ಬೆಂಗಳೂರಿಗೆ ಇಂದು ಮೋದಿ: ಬೋಯಿಂಗ್‌ ಕೇಂದ್ರ ಉದ್ಘಾಟನೆ

KannadaprabhaNewsNetwork |  
Published : Jan 19, 2024, 01:45 AM IST
ಮೋದಿ | Kannada Prabha

ಸಾರಾಂಶ

ಕಲಬುರಗಿಗೆ ಬಂದು, ಸೊಲ್ಲಾಪುರಕ್ಕೆ ತೆರಳಿ ಬಳಿಕ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸಲಿದ್ದಾರೆ. ಇಲ್ಲಿನ ಬೋಯಿಂಗ್‌ ಕೇಂದ್ರವನ್ನು ಉದ್ಘಾಟನೆ ಮಾಡಲಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಂಗಳೂರು

ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಾಜ್ಯಕ್ಕೆ ಆಗಮಿಸುತ್ತಿದ್ದು, ಬೆಂಗಳೂರಿನ ದೇವನಹಳ್ಳಿ ಬಳಿಯ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರದ (ಬಿಐಇಟಿಸಿ) ಉದ್ಘಾಟನೆ ಹಾಗೂ ವಿಮಾನಯಾನ ಕ್ಷೇತ್ರದಲ್ಲಿ ಮಹಿಳೆಯರಿಗೆ ಉತ್ತೇಜನ ನೀಡುವ ‘ಬೋಯಿಂಗ್ ಸುಕನ್ಯಾ’ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಶುಕ್ರವಾರ ಬೆಳಗ್ಗೆ 9.35ಕ್ಕೆ ದೆಹಲಿಯಿಂದ ಕಲಬುರಗಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ಮೋದಿ ಅವರು, ಹೆಲಿಕಾಪ್ಟರ್‌ ಮೂಲಕ ಮಹಾರಾಷ್ಟ್ರದ ಸೊಲ್ಲಾಪುರದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಲಿದ್ದಾರೆ. ಅಲ್ಲಿಂದ ವಾಪಸಾಗಿ ಮಧ್ಯಾಹ್ನ 1 ಗಂಟೆಗೆ ವಿಶೇಷ ವಿಮಾನ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ. ಮಧ್ಯಾಹ್ನ 2.10ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಅಲ್ಲಿಂದ ದೇವನಹಳ್ಳಿ ತಾಲೂಕಿನ ಭಟ್ಟರಮಾರನಹಳ್ಳಿಗೆ ತೆರಳಿ ಅಲ್ಲಿ ಬಿಐಇಟಿಸಿ ಉದ್ಘಾಟನೆ ಮಾಡಲಿದ್ದಾರೆ. ಕಾರ್ಯಕ್ರಮ ಮುಗಿಸಿ ಮಧ್ಯಾಹ್ನ 3.45ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಲಿದ್ದಾರೆ. ಸಂಜೆ 4 ಗಂಟೆಗೆ ಚೆನ್ನೈಗೆ ಪ್ರಯಾಣಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

‘ಜಾಹೀರಾತಲ್ಲಿ ಗಾಂಧೀಜಿ ಬಳಕೆ ಗಾಂಧೀಜಿಯರ ಮೌಲ್ಯಗಳ ಹತ್ಯೆ’
ಅರೈ ಘಟಕಕ್ಕಾಗಿ ಮಂಡ್ಯದಲ್ಲೇ 100 ಎಕ್ರೆ ಕೊಡಿ: ಎಚ್‌ಡಿಕೆ ಪತ್ರ