಪತ್ತಿನ ನಿರ್ದೇಶಕ ಹುಲಿಕೆರೆ ಸಂಪತ್ ಕುಮಾರ್, ಹಿರಿಯಣ್ಣ ಗೌಡ, ಜಂಬೂರ್ ಮಹೇಶ್, ಪಾಲ್ಗೊಂಡಿದ್ದರು. | Kannada Prabha

ಸಾರಾಂಶ

ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ನುಗ್ಗೇಹಳ್ಳಿಯ ಜಂಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ತೆರಳಿ ಮತಯಾಚನೆ ನಡೆಸಿ ಮಾತನಾಡಿದರು.

ಪ್ರಜ್ವಲ್ ರೇವಣ್ಣ ಪರ ಜೆಡಿಎಸ್ ಮುಖಂಡರಿಂದ ಮತಯಾಚನೆ । ಜಂಬೂರು ಗ್ರಾಪಂ ವ್ಯಾಪ್ತಿ ಹಳ್ಳಿಗಳಲ್ಲಿ ಪ್ರಚಾರ

ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ

ದೇಶದ ಭದ್ರತೆ ದೃಷ್ಟಿಯಿಂದ ಕೇಂದ್ರದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರು ಪ್ರಧಾನಿಯಾಗಬೇಕು ಜಿಲ್ಲೆಯಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಅವರು ಸ್ಪರ್ಧೆ ಮಾಡಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಮತ್ತು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರ ಕೈ ಬಲಪಡಿಸಲು ಪ್ರಜ್ವಲ್ ರೇವಣ್ಣ ಅವರನ್ನು ಮತ್ತೊಮ್ಮೆ ಗೆಲ್ಲಿಸಬೇಕು ಎಂದು ನುಗ್ಗೇಹಳ್ಳಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಹುಲಿಕೆರೆ ಸಂಪತ್ ಕುಮಾರ್ ಹೇಳಿದರು.

ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ನುಗ್ಗೇಹಳ್ಳಿಯ ಜಂಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ತೆರಳಿ ಮತಯಾಚನೆ ನಡೆಸಿ ಮಾತನಾಡಿದರು.ಹಾಸನ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಜಂಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ತೆರಳಿ ಮತಯಾಚನೆ ನಡೆಸಿ ಮಾತನಾಡಿದರು.

ತಾಲೂಕಿನಲ್ಲಿ ಕ್ಷೇತ್ರದ ಶಾಸಕ ಸಿ.ಎನ್ ಬಾಲಕೃಷ್ಣ ನೀರಾವರಿ ಯೋಜನೆ ಸಹಕಾರ ಕ್ಷೇತ್ರ ಕೃಷಿ ಕ್ಷೇತ್ರ ಸೇರದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ್ದಾರೆ. ಜಂಬೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಳ್ಳಿಗಳಲ್ಲಿ ರಸ್ತೆ ಕುಡಿಯುವ ನೀರು ಸಮುದಾಯ ಭವನ ನಿರ್ಮಾಣ ಶಾಲಾ ಕಟ್ಟಡಗಳ ದುರಸ್ತಿಗೆ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಅನುದಾನ ನೀಡಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ತಾಲೂಕಿನ ಅಭಿವೃದ್ಧಿ ದೃಷ್ಟಿಯಿಂದ ಪ್ರಜ್ವಲ್ ರೇವಣ್ಣ ಅವರಿಗೆ ಹೆಚ್ಚಿನ ಮತ ನೀಡುವ ಮೂಲಕ ಮತ್ತೊಮ್ಮೆ ಸಂಸದರಾಗಿ ಆಯ್ಕೆಯಾಗಲು ಮತದಾರರು ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.

ಗ್ರಾಪಂ ವ್ಯಾಪ್ತಿಯ ಮಂಚೇನಹಳ್ಳಿ ಜಂಬೂರು ಕಾಲೋನಿ ತೆಂಕನಹಳ್ಳಿ ಗ್ರಾಮಗಳಲ್ಲಿ ಜೆಡಿಎಸ್ ಕಾರ್ಯಕರ್ತರು, ಮುಖಂಡರು ಮತಯಾಚಿಸಿದರು.

ಗ್ರಾಮ ಪಂಚಾಯಿತಿ ಸದಸ್ಯ ಅತ್ತಿಹಳ್ಳಿ ಹಿರಿಯಣ್ಣ ಗೌಡ, ಜಂಬೂರು ಜೆಡಿಎಸ್ ಯುವ ಮುಖಂಡ ಮಹೇಶ್, ಮುಖಂಡರಾದ ಡಿಶ್ ನಾಗಣ್ಣ, ನಾಗೇಂದ್ರ, ಅತ್ತಿಹಳ್ಳಿ ಮಹೇಶ್, ಮಂಜೇಗೌಡ, ದಿನೇಶ್, ಸಂದೀಪ್, ಅಣ್ಣಪ್ಪ, ಮಂಜೇಗೌಡ ದೇವರಾಜ್, ಪ್ರದೀಪ್, ಮಹೇಶ್, ರಮೇಶ್, ಇತರರು ಹಾಜರಿದ್ದರು.

ಹಾಸನ ಜಂಬೂರು ಗ್ರಾಪಂ ವ್ಯಾಪ್ತಿಯ ಮಂಚೇನಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು ಮನೆ ಮನೆಗೆ ತೆರಳಿ ಪ್ರಜ್ವಲ್‌ ರೇವಣ್ಣ ಪರ ಮತಯಾಚಿಸಿದರು. ಕೃಷಿ ಪತ್ತಿನ ನಿರ್ದೇಶಕ ಹುಲಿಕೆರೆ ಸಂಪತ್ ಕುಮಾರ್, ಹಿರಿಯಣ್ಣ ಗೌಡ, ಜಂಬೂರ್ ಮಹೇಶ್ ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ