ದೆಹಲಿ ಪ್ರತಿಭಟನಾಕಾರರ ಮೇಲೆ ಲಾಠಿಚಾರ್ಜ್ ಖಂಡನೀಯ: ಮೊಳಹಳ್ಳಿ ದಿನೇಶ್ ಹೆಗ್ಡೆ

KannadaprabhaNewsNetwork |  
Published : Jul 22, 2026, 02:45 AM IST
20ದಿನೇಶ್‌ | Kannada Prabha

ಸಾರಾಂಶ

ನವದೆಹಲಿಯ ಜಂತರ್ ಮಂತರ್‌ನಿಂದ ಸಂಸತ್‌ ಕಡೆಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದು ಅತ್ಯಂತ ಖಂಡನೀಯ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದ ನಡೆ ಎಂದು ಕಾಂಗ್ರೆಸ್ ಮುಖಂಡ ಮೊಳಹಳ್ಳಿ ದಿನೇಶ್ ಹೆಗ್ಡೆ ತೀವ್ರವಾಗಿ ಖಂಡಿಸಿದ್ದಾರೆ.

ಕುಂದಾಪುರ: ನವದೆಹಲಿಯ ಜಂತರ್ ಮಂತರ್‌ನಿಂದ ಸಂಸತ್‌ ಕಡೆಗೆ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದು ಅತ್ಯಂತ ಖಂಡನೀಯ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದ ನಡೆ ಎಂದು ಕಾಂಗ್ರೆಸ್ ಮುಖಂಡ ಮೊಳಹಳ್ಳಿ ದಿನೇಶ್ ಹೆಗ್ಡೆ ತೀವ್ರವಾಗಿ ಖಂಡಿಸಿದ್ದಾರೆ.

ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಹಕ್ಕು ನೀಡಿದೆ. ಜನರ ಧ್ವನಿಯನ್ನು ಆಲಿಸುವ ಬದಲು ಬಲ ಪ್ರಯೋಗ ಮೂಲಕ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ಪ್ರಜಾಪ್ರಭುತ್ವದ ಆತ್ಮಕ್ಕೇ ಧಕ್ಕೆ ತರುವಂತದ್ದು ಎಂದು ತಿಳಿಸಿದ್ದಾರೆ.

ಪ್ರತಿಭಟನಾಕಾರರು ಪ್ರಜಾಪ್ರಭುತ್ವದ ಚೌಕಟ್ಟಿನೊಳಗೆ ತಮ್ಮ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರಲು ಪ್ರಯತ್ನಿಸುತ್ತಿದ್ದ ಸಂದರ್ಭದಲ್ಲಿ ಅವರೊಂದಿಗೆ ಸಂವಾದ ನಡೆಸುವ ಬದಲು ಲಾಠಿ ಚಾರ್ಜ್ ನಡೆಸಿರುವುದು ಕೇಂದ್ರ ಸರ್ಕಾರದ ಅಸಹಿಷ್ಣು ಮನೋಭಾವವನ್ನು ಬಯಲಿಗೆಳೆಯುತ್ತದೆ ಎಂದು ಅವರು ಆರೋಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪೆರ್ಣಂಕಿಲ ಕ್ಷೇತ್ರದ ಮಹಾರಥ, ಅಂಗಣ ಚಪ್ಪರಕ್ಕೆ ಮುಹೂರ್ತ
ಶಿರ್ವ ಎಂಎಸ್ಆರ್‌ಎಸ್ ಕಾಲೇಜ್‌: ಓರಿಯೆಂಟೇಶನ್ ಕಾರ್ಯಕ್ರಮ