ಚನ್ನಪಟ್ಟಣ: ನಾನು ನನ್ನ ಕೊನೆ ಉಸಿರು ಎಳೆಯುವ ಮುನ್ನ ಮೇಕೆದಾಟು ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರಿಂದ ಒಪ್ಪಿಗೆ ಕೊಡಿಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಘೋಷಣೆ ಮಾಡಿದರು.
ನಾನು ಇಗ್ಗಲೂರು ಆಣೆಕಟ್ಟು ಕಟ್ಟಿದ್ದು ದೊಡ್ಡ ವಿಷಯ ಅಲ್ಲ. ನಾನು ಪ್ರಧಾನಿ ಆಗಿದ್ದು ದೈವದ ಆಟ. ಮೇಕೆದಾಟು ಯೋಜನೆ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ನಾನು ಅವರಿಗೆ ಮನವಿ ಮಾಡುತ್ತೇನೆ. ವಾಸ್ತವ ಸ್ಥಿತಿಯನ್ನು ಮನವರಿಕೆ ಮಾಡಿಕೊಡುತ್ತೇನೆ. ಈಗಾಗಲೇ ಹಲವಾರು ಸಲ ಅವರು ನನ್ನ ಮನವಿ ಆಲಿಸಿದ್ದಾರೆ ಎಂದು ಹೇಳಿದರು.
ಆರು ತಿಂಗಳಿಂದ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನಾನೇ ಅಭ್ಯರ್ಥಿ ಅಂದರು. ರಾಜ್ಯದ ಮಾನ ಮಾರ್ಯಾದೆಯನ್ನು ತೀರಾ ಕೆಳಮಟ್ಟಕ್ಕೆ ತೆಗೆದುಕೊಂಡು ಹೋದರು. 55 ವರ್ಷದಿಂದ ಚನ್ನಪಟ್ಟಣದಲ್ಲಿ ನಾನು ಸಂಘಟನೆ ಮಾಡಿದ್ದೇನೆ. ನಾನು ಕಡಿಮೆ ದರದಲ್ಲಿ ಪಡಿತರ ನೀಡಿದ್ದೇನೆ. ಅದನ್ನು ಸಿದ್ದರಾಮಯ್ಯ ಬಳಿ ನೀವು ಕೇಳಿ. ಆಲಮಟ್ಟಿ, ಹಾರಂಗಿ, ಹೇಮಾವತಿ, ಯಗಚಿ ಅಣೆಕಟ್ಟು ಕಟ್ಟಿದವರು ಯಾರು? ಬರೀ ಇಗ್ಗಲೂರು ಡ್ಯಾಮ್ ಅಷ್ಟೇ ಅಲ್ಲ. ನಿಮ್ಮನ್ನು ನಾನು ನೋಡುತ್ತಿದ್ದರೆ 92 ವರ್ಷದ ನನಗೆ 18ರ ಶಕ್ತಿ ಬರುತ್ತದೆ. ಇನ್ನೂ ನಾಲ್ಕಾರು ವರ್ಷ ಬದುಕಿರುತ್ತೇನೆ ಎಂದರು .ವೇರ್ ಇಸ್ ಡಿಕೆ, ವೇರ್ ಇಸ್ ಎಚ್ ಡಿಕೆ, ವೇರ್ ಇಸ್ ಕುಮಾರಣ್ಣ, ವೇರ್ ಇಸ್ ಡಿಕೆ. ಹಿಮಾಲಯ ಪರ್ವತಕ್ಕೂ ಇಲ್ಲಿನ ಸಣ್ಣ ಗುಡ್ಡಕ್ಕೂ ಎಲ್ಲಿಯ ಹೊಲಿಕೆ. ಒಂದು ಶಾಲೆ ಮಾಡಲು ಜಾಗ ಕೇಳಿದರೆ ದುಡ್ಡು ದುಡ್ಡು ಅಂತಾರೆ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಹರಿಹಾಯ್ದರು.
ನಿಖಿಲ್ ನನ್ನು ನಾನೇ ರಾಜ್ಯ ನಾಯಕನನ್ನಾಗಿ ಮಾಡುತ್ತೇನೆ. ಆ ಕಾಲ ಬರಲಿದೆ. ಅವನನ್ನು ದೊಡ್ಡ ನಾಯಕನನ್ನಾಗಿ ರೂಪಿಸುತ್ತೇನೆ ಎಂದು ದೇವೆಗೌಡರು ಹೇಳಿದರು.ಕಣ್ಣೀರನ್ನು ಅಣಕಿಸಬಾರದು: ನಟಿ ತಾರಾ
ಚನ್ನಪಟ್ಟಣ: ಯಾರಾದರೂ ಕಣ್ಣೀರು ಹಾಕಿದರೆ ಅಣಕಿಸಬಾರದು. ತಾಯಿ ಭಾವನೆ ಇದ್ದವರಿಗೆ ಮಾತ್ರ ಕಣ್ಣೀರು ಬರುತ್ತದೆ. ಏನೂ ಟೀಕೆ ಮಾಡಬಾರದು ಎಂದು ಬಿಜೆಪಿ ನಾಯಕಿ ಹಾಗೂ ನಟಿ ತಾರಾ ಹೇಳಿದರು.ದೇವೇಗೌಡರ ಜತೆ ನಿಲಸಂದ್ರದಲ್ಲಿ ನಿಖಿಲ್ ಪರ ಪ್ರಚಾರ ಮಾಡಿದ ತಾರಾ, ಮಾತೃ ಹೃದಯ ಇದ್ದವರಿಗೆ ಮಾತ್ರ ಕಣ್ಣೀರು ಬರುತ್ತದೆ. ಅಭಿವೃದ್ಧಿ ಬಗ್ಗೆ ಮಾತಾಡಿದರೆ ಬಹಳ ಮಾತಾಡಬಹುದು. ಎಲ್ಲರಿಗೂ ಒಂದು ಅವಕಾಶ ಕೊಟ್ಟಿದ್ದೀರಿ. ನಿಖಿಲ್ ಕುಮಾರಸ್ವಾಮಿಗೆ ಒಂದು ಅವಕಾಶ ಕೊಡಿ. ಈ ಕ್ಷೇತ್ರಕ್ಕೆ ದೇವೆಗೌಡರು, ಕುಮಾರಸ್ವಾಮಿ ಏನ್ ಮಾಡಿದ್ದಾರೆ ಅಂತ ನೆನಪು ಮಾಡಿಕೊಳ್ಳಿ. ನೂರಾರು ಕೆರೆ ತುಂಬಿದವರು ಕುಮಾರಸ್ವಾಮಿ. ಆದರೆ, ಯಾರೋ ಕೆರೆ ತುಂಬಿಸಿದವರು ಅಂತಾರೆ. ಇದು ಸರಿಯಲ್ಲ ಎಂದು ತಾರಾ ಹೇಳಿದರು.
7ಕೆಆರ್ ಎಂಎನ್ 8.ಜೆಪಿಜಿಚನ್ನಪಟ್ಟಣ ಕ್ಷೇತ್ರದ ಹೊಡಿಕೆಹೊಸಹಳ್ಳಿ ಗ್ರಾಮದಲ್ಲಿ ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರ ಮತಯಾಚನೆ ಮಾಡುವ ವೇಳೆ ಮಾಜಿ ಪ್ರಧಾನಿ ದೇವೇಗೌಡ ಮಾತನಾಡಿದರು.