ಪ್ರಧಾನಿ ನರೇಂದ್ರ ಮೋದಿಜಿ ಅವರು ದೇಶದ ಸಮಗ್ರ ಅಭಿವೃದ್ಧಿಗೆ ತಮ್ಮದೇ ಆದ ಆಡಳಿತ ವೈಖರಿಯ ಮೂಲಕ ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಹಿರೇಕೆರೂರು: ಪ್ರಧಾನಿ ನರೇಂದ್ರ ಮೋದಿಜಿ ಅವರು ದೇಶದ ಸಮಗ್ರ ಅಭಿವೃದ್ಧಿಗೆ ತಮ್ಮದೇ ಆದ ಆಡಳಿತ ವೈಖರಿಯ ಮೂಲಕ ದೇಶವನ್ನು ಸಮರ್ಥವಾಗಿ ಮುನ್ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಪ್ರಧಾನಿ ನರೇಂದ್ರ ಮೋದಿರವರ 76ನೇ ಹುಟ್ಟು ಹಬ್ಬದ ನಿಮಿತ್ತ ಸೇವಾ ಸಂಕಲ್ಪ ಅಭಿಯಾನದ ಪ್ರಯುಕ್ತ ಪಟ್ಟಣದ ಸರ್ವಜ್ಞ ವೃತ್ತದಲ್ಲಿ ಬಿಜೆಪಿ ಯುವ ಮೋರ್ಚಾ ಹಾಗೂ ನಮೋ ಭಾರತ ಸಂಯುಕ್ತ ಆಶ್ರಯದಲ್ಲಿ ಸತತ ಒಂಬತ್ತನೇ ಬಾರಿಗೆ ಆಯೋಜಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ದೇಶದ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆಗಳಿಗೆ ನರೇಂದ್ರ ಮೋದಿ ಕಾರಣಿಭೂತರಾಗಿದ್ದಾರೆ. ಅವರ ಹುಟ್ಟುಹಬ್ಬವನ್ನು ಸಾಮಾಜಿಕ ಕಾರ್ಯಗಳ ಮೂಲಕ ಆಚರಿಸುವ ಮೂಲಕ ಈ ಸಮಾಜಕ್ಕೆ ಉತ್ತಮ ಸಂದೇಶವನ್ನು ನೀಡುವ ಕಾರ್ಯವನ್ನು ನಾವೆಲ್ಲರೂ ಮಾಡಬೇಕು, ರಕ್ತದಾನ ಜೀವದಾನವಾಗಿದೆ. ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಬೇಕು ಎಂದರು.
ಬಿಜೆಪಿ ತಾಲೂಕು ಯುವ ಮೋರ್ಚಾ ಅಧ್ಯಕ್ಷ ಜಗದೀಶ ದೊಡ್ಡಗೌಡ್ರ ಮಾತನಾಡಿ, ದೇಶಕ್ಕಾಗಿ ಸ್ವಾರ್ಥವನ್ನು ಮರೆತು ಹಗಲಿರುಳು ಕಾರ್ಯನಿರ್ವಹಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಯುವಕರ ಕಣ್ಮಿಣಿಯಾಗಿದ್ದಾರೆ. ಅವರ ಜನ್ಮದಿನದ ಅಂಗವಾಗಿ ನಾವೆಲ್ಲರೂ ಸೇರಿ ರಕ್ತದಾನವನ್ನು ಮಾಡುವ ಮೂಲಕ ಸಣ್ಣದೊಂದು ಸೇವಾ ಕಾರ್ಯವನ್ನು ನಾವು ಮಾಡುತ್ತಿದ್ದೇವೆ ಎಂದರು.
ಶಿಬಿರದಲ್ಲಿ 85 ಜನ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು. 350 ಜನ ರಕ್ತ ತಪಾಸಣೆ ಮಾಡಿಸಿಕೊಂಡರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.