ಕೊಟ್ಟೂರು: ಪ್ರಧಾನಿ ನರೇಂದ್ರ ಮೋದಿಯವರ ಅಲೆ ರಾಜ್ಯದಲ್ಲಿ ವ್ಯಾಪಕವಾಗಿ ಕಾಣಿಸಿಕೊಳ್ಳತೊಡಗಿದೆ. ಅಲ್ಲದೇ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಂಪೂರ್ಣವಾಗಿ ವಿಫಲವಾಗಿದ್ದು, ಇದರ ಪರಿಣಾಮ ಮತದಾರರು ಬಿಜೆಪಿಯತ್ತ ವಾಲಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ತಿಳಿಸಿದರು.
ನಾನು ಸ್ಪರ್ಧಾಕಾಂಕ್ಷಿಯಾಗಿದ್ದರೂ ಹಾಲಿ ಸಂಸದ ದೇವೇಂದ್ರಪ್ಪ ಅವರಿಗೆ ಪಕ್ಷ ಸ್ಪರ್ಧಿಸಲು ಅವಕಾಶ ನೀಡಿದರೆ ಅವರ ಪರವಾಗಿ ಪ್ರಚಾರ ಕೈಗೊಂಡು ಬಿಜೆಪಿ ಗೆಲುವಿಗೆ ಶ್ರಮಿಸುವೆ ಎಂದರು.
ಲೋಕಸಭಾ ಚುನಾವಣೆಗೆ ಜೆಡಿಎಸ್ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ಹೊಂದಿದ್ದೇವೆ ಎಂದರು.ಕೊಟ್ಟೂರು ಬಿಜೆಪಿ ಘಟಕಾಧ್ಯಕ್ಷ ಭರಮನಗೌಡ ಪಾಟೀಲ್, ಹರೀಶ್‌ಗೌಡ, ಪಪಂ ಸದಸ್ಯರಾದ ಮರಬದ ಕೊಟ್ರೇಶ್, ಸಿದ್ದಯ್ಯ, ಕೆಂಗರಾಜ್, ಚಂದ್ರು ಜಂಬೂರು, ಅಂಗಡಿ ಪಂಪಾಪತಿ, ಪ್ರಜ್ವಲ್, ಪ್ರಶಾಂತ, ಅಭಿಷೇಕ್ ಮತ್ತಿತರರು ಇದ್ದರು.