ಇಲ್ಲಿನ ಭಾರತೀಯ ವಿಕಾಸ ಟ್ರಸ್ಟಿನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮೋಹನ ಭಾಸ್ಕರ ಹೆಗಡೆ ಅಧಿಕಾರ ಸ್ವೀಕರಿಸಿದ್ದಾರೆ.
ಮಣಿಪಾಲ: ಇಲ್ಲಿನ ಭಾರತೀಯ ವಿಕಾಸ ಟ್ರಸ್ಟಿನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಮೋಹನ ಭಾಸ್ಕರ ಹೆಗಡೆ ಅಧಿಕಾರ ಸ್ವೀಕರಿಸಿದ್ದಾರೆ.
ಈ ಸಂದರ್ಭ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಬಿವಿಟಿ ಆಡಳಿತ ಟ್ರಸ್ಟಿ ವಿನುತಾ ಆಚಾರ್ಯ ನೂತನ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಅಧಿಕಾರ ವಹಿಸಿಕೊಂಡ ಮೋಹನ ಭಾಸ್ಕರ ಹೆಗಡೆ ಅವರನ್ನು ಸಂಸ್ಥೆಗೆ ಸ್ವಾಗತಿಸಿ, ಗ್ರಾಮೀಣ ಅಭಿವೃದ್ಧಿ ಕ್ಷೇತ್ರದಲ್ಲಿ ಮೂರು ದಶಕಗಳ ಅನುಭವ ಹೊಂದಿರುವ ಮೋಹನ ಹೆಗಡೆಯವರ ನೇತೃತ್ವದಲ್ಲಿ ಸಂಸ್ಥೆಯ ಚಟುವಟಿಕೆಗಳು ಇನ್ನಷ್ಟು ವಿಸ್ತಾರಗೊಳ್ಳಲಿ ಎಂಬ ಆಶಯ ವ್ಯಕ್ತಪಡಿಸಿದರು. ಭಾರತೀಯ ವಿಕಾಸ ಟ್ರಸ್ಟಿನ ಹಿರಿಯ ಸಲಹೆಗಾರ ಜಗದೀಶ್ ಪೈ ಮಾತನಾಡಿ, ಬಿವಿಟಿಯ ಅಭಿವೃದ್ಧಿಯ ಪಯಣದಲ್ಲಿ ಎಲ್ಲ ಹಿತೈಷಿಗಳು ಹಾಗೂ ಸಿಬ್ಬಂದಿಯ ಸಹಕಾರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಮೊಹನ ಹೆಗಡೆ ಅವರ ನೇತೃತ್ವ ಸಿಬ್ಬಂದಿಗಳಲ್ಲಿ ಹೆಚ್ಚಿನ ಉತ್ಸಾಹ ತುಂಬಿದೆ ಎಂದು ಹೇಳಿದರು.
ಅತಿಥಿಗಳಾಗಿ ಸೆಲ್ಕೋ ಸಂಸ್ಥೆಯ ನಿವೃತ್ತ ಅಧಿಕಾರಿಗಳಾದ ಸುಧೀರ್ ಕುಲಕರ್ಣಿ ಹಾಗೂ ಸುರೇಶ್ ಸಾವಳಗಿ ಶುಭ ಹಾರೈಸಿದರು. ಈ ಸಂದರ್ಭ ಮಾತನಾಡಿದ ಮೋಹನ ಭಾಸ್ಕರ ಹೆಗಡೆ, ಸುದೀರ್ಘ ಇತಿಹಾಸ ಹೊಂದಿರುವ ಭಾರತೀಯ ವಿಕಾಸ ಟ್ರಸ್ಟ್ ತರಬೇತಿ, ಕೃಷಿ ಪ್ರಯೋಗ, ಮಹಿಳಾ ಸಬಲೀಕರಣ ಮತ್ತು ಯುವ ಜನತೆಯ ಸ್ವಾವಲಂಬನೆಯಲ್ಲಿ ಗಮನಾರ್ಹ ಕಾಯಕ ಮಾಡಬೇಕಿದೆ ಹಾಗೂ ನಮ್ಮ ನಂತರ ನೂರಾರು ಮಹತ್ವದ ಜ್ಞಾನವನ್ನು ಮುಂದಿನ ತಲೆಮಾರಿಗೆ ವರ್ಗಾವಣೆ ಮಾಡುವ ಪ್ರಯತ್ನ ಮಾಡಬೇಕಾಗಿದೆ. ಇದಕ್ಕೆ ಅಧುನಿಕ ತಂತ್ರಜ್ಞಾನಾಧಾರಿತ ವ್ಯವಸ್ಥೆ ಆಳವಡಿಸಿ ಕಾಯಕ ರೂಪಿಸುತ್ತೇವೆ ಎಂದು ಅಭಿಪ್ರಾಯಪಟ್ಟರು. ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕಿ ಪ್ರತಿಮಾ ನಿರೂಪಿಸಿದರು. ಹಣಕಾಸು ವಿಭಾಗದ ಹಿರಿಯ ವ್ಯವಸ್ಥಾಪಕ ಕೃಷ್ಣದಾಸ್ ವಂದಿಸಿದರು. ಈ ಸಂದರ್ಭದಲ್ಲಿ ಬಿವಿಟಿಯ ಸಿಬ್ಬಂದಿ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.